ಕುದ್ರೋಳಿ–ಕಟ್ಟೆಮಾರು ರಸ್ತೆ ಅಭಿವೃದ್ಧಿಗೆ ಹೆಜ್ಜೆ: ಶಾಸಕ ವೇದವ್ಯಾಸ ಕಾಮತ್

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ

Spread the love

ಮಂಗಳೂರು: ನಗರದ ಕೊಡಿಯಲ್‌ಬೈಲ್‌ನಲ್ಲಿರುವ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದಿಂದ ಕಟ್ಟೆಮಾರುವರೆಗೆ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳುವ ಸಂಬಂಧ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳ ವಿಶೇಷ ಸಭೆಯು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ನಡೆಯಿತು.

ಈ ರಸ್ತೆ ವಿಸ್ತರಣೆಗೆ ಸ್ಥಳೀಯ ನಾಗರಿಕರ ಹಲವು ವರ್ಷಗಳ ಬೇಡಿಕೆ ಆಗಿದ್ದು, ಹಿಂದಿನ ಹಲವು ಜನಪ್ರತಿನಿಧಿಗಳು ಪ್ರಯತ್ನಿಸಿದರೂ, ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ರಸ್ತೆ ವಿಸ್ತರಣೆಯಿಂದ ಸಾರ್ವಜನಿಕ ಸಂಚಾರ ಸುಗಮವಾಗುವುದರ ಜತೆಗೆ ಸುತ್ತಲಿನ ನಿವಾಸಿಗಳು ಹಾಗೂ ಭಕ್ತರಿಗೆ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ನಗರದ ಬೆಳವಣಿಗೆ ಹಾಗೂ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆಯನ್ನು ಗಮನಿಸಿದರೆ ರಸ್ತೆ ಅಗಲೀಕರಣ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟಿಡಿಆರ್ (ಟ್ರಾನ್ಸ್‌ಫರಬಲ್ ಡೆವಲಪ್‌ಮೆಂಟ್ ರೈಟ್ಸ್) ಮೂಲಕ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಲ್ಲಿಸಿದ್ದ ಮನವಿಗೆ ದೇವಸ್ಥಾನದ ಆಡಳಿತ ಸಮಿತಿ ಸಕಾರಾತ್ಮಕವಾಗಿ ಸ್ಪಂದಿಸಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದರು.

ನಿಯಮಾನುಸಾರ ಟಿಡಿಆರ್ ಪ್ರಕ್ರಿಯೆ ಜಾರಿಗೊಳಿಸುವುದರೊಂದಿಗೆ ಯಾವುದೇ ಗೊಂದಲಕ್ಕೆ ಅವಕಾಶ ನೀಡದಂತೆ, ಎಲ್ಲ ಸಂಬಂಧಪಟ್ಟವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಉಪ ಆಯುಕ್ತ ನರೇಶ್ ಶೆಣೈ, ನಿಕಟಪೂರ್ವ ಪಾಲಿಕೆ ಸದಸ್ಯರಾದ ಲೀಲಾವತಿ ಪ್ರಕಾಶ್ ಹಾಗೂ ಕಾವ್ಯ ನಟರಾಜ್ ಆಳ್ವ, ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಗಣೇಶ್ ಕುಂಟಲ್ಪಾಡಿ, ಆಡಳಿತ ಮೊಕ್ತೇಸರ ವಿಶ್ವನಾಥ್ ಮಂಕಿಸ್ಟ್ಯಾಂಡ್, ಪ್ರಧಾನ ಕಾರ್ಯದರ್ಶಿ ಸುಧೀರ್, ಕೋಶಾಧಿಕಾರಿ ಲೋಕೇಶ್ ಬೋಳಾರ್, ಮೊಕ್ತೇಸರರಾದ ಸುಜನ್ ದಾಸ್ ಕುಡುಪು ಹಾಗೂ ರವೀಂದ್ರ ಕೆ., ಉಪಾಧ್ಯಕ್ಷ ಉದಯಕುಮಾರ್ ಕುಡುಪು, ಮಹಿಳಾ ಸಮಿತಿಯ ಜಾಸ್ಮಿನ್ ಸುಜನ್ ದಾಸ್ ಸೇರಿದಂತೆ ಪಾಲಿಕೆ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಇದ್ದರು.

ಹೈಲೈಟ್ಸ್

ಕುದ್ರೋಳಿ–ಕಟ್ಟೆಮಾರು ರಸ್ತೆ ವಿಸ್ತರಣಗೆ ಕುರಿತ ಚರ್ಚೆ
ದೇವಸ್ಥಾನ ಆಡಳಿತದಿಂದ ಸಕಾರಾತ್ಮಕ ಸ್ಪಂದನೆ
ಟಿಡಿಆರ್ ಮೂಲಕ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚನೆ

Leave a Reply

Your email address will not be published. Required fields are marked *