ವಯನಾಡ್‌ನಲ್ಲಿ ಮತ್ತೆ ಭೂಕುಸಿತ ದುರಂತ: ಮೂವರು ಸಾವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ದೇಶ ವಿದೇಶ

Spread the love

ವಯನಾಡ್: ಕಳೆದ ವರ್ಷ ಸಂಭವಿಸಿದ್ದ ಭೀಕರ ಭೂಕುಸಿತದ ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕುಸಿತ ಸಂಭವಿಸಿದ್ದು, ಮೂವರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ವರದಿಯಾಗಿದೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ.

<

ವಯನಾಡಿನ ಮೆಪ್ಪಾಡಿ ಸಮೀಪದ ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಈ ಪ್ರದೇಶದಲ್ಲಿ ವಯನಾಡ್ ಮತ್ತು ಮಲಪ್ಪುರಂ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ನಿರಂತರ ಸುರಿದ ಭಾರೀ ಮಳೆಯ ಪರಿಣಾಮವಾಗಿ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕಲ್ಲಪೆಟ್ಟದಿಂದ ಅಗ್ನಿಶಾಮಕ ಹಾಗೂ ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಅವಶೇಷಗಳಡಿ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆಯನ್ನು ವೇಗಗೊಳಿಸಲಾಗಿದೆ.

ಕಳೆದ ವರ್ಷ ಸಂಭವಿಸಿದ್ದ ಭೀಕರ ಭೂಕುಸಿತದ ಬಳಿಕ ಮತ್ತೆ ಇದೇ ಜಿಲ್ಲೆಯಲ್ಲಿ ಇಂತಹ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿದ್ದು, ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *