ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ: ಅಪಹರಣ–ದರೋಡೆ ಪ್ರಕರಣ, ಮೂರು ಮಂದಿ ಬಂಧನ

ಅಪರಾಧ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕುಟುಂಬದ ಜತೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ.

<

ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) ಹಾಗೂ ಕೃತ್ಯಕ್ಕೆ ಕಾರು ಒದಗಿಸಿದ್ದ ಮಡಿಕೇರಿ ನಿವಾಸಿ ಮುಸ್ತಫ (49) ಬಂಧಿತರು ಎಂದು ತಿಳಿಸಿದ್ದಾರೆ.

ಜೂನ್‌ 29 ರಂದು ಮಹಾರಾಷ್ಟ್ರದಿಂದ ಕೇರಳದ ಪೈನ್ನೂರಿಗೆ ಕುಟುಂಬದ ಜತೆಗೆ ತೆರಳುತ್ತಿದ್ದ ವಿಕಾಸ್ ಸುಬ್ಬುರಾವ್ ಧನವಡೆ ಅವರನ್ನು ಅಪಹರಿಸಿ, ಅವರ ಕಾರು ಮತ್ತು ಚಿನ್ನಾಭರಣ ದರೋಡೆ ಮಾಡಲಾಗಿತ್ತು. ಪ್ರಕರಣದ ತನಿಖೆ ವೇಳೆ ಕೃತ್ಯಕ್ಕೆ ಬಳಸಿದ್ದ ನಾಲ್ಕು ಕಾರುಗಳ ಪೈಕಿ ಇನ್ನೋವಾ ಕ್ರಿಸ್ಟಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಕರಣದಲ್ಲಿ 14 ಮಂದಿ ಭಾಗಿಯಾಗಿದ್ದು, ಆರೋಪಿಗಳಿಗೆ ಸಹಕರಿಸಿದ್ದ ಇಬ್ಬರು ಸೇರಿ ಒಟ್ಟು 16 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಆರೋಪಿಗಳೆಲ್ಲರೂ ಕೇರಳ ಹಾಗೂ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಣ್ಣೂರಿನ ಚಾಲ ಪ್ರದೇಶದಲ್ಲಿ ನಿಮಿಲ್‌ನನ್ನು ಪಣಂಬೂರು ಠಾಣೆ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ನೇತೃತ್ವದ ತಂಡ ಬಂಧಿಸಿದೆ. ಮಡಿಕೇರಿ ಸಮೀಪದ ಮೂರ್ನಾಡು ಜಂಕ್ಷನ್‌ನಲ್ಲಿ ಮುಸ್ತಫನನ್ನು ಪಿಎಸ್ಐ ಜ್ಞಾನಶೇಖರ ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ವಿಶೇಷ ತಂಡಗಳು ಶೋಧ ಕಾರ್ಯ ಮುಂದುವರೆಸಿವೆ ಎಂದು ತಿಳಿಸಿದ್ದಾರೆ.

ತನಿಖೆಯಲ್ಲಿ ಮಂಗಳೂರು ಉತ್ತರ ವಿಭಾಗದ ಎಸಿಪಿ ಶ್ರೀಕಾಂತ್ ಕೆ., ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್, ಪಿಎಸ್ಐಗಳಾದ ಶ್ರೀಕಲಾ ಕೆ.ಟಿ., ಜ್ಞಾನಶೇಖರ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *