ತಲಪಾಡಿ: ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಜೀವನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುವ ಉದ್ದೇಶದಿಂದ ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಸೇವಾ ಸಂಘ ಹಾಗೂ ಮಂಗಳೂರು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ವಿನಾಯಕ ಬಿ.ಜಿ. ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ರೋಟರಿ ಸಂಸ್ಥೆಯ ಅಧ್ಯಕ್ಷ ಡೈಡನ್ ಡಿಸಿಲ್ವ ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕಾಲೇಜಿನ ಆವರಣದಲ್ಲಿ ಸುಮಾರು ಹತ್ತು ಸಸಿಗಳನ್ನು ನೆಡಲಾಯಿತು. ಗಣ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಸಸಿ ನೆಡುವ ಮೂಲಕ ಪರಿಸರದ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಎಂಬ ಸಂದೇಶ ಸಾರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಪರಿಸರ ಸಮತೋಲನ ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಪ್ರಕೃತಿ ಸಂಪತ್ತನ್ನು ಉಳಿಸಿಕೊಡಲು ಪ್ರತಿಯೊಬ್ಬರೂ ಸಸಿ ನೆಟ್ಟು ಅವುಗಳನ್ನು ಪೋಷಿಸುವ ಸಂಕಲ್ಪ ಮಾಡಬೇಕು ಎಂದರು.
ಹಸಿರು ಪರಿಸರ ನಿರ್ಮಾಣಕ್ಕೆ ಸಾಮೂಹಿಕ ಜವಾಬ್ದಾರಿ ಮತ್ತು ನಿರಂತರ ಪ್ರಯತ್ನ ಅಗತ್ಯ ಎಂಬ ಸಂದೇಶದೊಂದಿಗೆ ವನಮಹೋತ್ಸವ ಕಾರ್ಯಕ್ರಮಕ್ಕೆ ತೆರೆ ಬಿತ್ತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ವಿನಾಯಕ ಸೇರಿದಂತೆ ಹಲವರು ಇದ್ದರು.
What do you feel about this post?
Like
Love
Happy
Haha
Sad



