ಮಂಗಳೂರು: ಆಹಾರ ಭದ್ರತೆ ಮತ್ತು ಸಾರ್ವಜನಿಕ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳ ತಂಡವು ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಬೀದಿ ಬದಿ ಆಹಾರ ಮಳಿಗೆಗಳ ಮೇಲೆ ದಾಳಿ ನಡೆಸಿದೆ.
ಈ ತಪಾಸಣೆ ವೇಳೆ, ನಿಯಮ ಬಾಹಿರವಾಗಿ ಬಳಸಲಾಗುತ್ತಿದ್ದ ಆರೋಗ್ಯಕ್ಕೆ ಹಾನಿಕರವಾದ ಅಜಿನೊಮೊಟೊ ಪದಾರ್ಥವನ್ನು ಅಧಿಕಾರಿಗಳು ಪತ್ತೆ ಹಚ್ಚಿ, ಜಪ್ತಿ ಮಾಡಿಕೊಂಡಿದ್ದಾರೆ
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ನೈರ್ಮಲ್ಯ ಮತ್ತು ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
What do you feel about this post?
0%
Like
0%
Love
0%
Happy
0%
Haha
0%
Sad
0%





