ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿಕ್ಷಣ ಶಿರಸಿ

Spread the love

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು.

<

ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು ಹಾಗೂ ಸಮಾಜಕ್ಕೆ ಹೆಚ್ಚಿನ ಸೇವೆ ಸಲ್ಲಿಸಬೇಕು ಎಂಬ ಉದ್ದೇಶದಿಂದ ಬ್ಯಾಂಕ್ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದೆ. ನವೋದಯ ಗ್ರಾಮ ವಿಕಾಸ ಯೋಜನೆ ಅಡಿ ಶೇ 90 ರಷ್ಟು ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಪುರಸ್ಕಾರ ಪಡೆದಿರುವ ಮಕ್ಕಳು ಉಜ್ವಲ ಭವಿಷ್ಯ ರೂಪಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತೊಡಗಬೇಕು. ಮುಂದೆ ಕನಿಷ್ಠ ಇಬ್ಬರು ಮಕ್ಕಳಿಗಾದರೂ ನೆರವಾಗುವ ಮನೋಭಾವ ಬೆಳೆಸಿದರೆ ಈ ಕಾರ್ಯಕ್ರಮದ ಉದ್ದೇಶ ಸಾರ್ಥಕ ಆಗಲಿದೆ ಎಂದು ಹೇಳಿದರು.

ಮಾಜಿ ಸಚಿವ ಕೃಷ್ಣ ಜೆ ಪಾಲೇಮಾರ್ ಅವರು ಪ್ರತಿಭಾ ಪುರಸ್ಕಾರ ವಿತರಣೆ ಮಾಡಿ ಮಾತನಾಡಿ, ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಮಾದರಿ ಆಗಿದೆ. ಶಿಕ್ಷಣ ಮಾತ್ರವಲ್ಲದೆ ವಿವಿಧ ಕ್ಷೇತ್ರಗಳ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವ ಮೂಲಕ ಸಮಾಜಮುಖಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಬ್ಯಾಂಕ್ ಉಪಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು, ನಿರ್ದೇಶಕರಾದ ವಿನಯ್ ಕುಮಾರ್ ಸೂರಿಂಜೆ, ಭಾಸ್ಕರ್ ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಗೋಪಿನಾಥ್ ಭಟ್, ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ನಾಯ್ಕ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್ ಸೇರಿದಂತೆ ಹಲವರು ಇದ್ದರು.

ಯೋಗ ಪ್ರತಿಭೆ ತನುಶ್ರೀ ಪಿತ್ರೋಡಿ ಯೋಗ ಪ್ರದರ್ಶನ ನೀಡಿದರು. ಚಿತ್ರಲೇಖ ಶೆಟ್ಟಿ ಪ್ರಾರ್ಥನೆ ಸಲ್ಲಿಸಿದರು. ರಾಜೇಶ್ ಶೆಟ್ಟಿ ವಂದಿಸಿದರು.

ಪುರಸ್ಕಾರಗಳ ಪ್ರೋತ್ಸಾಹದ ಚಿಲುಮೆ: ಕೃಷ್ಣ ಜೆ. ಪಾಲೇಮಾರ್

2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬ್ಯಾಂಕ್ ಸಿಬ್ಬಂದಿಯ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ಪ್ರೇರಣಾದಾಯಕ. ಪ್ರತಿಭಾ ಪುರಸ್ಕಾರಗಳು ಇತರ ವಿದ್ಯಾರ್ಥಿಗಳಲ್ಲೂ ಸಾಧನೆಯ ಉತ್ಸಾಹ ಮೂಡಿಸುತ್ತವೆ ಎಂದು ಸಚಿವ ಕೃಷ್ಣ ಜೆ. ಪಾಲೇಮಾರ್ ಹೇಳಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *