20 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡು ಹಾಡಿದ ಸ್ವರದೇವತೆ ಎಸ್ ಜಾನಕಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ ಸಿನಿಮಾ

Spread the love

ಬೆಂಗಳೂರು: ಗಾನ ಕೋಗಿಲೆ ಎಸ್. ಜಾನಕಿ ಅವರು ಕನ್ನಡದ ಜತೆಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಕ್ಕೂ ಅಧಿಕ ಹಾಡುಗಳನ್ನ ಹಾಡಿರುವ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಕೇವಲ ಗಾಯಕಿಯಷ್ಟೇ ಅಲ್ಲ, ಭಾರತೀಯ ಚಿತ್ರ ಸಂಗೀತದ ದೈತ್ಯ ಶಕ್ತಿ, ಹಾಡು ನಿಲ್ಲಿಸಿದ್ದು ಕೋಟ್ಯಂತರ ಅಭಿಮಾನಿಗಳಲ್ಲಿ ಇನ್ನು ನೆನಪು ಮಾತ್ರ.

ಡಾ. ರಾಜ್‌ಕುಮಾರ್ ಮತ್ತು ಎಸ್. ಜಾನಕಿ ಅವರ ಜೋಡಿ ಹಾಡುಗಳು ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಟ್ರೆಂಡ್ ಸೃಷ್ಟಿ ಮಾಡಿತ್ತು. ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರೊಂದಿಗೆ ಅವರು ಹಾಡಿದ ಪ್ರೇಮ ಗೀತೆಗಳು ಇಂದಿಗೂ ಮರೆಯದ ಹಾಡುಗಳೇ ಸರಿ. 4 ಬಾರಿ ರಾಷ್ಟ್ರ ಪ್ರಶಸ್ತಿ ಗರಿ ಪ್ರಶಸ್ತಿ ಬಾಚಿಕೊಂಡಿರುವ ಶ್ರೇಷ್ಠ ಗಾಯಕಿ, ಎಸ್ ಜಾನಕಿ ಅವರು ಐದು ದಶಕಗಳ ಕಾಲ ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಶೈಲಿಯ ಹಾಡು ಹಾಡಿದ್ದಾರೆ. ಇವರ ಸಂಗೀತ ಸೇವೆಗೆ ಸಾಕಷ್ಟು ಪ್ರಶಸ್ತಿ ಒಲಿದು ಬಂದಿವೆ. ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ಮತ್ತು ಗೌರವ ಡಾಕ್ಟರೇಟ್ ಪದವಿ ಒಲಿದು ಬಂದಿವೆ. ತಮಿಳು, ತೆಲುಗು ಮತ್ತು ಮಲಯಾಳಂ ಹಾಡುಗಳಿಗೆ ಅತ್ಯುತ್ತಮ ಹಿನ್ನೆಲೆ ಗಾಯಕಿ ವಿಭಾಗದಲ್ಲಿ ನಾಲ್ಕು ಬಾರಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *