ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ, ಎರಡು ಪ್ರಕರಣಗಳ ತನಿಖೆ ಸಿಐಡಿಗೆ ವರ್ಗಾವಣೆ: ಸಚಿವ ಖರ್ಗೆ

ಮಹಾನಗರ ರಾಜ್ಯ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಹಿನ್ನೆಲೆಯಲ್ಲಿ ದಾಖಲಾಗಿರುವ ಎರಡು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

<

ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾರ್ವಜನಿಕ ಪರೀಕ್ಷೆ (ಭ್ರಷ್ಟಾಚಾರ ಮತ್ತು ನೇಮಕಾತಿಯಲ್ಲಿನ ಅನ್ಯಾಯದ ವಿಧಾನಗಳ ತಡೆ) ಅಧಿನಿಯಮ, 2023ರ ಕಲಂ 10ರಡಿ ದಾಖಲಾಗಿರುವ ಎರಡು ಪ್ರಕರಣಗಳ ಕುರಿತು ನ್ಯಾಯಸಮ್ಮತ, ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ಪರೀಕ್ಷೆಗಳು ಹಾಗೂ ನೇಮಕಾತಿ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಯಾವುದೇ ಅಕ್ರಮ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಈ ಕ್ರಮದ ಮೂಲಕ ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ, ಸತ್ಯಾಂಶವನ್ನು ಹೊರತೆಗೆದು ನ್ಯಾಯಯುತ ತನಿಖೆ ನಡೆಸಲು ಸರ್ಕಾರ ಒತ್ತು ನೀಡಿದೆ. ನೇಮಕಾತಿ ಪ್ರಕ್ರಿಯೆಯ ವಿಶ್ವಾಸ ಉಳಿಸುವುದು ಹಾಗೂ ಅಭ್ಯರ್ಥಿಗಳ ಹಿತಾಸಕ್ತಿಯನ್ನು ಕಾಪಾಡುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *