ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಪ್ರಕರಣಕ್ಕೆ ದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಹಿಂದಿ ಶಿಕ್ಷಕ ಅಬ್ಬು ತಹಲ ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಜೂನ್ 9 ರಂದು ವಿದ್ಯಾರ್ಥಿ ಗೋಕುಲ್ ಗೌಡ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಮೃತ ವಿದ್ಯಾರ್ಥಿ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ದೂರಿನಲ್ಲಿ ಶಿಕ್ಷಕ ಅಬ್ಬು ತಹಲ ಅವರು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದರಿಂದ ಮಾನಸಿಕವಾಗಿ ನೊಂದಿದ್ದ ಎನ್ನುವ ಆರೋಪ ಮಾಡಲಾಗಿತ್ತು.
ಪ್ರಕರಣದ ತನಿಖೆಯನ್ನು ಮೂವರು ಪೊಲೀಸ್ ಅಧಿಕಾರಿಗಳ ವಿಶೇಷ ತಂಡ ನಡೆಸಿದ್ದು, ತನಿಖೆಯ ವೇಳೆ ಸಂಗ್ರಹಿಸಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಶಿಕ್ಷಕರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರವಾರ ಡಿವೈಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ತನಿಖೆ ಮುಂದುವರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಮತ್ತು ಸಾಕ್ಷ್ಯಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.
What do you feel about this post?
Like
Love
Happy
Haha
Sad



