ಉಡುಪಿ: ಖಾಸಗಿ ಬಸ್‌ ಡಿಕ್ಕಿ, ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸಾವು

ಅಪರಾಧ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಉಡುಪಿ: ಉಡುಪಿ ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಸಮೀಪ ಶನಿವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್  (37) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

<

ಕಡಿಯಾಳಿ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಬಳಿಕ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್‌ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಡಿಕ್ಕಿ ರಭಸಕ್ಕೆ ಲಕ್ಷ್ಮೀ ಅವರು  ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣ ಆಗಿದ್ದು, ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ದುರ್ಘಟನೆ ಉಡುಪಿ ನಗರದಲ್ಲಿ ಶೋಕದ ವಾತಾವರಣ ನಿರ್ಮಿಸಿದ್ದು, ಸಾರ್ವಜನಿಕರು ಹಾಗೂ ರಾಜಕೀಯ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *