ಕಾರವಾರ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವ ಜನತೆ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಆಯ್ಕೆಯ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಅಂಗವಾಗಿ,ವಿದ್ಯಾರ್ಥಿಗಳಿಂದ ಪೋಷಕರಿಗೆ ಅರಿವು ಮೂಡಿಸಲು ಕಾರವಾರದ ಹಿಂದುಳಿದ ವರ್ಗಗಳ ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಿದ್ದ ಪತ್ರ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಕಾರ್ಯದಲ್ಲಿ ಈಗಾಗಲೇ ಬಿ.ಎಲ್.ಓ ಗಳು ತಮ್ಮ ಮನೆಗಳಿಗೆ ಎನ್ಯುಮರೇಷನ್ ಫಾರ್ಮ್ ಗಳನ್ನು ವಿತರಿಸಿದ್ದು, ಈ ಫಾರಂಗಳನ್ನು ಭರ್ತಿ ಮಾಡಿ,ಸಹಿ ಮಾಡಿ, ಕಡ್ಡಾಯವಾಗಿ ಹಿಂದಿರುಗಿಸುವ0ತೆ ತಮ್ಮ ಪೋಷಕರಿಗೆ ಪತ್ರ ಬರೆಯುವಂತೆ ತಿಳಿಸಿದ ಅವರು ಎಸ್.ಐ.ಆರ್. ನ ಮಹತ್ವದ ಬಗ್ಗೆ ಅರಿವು ಮೂಡಿಸಿ, ಯುವ ಜನತೆ ಮತದಾನ ಮಾಡಲು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದು ಅತ್ಯಗತ್ಯವಾಗಿರುವುದರಿಂದ 18 ವರ್ಷ ತುಂಬಿರುವ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳುವಂತೆ ತಿಳಿಸಿದರು.

ವಸತಿ ನಿಲಯದಲ್ಲಿನ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪತ್ರ ಅಭಿಯಾನದಲ್ಲಿ ಭಾಗವಹಿಸಿ, ತಮ್ಮ ಪೋಷಕರಿಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ತಪ್ಪದೇ ಭಾಗವಹಿಸುವ ಕುರಿತಂತೆ ಪತ್ರ ಬರೆದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳು
ಮತ್ತು ವಸತಿ ನಿಲಯದ ವಾರ್ಡ್ನ್ ಮತ್ತಿತರರು ಇದ್ದರು.
What do you feel about this post?
Like
Love
Happy
Haha
Sad



