ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ **ಕೆ.ಎಂ. ಸವಿತಾ** ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ.
ಕೆ.ಎಂ. ಸವಿತಾ ಅವರು ಈ ಹಿಂದೆ ಮೈಸೂರು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ್ದು, ಬಳಿಕ ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಕುಲಪತಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಅವರನ್ನು ಇದೀಗ ಕೆಎಎಸ್ ಶ್ರೇಣಿಯ ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ನಿಯೋಜಿಸಲಾಗಿದೆ.
ಇದೇ ವೇಳೆ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶೇಖ್ ತನ್ವೀರ್ ಆಸೀಫ್ ಅವರನ್ನು ಮುಂದಿನ ಆದೇಶದವರೆಗೆ ಮಾತೃ ಇಲಾಖೆಯಲ್ಲಿ ನಿರೀಕ್ಷಣೆಯಲ್ಲಿರುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜುನಾಥ್ ಆದೇಶ ಹೊರಡಿಸಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%



