ಮಕ್ಕಳ ಹಕ್ಕುಗಳ ಆಯೋಗಕ್ಕೆ ಅನರ್ಹರ ನೇಮಕ: ರೆನ್ನಿ ಡಿಸೋಜ ತೀವ್ರ ಆಕ್ರೋಶ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಮಂಗಳೂರು: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಕೆಲವರು ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸಿಲ್ಲ. ಆದ್ದರಿಂದ ಸರ್ಕಾರ ತಕ್ಷಣ ನೇಮಕಾತಿ ಅಧಿಸೂಚನೆ ಹಿಂಪಡೆದು, ಕಾನೂನುಬದ್ಧ ಅರ್ಹತೆ ಹಾಗೂ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅನುಭವ ಹೊಂದಿರುವವರನ್ನು ನೇಮಕ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಕ್ಕಳ ಹಕ್ಕುಗಳ ಕುರಿತು ಕಾರ್ಯನಿರ್ವಹಿಸುವ ಸಮಾನಾಸಕ್ತ ಸಂಘಟನೆಗಳು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿವೆ.

<

ಪಡಿ ಸಂಸ್ಥೆಯ ಸಂಚಾಲಕ ರೆನ್ನಿ ಡಿಸೋಜ ಅವರು ಈ ವೇಳೆ ಮಾತನಾಡಿ, ಮಕ್ಕಳ ಕಲ್ಯಾಣ ಮತ್ತು ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ವೃತ್ತಿಪರ ಹಾಗೂ ಅಸಾಧಾರಣ ಅನುಭವ ಹೊಂದಿರುವವರನ್ನೇ ಆಯೋಗಕ್ಕೆ ನೇಮಕ ಮಾಡಬೇಕೆಂಬ ನಿಯಮವಿದೆ. ಆದರೆ ಮೇ 27ರಂದು ಹೊರಡಿಸಲಾದ ಅಧಿಸೂಚನೆಯಲ್ಲಿ ನೇಮಕಗೊಂಡಿರುವ ಕೆಲವರು ಈ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂದರು.

ಕಲಬುರಗಿ ಜಿಲ್ಲೆಯ ಸಂತೋಷ ಕುಮಾರ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಅವರು ಮುಖ್ಯವಾಗಿ ವ್ಯವಹಾರ ಚಟುವಟಿಕೆಗಳಲ್ಲಿ ತೊಡಗಿರುವ ಸೇವಾ ಪೂರೈಕೆದಾರರಾಗಿದ್ದಾರೆ. ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಅವರು ಗಮನಾರ್ಹವಾಗಿ ಕಾರ್ಯನಿರ್ವಹಿಸಿರುವ ದಾಖಲೆಗಳು ಇಲ್ಲ ಎಂದರು.

ರಾಯಚೂರು ಜಿಲ್ಲೆಯ ಸತ್ಯನಾರಾಯಣ ಶೆಟ್ಟಿ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ. ಅವರು ಖಾಸಗಿ ಶಿಕ್ಷಣ ಸಂಸ್ಥೆಗಳ ಸಮೂಹದ ಸ್ಥಾಪಕರಾಗಿದ್ದು, ಶಿಕ್ಷಣದ ಹಕ್ಕು ಕಾಯ್ದೆ ಅನುಷ್ಠಾನ ಮತ್ತು ಶಿಕ್ಷಣ ಸಂಸ್ಥೆಗಳ ವಿರುದ್ಧದ ದೂರುಗಳ ಪರಿಶೀಲನೆ ಮಾಡುವ ಆಯೋಗದಲ್ಲೇ ಖಾಸಗಿ ಶಿಕ್ಷಣ ಕ್ಷೇತ್ರದ ಪ್ರತಿನಿಧಿಯನ್ನು ನೇಮಕ ಮಾಡಿರುವುದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗಬಹುದು ಎಂದರು.

ಬೀದರ್ ಜಿಲ್ಲೆಯ ಜಗನ್ನಾಥ ಹಲಮಡಗಿ ಅವರು ವಿವಿಧ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿದ್ದರೂ, ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿರುವ ಸಾರ್ವಜನಿಕ ದಾಖಲೆಗಳು ಲಭ್ಯವಿಲ್ಲ. ಹೀಗಾಗಿ ಈ ನೇಮಕಾತಿಗಳು ಸಮರ್ಪಕವಾಗಿಲ್ಲ ಎಂದರು.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಅವರು ಮಾತನಾಡಿ, ನೇಮಕಗೊಂಡ ವ್ಯಕ್ತಿಗಳ ಬಗ್ಗೆ ವೈಯಕ್ತಿಕ ಆಕ್ಷೇಪ ಇಲ್ಲ. ಆದರೆ ಮಕ್ಕಳ ರಕ್ಷಣೆ ಮತ್ತು ಪೋಷಣೆಗೆ ಸಂಬಂಧಿಸಿದ ಮಹತ್ವದ ಆಯೋಗದ ವಿಶ್ವಾಸಾರ್ಹತೆಯನ್ನು ಕಾಪಾಡಲು ನೇಮಕಾತಿಗಳು ನಿಯಮಾನುಸಾರವಾಗಿರಬೇಕು. ಆಯೋಗಗಳು ರಾಜಕೀಯ ಪುನರ್ವಸತಿ ಕೇಂದ್ರಗಳಾಗಬಾರದು ಎಂದರು.

ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಅಧ್ಯಕ್ಷೆ ಕಮಲಾ, ಮಕ್ಕಳ ಮಾಸೋತ್ಸವ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಂಚಾಲಕ ಮುಹಮ್ಮದ್ ರಫೀಕ್ ಪುತ್ತೂರು, ಅನಂತ ರಾವ್ ಹೇರಳೆ ಹಾಗೂ ಎ.ಕೆ. ಹಾರಿಸ್ ಇದ್ದರು.

ಮುಖ್ಯಾಂಶಗಳು

• ಮಕ್ಕಳ ಹಕ್ಕುಗಳ ಆಯೋಗಕ್ಕೆ ಅನರ್ಹರ ನೇಮಕ ಆರೋಪ
• ಅಧಿಸೂಚನೆ ಹಿಂಪಡೆದು ಮರುನೇಮಕಕ್ಕೆ ಒತ್ತಾಯ
• ಆಯ್ಕೆ ಪ್ರಕ್ರಿಯೆ ಕುರಿತು ಪಾರದರ್ಶಕ ತನಿಖೆಗೆ ಆಗ್ರಹ
• ಆಯೋಗಗಳ ವಿಶ್ವಾಸಾರ್ಹತೆ ಕಾಪಾಡುವಂತೆ ಸಂಘಟನೆಗಳ ಮನವಿ

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *