ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಸಂಗೀತಶಾರದೆಯ ವರಪುತ್ರಿ, ,ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ದೇಶ ವಿದೇಶ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ ಸಿನಿಮಾ

Spread the love

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದು, 6 ದಶಕಗಳ ಕಾಲ‌ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

<

ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಈ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತಶಾರದೆಯ ವರಪುತ್ರಿ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *