ಕಲಬುರಗಿ: ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಅಂತರ ಜಿಲ್ಲೆ ಅಪರಾಧ ರಾಜ್ಯ

Spread the love

ಕಲಬುರಗಿ: ನಗರದ ಜಗತ್​ ವೃತ್ತದಲ್ಲಿ ಕರ್ತವ್ಯದಲ್ಲಿದ್ದ ಸಶಸ್ತ್ರ ಮೀಸಲು ಪೊಲೀಸ್​​ ಪಡೆಯ ಪೊಲೀಸ್​​ ಕಾನ್ ಸ್ಟೆಬಲ್ ಸೇವಾ ರೈಫಲ್‌ನಿಂದಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

<

ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶಿವಕುಮಾರ ನರಿಬೋಳ (32) ಮೃತ ಕಾನ್ ಸ್ಟೆಬಲ್ ಎಂದು ಗುರುತಿಸಲಾಗಿದೆ. ಜಗತ್ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ, ಪೊಲೀಸ್ ವಾಹನದಲ್ಲಿ ಕುಳಿತಿದ್ದ ವೇಳೆ ತಮ್ಮ ಬಳಿಯಿದ್ದ ಸರ್ಕಾರಿ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ., ಡಿಸಿಪಿಗಳಾದ ಶಾಲೂ ಹಾಗೂ ಪ್ರವೀಣ ನಾಯಕ, ಎಸಿಪಿ ಶರಣಬಸಪ್ಪ ಸುಬೇದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೋಕೊ, ವಿಧಿವಿಜ್ಞಾನ ಮತ್ತು ಬ್ಯಾಲಿಸ್ಟಿಕ್ ತಂಡಗಳು ಸ್ಥಳ ಪರಿಶೀಲನೆ ನಡೆಸಿವೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *