ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ, ಕೇಂದ್ರದಿಂದ ಅನ್ಯಾಯ: ಮಾಜಿ ಸಂಸದ ಉಗ್ರಪ್ಪ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ

Spread the love

ಮಂಗಳೂರು: ರಾಮ ಮಂದಿರದ ಹೆಸರಿನಲ್ಲಿ ಸಂಗ್ರಹಿಸಲಾದ ಹಣದ ದುರ್ಬಳಕೆ ಆರೋಪಗಳ ಕುರಿತು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿ ಅವರ ನೇತೃತ್ವದಲ್ಲಿ ಸಮಗ್ರ ತನಿಖೆ ನಡೆಸಬೇಕು. ರಾಜ್ಯದಲ್ಲಿ ಎಸ್ಸಿ, ಎಸ್ಟಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ತಿದ್ದುಪಡಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿದ್ದರೂ, ಅದನ್ನು ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸದಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಸಾವಿರಾರು ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

<

ರಾಮನ ಹೆಸರಿನಲ್ಲಿ ದೀರ್ಘಕಾಲ ರಾಜಕೀಯ ನಡೆಸಿದವರೇ ಇದೀಗ ರಾಮಮಂದಿರ ಟ್ರಸ್ಟ್‌ನ ಹೆಸರಿನಲ್ಲಿ ಅಕ್ರಮ ಎಸಗಿರುವ ಆರೋಪಗಳು ಕೇಳಿ ಬಂದಿವೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿ ನಾಯಕತ್ವ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದರು.

ರಾಮಾಯಣದಲ್ಲಿ ಆಡಳಿತದ ಆದರ್ಶಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಸಂದೇಶಗಳಿವೆ. ರಾಮನನ್ನು ಆದರ್ಶವಾಗಿ ಪ್ರತಿಪಾದಿಸುವವರು ಅವರ ಹೆಸರಿನಲ್ಲೇ ಸ್ಥಾಪಿತವಾದ ಟ್ರಸ್ಟ್‌ಗೆ ಸಂಬಂಧಿಸಿದ ಆರೋಪಗಳ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ‌ನಲ್ಲಿ ಕೇಂದ್ರ ಸರ್ಕಾರದ ಮಾಜಿ ಅಧಿಕಾರಿಗಳು ಸೇರಿದಂತೆ ಹಲವು ಪ್ರಮುಖರು ಸದಸ್ಯರಾಗಿದ್ದಾರೆ. ದೇಶದಾದ್ಯಂತ ನಡೆದ ಅಭಿಯಾನಗಳ ಮೂಲಕ ಸಂಗ್ರಹಿಸಲಾದ ಸಾವಿರಾರು ಕೋಟಿ ರೂಪಾಯಿ ದುರ್ಬಳಕೆ ಆಗಿದೆ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೀಸಲಾತಿ ತಿದ್ದುಪಡಿಗೆ ಸರಿಯಾಗಿ ನ್ಯಾಯ ನೀಡದೇ ಇರುವುದರಿಂದ ಸುಮಾರು 75 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಎರಡು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಉದ್ಯೋಗ ನಷ್ಟವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಿ ಭೇಟಿಗೆ ಕರೆದೊಯ್ಯುವಂತೆ ಒತ್ತಾಯಿಸಲಾಗುವುದು ಎಂದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *