ಕಾವೇರಿ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ, ಕಾನೂನು ತಜ್ಞರ ಜತೆ ಸಿಎಂ ಸಭೆ

ರಾಜ್ಯ ಮಹಾನಗರ

Spread the love

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ ಇಲಾಖೆಯ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

<

ಸಭೆಯಲ್ಲಿ ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳು, ರಾಜ್ಯದ ಪರವಾಗಿ ಕೈಗೊಳ್ಳಬೇಕಾದ ಮುಂದಿನ ಕ್ರಮಗಳು ಹಾಗೂ ನ್ಯಾಯಮಂಡಳಿಗಳು ಮತ್ತು ಸಂಬಂಧಿತ ಪ್ರಾಧಿಕಾರಗಳ ಮುಂದೆ ಮಂಡಿಸಬೇಕಾದ ವಾದಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

ಇದೇ ವೇಳೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಹೋರಾಟದ ಕುರಿತು ದೆಹಲಿಯಲ್ಲಿ ಹಿರಿಯ ವಕೀಲರೊಂದಿಗೆ ಸಭೆ ನಡೆಸಲಿದ್ದಾರೆ. ಹಿರಿಯ ನ್ಯಾಯವಾದಿ ಮೋಹನ್ ಕಾತರಕಿ ಸೇರಿದಂತೆ ಕಾನೂನು ತಜ್ಞರೊಂದಿಗೆ ಮಾತುಕತೆ ನಡೆಸಿ ರಾಜ್ಯದ ಮುಂದಿನ ಕಾನೂನು ಕಾರ್ಯತಂತ್ರ ರೂಪಿಸುವ ಸಾಧ್ಯತೆ ಇದೆ.

ಕಾವೇರಿ ವಿವಾದದಲ್ಲಿ ರಾಜ್ಯ ಸರ್ಕಾರ ಸಮರ್ಪಕವಾಗಿ ವಾದ ಮಂಡಿಸುತ್ತಿಲ್ಲ ಎಂಬ ಆರೋಪವನ್ನು ವಿರೋಧ ಪಕ್ಷದ ಶಾಸಕರು ಹಾಗೂ ಕೆಲವು ಮುಖಂಡರು ಇತ್ತೀಚೆಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸಂಬಂಧಿತ ಆಯೋಗ ಮತ್ತು ಮಂಡಳಿಗಳ ಮುಂದೆ ಪರಿಣಾಮಕಾರಿಯಾಗಿ ಮಂಡಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಈ ಬೆಳವಣಿಗೆಗಳ ನಡುವೆಯೇ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಅಧಿಕಾರಿಗಳ ಸಭೆ ಹಾಗೂ ಮುಖ್ಯಮಂತ್ರಿ ಅವರ ಕಾನೂನು ತಜ್ಞರೊಂದಿಗಿನ ಸಮಾಲೋಚನೆಗೆ ಮಹತ್ವ ಸಿಕ್ಕಿದ್ದು, ಕಾವೇರಿ ವಿವಾದದಲ್ಲಿ ರಾಜ್ಯದ ಮುಂದಿನ ನಡೆ ಏನಿರಲಿದೆ ಎಂಬುದರ ಕುರಿತು ಕುತೂಹಲ ಮೂಡಿಸಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *