ಅತ್ತಾವರ ಕೆಎಂಸಿ ಆಸ್ಪತ್ರೆಗೆ ಎನ್‌ಎಬಿಎಚ್ 6 ನೇ ಆವೃತ್ತಿಯ ಪ್ರತಿಷ್ಠಿತ ಮಾನ್ಯತೆ

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಶಿರಸಿ

Spread the love

ಮಂಗಳೂರು: ಇಲ್ಲಿನ ಅತ್ತಾವರ ಕೆಎಂಸಿ ಆಸ್ಪತ್ರೆ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಎನ್‌ಎಬಿಎಚ್ (ನ್ಯಾಷನಲ್ ಅಕ್ರೆಡಿಟೇಶನ್ ಬೋರ್ಡ್ ಫಾರ್ ಹಾಸ್ಪಿಟಲ್ಸ್ ಅಂಡ್ ಹೆಲ್ತ್‌ಕೇರ್ ಪ್ರೊವೈಡರ್ಸ್) 6 ನೇ ಆವೃತ್ತಿಯ ಮಾನದಂಡಗಳ ಅಡಿಯಲ್ಲಿ ಪ್ರತಿಷ್ಠಿತ ಮಾನ್ಯತೆ ಪಡೆದುಕೊಂಡಿದೆ.

<

ಕ್ವಾಲಿಟಿ ಕೌನ್ಸಿಲ್ ಆಫ್ ಇಂಡಿಯಾದ ಅಂಗ ಸಂಸ್ಥೆ ಆಗಿರುವ ಎನ್‌ಎಬಿಎಚ್ ಈ ಮಾನ್ಯತೆಯನ್ನು ನೀಡಿದ್ದು, ಆಸ್ಪತ್ರೆ 610 ಮಂಜೂರಾದ ಹಾಸಿಗೆಗಳ ವ್ಯಾಪ್ತಿಯಲ್ಲಿ ರೋಗಿಗಳ ಸುರಕ್ಷತೆ ಹಾಗೂ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸುತ್ತಿರುವುದನ್ನು ಗುರುತಿಸಿ ಗೌರವಿಸಿದೆ. ಕೆಎಂಸಿ ಆಸ್ಪತ್ರೆ 2022ರಲ್ಲಿ ಮೊದಲ ಬಾರಿಗೆ ಎನ್‌ಎಬಿಎಚ್ ಮಾನ್ಯತೆ ಪಡೆದಿದ್ದು, ಇದೀಗ ಇನ್ನಷ್ಟು ಕಟ್ಟುನಿಟ್ಟಿನ 6ನೇ ಆವೃತ್ತಿಯ ಮಾನದಂಡಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಡಾ. ಚಕ್ರಪಾಣಿ ಅವರು ಮಾತನಾಡಿ, ಆಸ್ಪತ್ರೆಯ ಎಲ್ಲ ವಿಭಾಗಗಳ ವೈದ್ಯರು, ನರ್ಸಿಂಗ್ ಸಿಬ್ಬಂದಿ, ಸೋಂಕು ನಿಯಂತ್ರಣ ಸಮಿತಿ ಮತ್ತು ಆಡಳಿತ ವಿಭಾಗದ ಸಮೂಹ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದೆ. ರೋಗಿಗಳ ಸುರಕ್ಷತೆ ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ಆಸ್ಪತ್ರೆಯ ಬದ್ಧತೆಯನ್ನು ಈ ಮಾನ್ಯತೆ ಮತ್ತಷ್ಟು ಬಲಪಡಿಸಿದೆ ಎಂದರು.

ಮಾಹೆ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಧಾಕರ್ ಕಂಟಿಪುಡಿ ಮಾತನಾಡಿ, ಈ ಸಾಧನೆಯು ವೈದ್ಯಕೀಯ ಶ್ರೇಷ್ಠತೆ, ಶಿಸ್ತು ಮತ್ತು ಸಮರ್ಪಣೆಯ ಪ್ರತಿಬಿಂಬವಾಗಿದೆ. ಕೆಎಂಸಿ ಆಸ್ಪತ್ರೆ, ಅತ್ತಾವರವು ಈ ಭಾಗದ ಆರೋಗ್ಯ ಸೇವಾ ಕ್ಷೇತ್ರಕ್ಕೆ ಮಾದರಿಯಾಗಿದ್ದು, ಗುಣಮಟ್ಟದ ಮಾನದಂಡಗಳನ್ನು ನಿರಂತರವಾಗಿ ಹೆಚ್ಚಿಸುವ ಮಾಹೆಯ ಬದ್ಧತೆಯನ್ನು ಈ ಮಾನ್ಯತೆ ಪುನರುಚ್ಚರಿಸಿದೆ ಎಂದರು.

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾಹೆ ಪ್ರೊ ಚಾನ್ಸಲರ್ ಡಾ. ಎಚ್.ಎಸ್. ಬಲ್ಲಾಳ್, ವೈಸ್ ಚಾನ್ಸಲರ್ ಡಾ. ಶರತ್ ಕೆ. ರಾವ್, ಪ್ರೊ ವೈಸ್ ಚಾನ್ಸಲರ್ (ಆರೋಗ್ಯ ವಿಜ್ಞಾನ) ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್ ಹಾಗೂ ಗುಣಮಟ್ಟ ವಿಭಾಗದ ನಿರ್ದೇಶಕ ಡಾ. ಕ್ರಿಸ್ಟೋಫರ್ ಸುಧಾಕರ್ ಅವರು ಎನ್‌ಎಬಿಎಚ್ ಪ್ರಮಾಣ ಪತ್ರವನ್ನು ಕೆಎಂಸಿ ಆಸ್ಪತ್ರೆ, ಅತ್ತಾವರದ ವೈದ್ಯಕೀಯ ಅಧೀಕ್ಷಕ ಡಾ. ಚಕ್ರಪಾಣಿ ಹಾಗೂ ಆಸ್ಪತ್ರೆಯ ಹಿರಿಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *