ಕರಾವಳಿಯಲ್ಲಿ ಕಿಂಗ್ ಖಾನ್ ಹವಾ: ಜೂನ್ 25 ಕ್ಕೆ ಮಂಗಳೂರಿನಲ್ಲಿ ಶಾರುಖ್ ಖಾನ್ ವಿಶೇಷ ಕಾರ್ಯಕ್ರಮ, ಪೂರ್ವ ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ ಸಿನಿಮಾ
<

Spread the love

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅವರು ಜೂನ್ 25 ರಂದು ಮಂಗಳೂರಿಗೆ ಆಗಮಿಸಲಿದ್ದು, ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಶಾರುಖ್ ಖಾನ್ ಅವರೊಂದಿಗೆ ವಿಶೇಷ ಸಂಜೆಯ ಕಾರ್ಯಕ್ರಮ’ದಲ್ಲಿ ಭಾಗವಹಿಸಲಿದ್ದಾರೆ.

<

ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಜನಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ ಅವರು ಮಾತನಾಡಿ, “ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ಹೆಮ್ಮೆಯ ಸಂಗತಿ. ಈ ಕಾರ್ಯಕ್ರಮವು ಸಂಸ್ಥೆಯ ಬೆಳವಣಿಗೆಯ ಮಹತ್ವದ ಘಟ್ಟವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವ ನೀಡಲಿದೆ” ಎಂದರು.

ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೇರೊ ಮಾತನಾಡಿ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಸಂಸ್ಥಾತ್ಮಕ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನಡೆಯಲು ಎಲ್ಲ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪ್ರವೇಶ ಪತ್ರ ಹೊಂದಿರುವವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಘೋಷಣೆಯಾಗುತ್ತಿದ್ದಂತೆ ಕರಾವಳಿ ಭಾಗದಲ್ಲಿ ಭಾರೀ ಕುತೂಹಲ ಮತ್ತು ನಿರೀಕ್ಷೆ ಮೂಡಿದ್ದು, ಈ ಕಾರ್ಯಕ್ರಮವು ಮಂಗಳೂರಿನ ಸಾಮಾಜಿಕ ಹಾಗೂ ವಾಣಿಜ್ಯ ವಲಯದಲ್ಲಿ ವಿಶೇಷ ಗಮನ ಸೆಳೆಯುವ ಸಾಧ್ಯತೆ ಇದೆ.

ರೋಹನ್ ಕಾರ್ಪೊರೇಶನ್ ಹೆಜ್ಜೆ ಗುರುತು

ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕ ಸ್ನೇಹಿ ಸೇವೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದೆ. ಹೆಚ್ಚಿನ ಮಾಹಿತಿಗೆ: +91 90355 64026 ಸಂಪರ್ಕ ಮಾಡಿ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *