ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ; ಮೊದಲ ಜೆಂಡರ್ ಅಫರ್ಮಿಂಗ್ ಯಶಸ್ವಿ ಶಸ್ತ್ರಚಿಕಿತ್ಸೆ, ವೈದ್ಯರ ಸಾಧನೆ

ಆರೋಗ್ಯ ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ
<

Spread the love

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಟ್ರಾನ್ಸ್ಜೆಂಡರ್ ಮಹಿಳೆಗೆ ಮೊದಲ ಬಾರಿಗೆ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ. ಈಚೆಗೆ ನಡೆದ ಈ ಶಸ್ತ್ರಚಿಕಿತ್ಸೆ ನಂತರ ರೋಗಿ ವೈದ್ಯಕೀಯ ತಂಡದ ಆರೈಕೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

<

ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ಹಾಗೂ ಮೂತ್ರಶಾಸ್ತ್ರ ವಿಭಾಗಗಳ ಸಂಯುಕ್ತ ತಂಡವು ಈ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿದ್ದು, ಎರಡೂ ವಿಭಾಗಗಳ ನಿಕಟ ಸಮನ್ವಯದಲ್ಲಿ ಹಲವು ಗಂಟೆಗಳ ಕಾಲ ಕಾರ್ಯ ನಡೆದಿದೆ. ಪ್ಲಾಸ್ಟಿಕ್ ಸರ್ಜರಿ ವಿಭಾಗವು ಇದಕ್ಕೂ ಮುನ್ನ ಮುಖದ ಸ್ತ್ರೀಕರಣ ಮತ್ತು ಸ್ತನ ವರ್ಧನೆ ಸೇರಿದಂತೆ ಲಿಂಗ ದೃಢೀಕರಣ ಸಂಬಂಧಿತ ಚಿಕಿತ್ಸೆಗಳನ್ನೂ ನೀಡುತ್ತಿದ್ದರೂ, ಸಂಪೂರ್ಣ ಜೆಂಡರ್ ಅಫರ್ಮಿಂಗ್ ಜನನಾಂಗ ಶಸ್ತ್ರಚಿಕಿತ್ಸೆ ಇದೇ ಮೊದಲ ಬಾರಿಗೆ ನಡೆಸಲಾಗಿದೆ.

ಶಸ್ತ್ರಚಿಕಿತ್ಸೆಯ ನೇತೃತ್ವವನ್ನು ಪ್ಲಾಸ್ಟಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಜೋಸೆಫ್ ಥಾಮಸ್ ಹಾಗೂ ಸಹ ಪ್ರಾಧ್ಯಾಪಕ ಡಾ. ಹರ್ಷವರ್ಧನ್ ಶೆಟ್ಟಿ ವಹಿಸಿದ್ದರು. ಮೂತ್ರಶಾಸ್ತ್ರ ವಿಭಾಗದ ಡಾ. ಅನುಪಮ್ ಚೌಧರಿ ತಂಡದಲ್ಲಿ ಭಾಗಿಯಾಗಿದ್ದರು.

ಲಿಂಗ ಡಿಸ್ಫೋರಿಯಾ ಸಮಸ್ಯೆಯಿಂದ ಬಳಲುವ ಅನೇಕ ಟ್ರಾನ್ಸ್ಜೆಂಡರ್ ವ್ಯಕ್ತಿಗಳಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾನಸಿಕ ಹಾಗೂ ದೈಹಿಕ ಆತ್ಮವಿಶ್ವಾಸ ಹೆಚ್ಚಿಸಲು ಸಹಾಯಕವಾಗುತ್ತದೆ. ಶಸ್ತ್ರಚಿಕಿತ್ಸೆಯ ನಂತರ ರೋಗಿಗೆ ನೋವು ನಿರ್ವಹಣೆ, ಗಾಯದ ಆರೈಕೆ ಹಾಗೂ ಸಮಾಲೋಚನಾ ಸೇವೆಗಳೊಂದಿಗೆ ಚೇತರಿಕೆ ಯೋಜನೆ ನೀಡಲಾಗುತ್ತಿದೆ.

ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ. ಸುಧಾಕರ್ ಕಂಟಿಪುಡಿ ಮಾಹಿತಿ ನೀಡಿ, ಶಸ್ತ್ರಚಿಕಿತ್ಸೆಯ ನಂತರವೂ ಸಮಗ್ರ ಆರೈಕೆ, ಗೌಪ್ಯತೆ ಮತ್ತು ಮಾನಸಿಕ ಬೆಂಬಲ ಅಗತ್ಯವಿದೆ ಎಂದು ಹೇಳಿದ್ದಾರೆ. ಇಂತಹ ಸೇವೆಗಳು ಆಸ್ಪತ್ರೆಯ ದೀರ್ಘಕಾಲಿಕ ಆರೋಗ್ಯ ಸೇವಾ ಯೋಜನೆಯ ಭಾಗವಾಗಿವೆ ಎಂದು ಅವರು ತಿಳಿಸಿದ್ದಾರೆ.

ರೋಗಿಯ ಚೇತರಿಕೆ ಹಾದಿಯಲ್ಲಿ ನಿಯಮಿತ ಫಾಲೋ-ಅಪ್, ಫಿಸಿಯೋಥೆರಪಿ ಮತ್ತು ಕೌನ್ಸೆಲಿಂಗ್ ಸೇವೆಗಳು ಮುಂದುವರೆಯಲಿವೆ ಎಂದು ಆಸ್ಪತ್ರೆ ತಿಳಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *