ಹುಬ್ಬಳ್ಳಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿನಿ, ಸುರತ್ಕಲ್ ಫ್ಲ್ಯಾಟ್ ನ 5 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ

ಅಂತರ ಜಿಲ್ಲೆ ಅಪರಾಧ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಸುರತ್ಕಲ್: ವೈದ್ಯಕೀಯ ವಿದ್ಯಾರ್ಥಿನಿ ತಾನು ವಾಸವಿದ್ದ ಫ್ಲಾಟ್ ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಮುಕ್ಕ ಶ್ರೀನಿವಾಸ್ ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಹುಬ್ಬಳ್ಳಿ ಮೂಲದ ಮಹಾಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

<

ಮಹಾಲಕ್ಷ್ಮೀ ಅವರು ಸುರತ್ಕಲ್‌ ಫ್ಲ್ಯಾಟ್ ನಲ್ಲಿ ವಾಸವಿದ್ದು, ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. 2ನೇ ಮಹಡಿ ಫ್ಲ್ಯಾಟ್​ನಲ್ಲಿ ವಾಸವಿದ್ದ ಮಹಾಲಕ್ಷ್ಮಿ ಅವರು ಐದನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಮೂಲಗಳಿಂದ ತಿಳಿದು ಬಂದಿದೆ. ಹುಬ್ಬಳ್ಳಿಯಿಂದ ಬಂದಿದ್ದ ಆಕೆಯ ಹೆತ್ತವರೂ ಮನೆಯಲ್ಲಿದ್ದು, ಅವರು ಇದ್ದಾಗಲೇ ಈ ಘಟನೆ ನಡೆದಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *