ಕಾರವಾರ: ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಜುಲೈ 7 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.
ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಗಮನದಲ್ಲಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಉಳಿದ ತಾಲೂಕುಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ರಜೆಯಿಂದ ಉಂಟಾಗುವ ಶೈಕ್ಷಣಿಕ ನಷ್ಟವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಸಾರ್ವಜನಿಕರು ಹಾಗೂ ಪೋಷಕರು ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸಿ ಅನಗತ್ಯವಾಗಿ ಹೊರ ಸಂಚಾರ ಮಾಡದಂತೆ ಹಾಗೂ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದಾರೆ.
What do you feel about this post?
Like
Love
Happy
Haha
Sad



