ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ.
ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು.
ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸಿರುವುದು ಜಾಮೀನು ಷರತ್ತು ಉಲ್ಲಂಘನೆ ಆಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಪರ ವಕೀಲರು ಚಿನ್ನಯ್ಯನ ಜಾಮೀನು ರದ್ದುಪಡಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗಿರೀಶ್ ಮಟ್ಟಣ್ಣವರ್, “ಪ್ರಕರಣದ ಬಗ್ಗೆ ಯಾವುದೇ ಅನುಮಾನ ಉಳಿಯದಂತೆ ಚಿನ್ನಯ್ಯನ ಜೊತೆಗೆ ನನ್ನನ್ನೂ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಲಿ. ಅಗತ್ಯವಿದ್ದರೆ ಅದನ್ನು ನೇರಪ್ರಸಾರ ಮಾಡುವುದಕ್ಕೂ ನನಗೆ ಆಕ್ಷೇಪವಿಲ್ಲ” ಎಂದು ಹೇಳಿದರು.
ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಅನಿಲ್ ಅಂತರ, ಪ್ರಕಾಶ್ ಸಿ. ಬೆಂಗಳೂರು, ಮನೋಜ್ ಕುಂಜರ್ಪ, ಪ್ರದೀಪ್ ಕುಲಾಲ್, ಗಣೇಶ್ ಶೆಟ್ಟಿ, ಉದಯ ಉಜಿರೆ, ಶ್ರೀನಿವಾಸ್ ಸೇರಿದಂತೆ ಹಲವರು ಎಸ್ ಐಟಿ ಕಚೇರಿಗೆ ಭೇಟಿ ನೀಡಿದ್ದರು.
What do you feel about this post?
Like
Love
Happy
Haha
Sad
