ಅರಬ್ಬಿ ಸಮುದ್ರದಲ್ಲಿ ಮುಳುಗುತ್ತಿದ್ದ ಭಾರತೀಯ ಹಡಗು ವಿರಾಟ್-1: 14 ನಾವಿಕರು ಸುರಕ್ಷಿತ ರಕ್ಷಣೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ದೇಶ ವಿದೇಶ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಮಸ್ಕತ್: ತಾಂತ್ರಿಕ ವೈಫಲ್ಯದಿಂದ ಒಮಾನ್ ಕರಾವಳಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಳುಗುವ ಸ್ಥಿತಿಗೆ ತಲುಪಿದ್ದ ಭಾರತೀಯ ವ್ಯಾಪಾರಿ ಹಡಗು ವಿರಾಟ್-1ನಲ್ಲಿದ್ದ 14 ನಾವಿಕರನ್ನು ಅಮೆರಿಕ ನೌಕಾಪಡೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ನಡೆದಿದೆ.

ರಕ್ಷಿಸಲ್ಪಟ್ಟ ಎಲ್ಲಾ ಭಾರತೀಯ ನಾವಿಕರು ಸುರಕ್ಷಿತವಾಗಿದ್ದು ಉತ್ತಮ ಆರೋಗ್ಯದಲ್ಲಿದ್ದಾರೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ನಂತರ ಅವರನ್ನು ಮುಂಬೈಗೆ ತೆರಳುತ್ತಿದ್ದ ಮತ್ತೊಂದು ಹಡಗಿಗೆ ಸ್ಥಳಾಂತರಿಸಲಾಗಿದೆ.

ಮಧ್ಯಪ್ರಾಚ್ಯ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಜೂನ್ 14ರಂದು ಅರಬ್ಬಿ ಸಮುದ್ರದಲ್ಲಿ ಅತಂತ್ರ ಸ್ಥಿತಿಯಲ್ಲಿ ಸಿಲುಕಿದ್ದ 14 ಭಾರತೀಯ ಸಾಗರಯಾನಿಗಳನ್ನು ಅಮೆರಿಕ ನೌಕಾಪಡೆ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ಅಮೆರಿಕದ ಕೇಂದ್ರ ಕಮಾಂಡ್ ತಿಳಿಸಿದೆ.

ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿ ಅಮೆರಿಕ ನೌಕಾಪಡೆಯ ಪಿ-8 ವಿಮಾನ ಸ್ಥಳಕ್ಕೆ ಧಾವಿಸಿ ಶೋಧ ಹಾಗೂ ರಕ್ಷಣಾ ಸಾಮಗ್ರಿಗಳನ್ನು ಸಮುದ್ರಕ್ಕೆ ಇಳಿಸಿದೆ. ಇದರ ನೆರವಿನಿಂದ ನಾವಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ವಿವರಿಸಲಾಗಿದೆ.

ರಾಸ್ ಅಲ್ ಹದ್‌ನಿಂದ ಸುಮಾರು 80 ನಾಟಿಕಲ್ ಮೈಲು ದೂರದಲ್ಲಿ ಹಡಗು ಮುಳುಗುತ್ತಿರುವ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ಕರಾವಳಿ ಅಧಿಕಾರಿಗಳು ಹಾಗೂ ಭಾರತೀಯ ನೌಕಾಪಡೆಗೂ ತಕ್ಷಣ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *