ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕ ಜಿಲ್ಲೆಯಾದ್ಯಂತ ಕಾಲೇಜು ಕ್ಯಾಂಪಸ್ಗಳಲ್ಲಿ ವಿದ್ಯಾರ್ಥಿಗಳ ಸಹಿ ಸಂಗ್ರಹ ಅಭಿಯಾನ ಆರಂಭಿಸಿದೆ. ಸಂಗ್ರಹವಾಗುವ ಪೋಸ್ಟ್ಕಾರ್ಡ್ಗಳನ್ನು ಪ್ರಧಾನ ಮಂತ್ರಿಗೆ ಕಳುಹಿಸಲಾಗುವುದು ಎಂದು ಎನ್ಎಸ್ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಕಾಲೇಜುಗಳಲ್ಲಿ ಸಹಿ ಸಂಗ್ರಹ ನಡೆಯಲಿದ್ದು, ನೀಟ್ ಅಕ್ರಮದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು. ಆಗಸ್ಟ್ ಮೊದಲ ವಾರದಲ್ಲಿ ನಡೆಯಲಿರುವ ‘ಸಂಸತ್ ಚಲೋ’ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿನಿಧಿಗಳೂ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸಂಗ್ರಹಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿರುವ ‘ಚಾತ್ರೋಂ ಕಿ ಗೂಂಜ್’ ಅಭಿಯಾನದಡಿ ಕ್ಯೂಆರ್ ಕೋಡ್ ಮೂಲಕ ವಿದ್ಯಾರ್ಥಿಗಳು ತಮ್ಮ ಅಹವಾಲುಗಳನ್ನು ನೇರವಾಗಿ ದಾಖಲಿಸಬಹುದು ಎಂದು ತಿಳಿಸಿದರು.
ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಎಂ.ಕಾಂ ಕೋರ್ಸ್ ರದ್ದುಪಡಿಸುವ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಈ ಕುರಿತು ಮಂಗಳೂರು ವಿವಿ ಕುಲಪತಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಸುಮಾರು 40 ಅರ್ಜಿಗಳು ಬಂದಿರುವ ಕೋರ್ಸ್ನ್ನು ಕೊಣಾಜೆಗೆ ಸ್ಥಳಾಂತರಿಸುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಎನ್ಎಸ್ಯುಐ ಮುಖಂಡರಾದ ಸಾಹಿಲ್ ಮಂಚಿಲ, ಅರ್ಶನ್ ಪೂಜಾರಿ, ಮೂಹಿನ್ ಕೆಂಪಿ, ಧನುಷ್ ಕುಕ್ಕೆತಿ ಸುಳ್ಯ, ಕ್ರಿಸ್ಟಿನ್ ಮಿನೇಜಸ್, ಸಂತೋಷ್ ಸುಳ್ಯ, ಸುಜನ್ ಪೂಜಾರಿ ಹಾಗೂ ಝನೂನ್ ಉಪಸ್ಥಿತರಿದ್ದರು.
What do you feel about this post?
Like
Love
Happy
Haha
Sad



