ಶಾಲೆ, ಗ್ರಾಮಗಳ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ: ಜಿ.ಪಂ ಸಿಇಒ ವಿನಾಯಕ ಸೂಚನೆ

ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ
<

Spread the love

ಮಂಗಳೂರು: ಅಂಗನವಾಡಿ, ಶಾಲೆ-ಕಾಲೇಜುಗಳಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನೀರಿನ ಮೂಲಗಳ ನಿಯಮಿತ ಪರೀಕ್ಷೆ ನಡೆಸಬೇಕು. ಜೊತೆಗೆ ಶಾಲೆಗಳು ಹಾಗೂ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಕಾಲಕಾಲಕ್ಕೆ ಸ್ವಚ್ಛಗೊಳಿಸುವ ಮೂಲಕ ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

<

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲೆಗಳಲ್ಲಿನ ನೀರಿನ ಟ್ಯಾಂಕ್‌ಗಳ ಸ್ವಚ್ಛತೆ ಅತ್ಯಂತ ಅಗತ್ಯವಾಗಿದ್ದು, ಯಾವುದೇ ವಿಳಂಬ ಮಾಡದೆ ಅವುಗಳನ್ನು ನಿಯಮಿತವಾಗಿ ಶುಚಿಗೊಳಿಸಬೇಕು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಲಜೀವನ್ ಮಿಷನ್ ಸೇರಿದಂತೆ ವಿವಿಧ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ಪರಿಶೀಲಿಸಿದ ಅವರು, ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ನೀರು ಸರಬರಾಜು ಕಾಮಗಾರಿಗಳ ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ಅಥವಾ ವಿಳಂಬ ಸಲ್ಲದು ಎಂದರು.

ಜಿಲ್ಲೆಯಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವ ಜತೆಗೆ ಪ್ರತಿಯೊಂದು ಕುಡಿಯುವ ನೀರಿನ ಮೂಲದಿಂದ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *