ಚೆನ್ನಮ್ಮ ಅಂತ್ಯಕ್ರಿಯೆ ಇಂದು ಸರ್ಕಾರಿ ಗೌರವದೊಂದಿಗೆ; ಮಾವಿನಕೆರೆಯಲ್ಲಿ ಸಕಲ ಸಿದ್ಧತೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ಹಾಸನ ಜಿಲ್ಲೆಯ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದ್ದು, ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

<

ಮಾವಿನಕೆರೆ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇರುವುದರಿಂದ ನಾಲ್ಕು ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಕುರ್ಚಿಗಳು ಹಾಗೂ ಶಾಮಿಯಾನಗಳನ್ನು ತರಿಸಲಾಗಿದ್ದು, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ.

ಬೆಳಿಗ್ಗೆ 9.30 ರವರೆಗೆ ಹೊಳೆನರಸೀಪುರದಲ್ಲಿರುವ ಎಚ್.ಡಿ. ರೇವಣ್ಣ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರವನ್ನು ಅಂತಿಮ ಯಾತ್ರೆಯ ಮೂಲಕ ಮಾವಿನಕೆರೆಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆಯಲ್ಲಿಯೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರ ಮಾವಿನಕೆರೆಗೆ ತಲುಪಲಿದ್ದು, ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ರಾಜಕೀಯ ಮುಖಂಡರು, ಗಣ್ಯರು ಹಾಗೂ ಕುಟುಂಬದ ಆಪ್ತರು ಅಂತಿಮ ನಮನ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 3 ಗಂಟೆಯ ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಅಂತ್ಯಕ್ರಿಯೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ ಲಾಲ್ ಖಟ್ಟರ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ರಾಜಕೀಯ ಗಣ್ಯರು ಭಾಗವಹಿಸಲಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *