ಮಂಗಳೂರು, ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ

ಅಂತರ ಜಿಲ್ಲೆ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಇಲ್ಲಿ ನಡೆವ ಕೊಂಕಣಿ 5ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ. ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ಇದೇ 19 ರಂದು ಒಂದು ದಿನದ ಕೊಂಕಣಿ 5ನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ನವದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈ ಕವಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕವಿ ಗೋಷ್ಟಿಗೆ ಬೆಳಿಗ್ಗೆ 8 ಗಂಟೆಗೆ ಖ್ಯಾತ ರಂಗಭೂಮಿ ತರಬೇತುದಾರ, ಕವಿ, ಕೊಂಕಣಿ ಶಿಕ್ಷಕ ಗೋವಾ ಕಾಣಕೋಣದ ಗೌರೀಶ ವರ್ಣೇಕರ್ ಚಾಲನೆ ಮಾಡಲಿದ್ದಾರೆ.

ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಜಿಲ್ಲಾ ಪ್ರಧಾನ ಸರಕಾರಿ ಅಭಿಯೋಜಕ ಎಂ. ಪಿ. ನೊರೊನಾ ಉದ್ಘಾಟನೆ ಮಾಡಲಿದ್ದಾರೆ. ಉದ್ಯಮಿ ವಿನ್ಸೆಂಟ್ ಕುಟಿನೊ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ವಿದ್ಯಾರ್ಥಿ ಹಾಗೂ ಕವಿಗಳು ಮುಕ್ತವಾಗಿ ಸಾಹಿತ್ಯ, ಕವಿತೆ ಬಗ್ಗೆ ಸಂವಾದ ನಡೆಸಲಿದ್ದಾರೆ.

ಸಮಾರೋಪದಲ್ಲಿ ಗೋವಾದ ಪ್ರಕಾಶಕಿ ಹಾಗೂ ಕೊಂಕಣಿ ಮಾತೃಭಾಷೆ ಶಿಕ್ಷಕಿ ಯೋಗಿತಾ ವರ್ಣೇಕರ್ ಪಾಲ್ಗೊಳ್ಳಿದ್ದಾರೆ. ಅತಿಥಿಗಳಾಗಿ ಶ್ರೀನಿವಾಸ ನಾಯಕ್ ಇಂದಾಜೆ, ಎಲಿಯಾಸ್ ಫರ್ನಾಂಡಿಸ್ ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದ ಅಯೋಜನೆಯ ಗುರ್ಕಾರ್ ಗೌರೀಶ ವರ್ಣೇಕರ್ ಮಡ್ಗಾಂವ್ ಗೋವಾ ಮತ್ತು ಸಮಿತಿ ಸದಸ್ಯರು ಕೇರಳದ ವಿಜಯ್ ಪೈ, ಕರ್ನಾಟಕ ಕಾರವಾರದ ಸಂದೇಶ ಬಾಂದೇಕರ್, ಗೋವಾದ ಆನ್ನಿ ಫರ್ನಾಂಡಿಸ್ ತೀವಿಮ್ ಗೋವಾ, ಪಣಜಿ ಗೋವಾದ ಅನಗಾ ಕಾಮತ್, ನವದೆಹಲಿಯ ಗೋಪಾಲಕೃಷ್ಣ ಪ್ರಭು, ಕರ್ನಾಟಕ ಬೆಂಗಳೂರಿನ ಜಾನೆಟ್ ವಾಸ್ ಆಗಿದ್ದಾರೆ.

ಸಮ್ಮೇಳನದ ಅಯೋಜನಾ ಸಮಿತಿಯ ಕಾರ್ಯದರ್ಶಿ ರಿಯಾನ ಡಿಕುನಾ, ಮಾಧ್ಯಮ ಸಲಹೆಗಾರ ಎಲಿಯಾಸ್ ಫರ್ನಾಂಡಿಸ್, ಕಾರ್ಯಕಾರಿ ಸದಸ್ಯ ಸ್ಟೇನಿ ತಾವ್ರೊ ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *