ಕರ್ನಾಟಕಕ್ಕೆ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ: ಪ್ರಧಾನಿಗೆ ಸಿಎಂ ಡಿಕೆಶಿ ಮನವಿ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ರಾಜಕೀಯ ರಾಜ್ಯ ಶಿರಸಿ

Spread the love

ಮೈಸೂರು: ಭಾರತ ಪ್ರಗತಿ ಸಾಧಿಸಬೇಕಾದರೆ, ಕರ್ನಾಟಕದೊಂದಿಗೆ ಪ್ರಗತಿ ಸಾಧಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ, ಕರ್ನಾಟಕ್ಕೆ ನೆರವು ನೀಡುವಾಗ ಹೃದಯ ವೈಶಾಲ್ಯತೆಯಿಂದ ನೆರವು ನೀಡಿ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

<

ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ವಿವೇಕ ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಶನಿವಾರ ಮಾತನಾಡಿದರು.

“ವಿವೇಕಾನಂದರ ತ್ಯಾಗ ನಮಗೆ ಸ್ಫೂರ್ತಿಯಾಗಬೇಕಿದೆ. ಅವರ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕಿದೆ. ಈ ಕಾರ್ಯಕ್ರಮ ಯುವ ಕ್ರಾಂತಿಯ ಐತಿಹಾಸಿಕ ಘಳಿಗೆಯಾಗಿದೆ. ನೀವು ಸೋತಾಗ ಧೈರ್ಯವಾಗಿರಿ, ನೀವು ಗೆದ್ದಾಗ ಹೃದಯ ವೈಶಾಲ್ಯತೆ ಹೊಂದಿರಬೇಕು ಎಂದು ವಿವೇಕಾನಂದ ಅವರು ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು.

“ಇಡೀ ವಿಶ್ವ ಕರ್ನಾಟಕದತ್ತ ತಿರುಗಿ ನೋಡುತ್ತಿದೆ. ಇಡೀ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರು ಮೂಲಕ ನೋಡಲಾಗುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗಾಗಿ ಬೆಂಗಳೂರಿಗೆ ಬಂದಾಗ, ಇಷ್ಟು ದಿನ ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ಬೇರೆ ನಗರಗಳಿಗೆ ಹೋಗುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು ನಂತರ ದೇಶದ ಬೇರೆ ನಗರಗಳಿಗೆ ಹೋಗುತ್ತಾರೆ ಎಂದು ಹೇಳಿದ್ದರು. ಆಗ ಇದೇ ಸಂಸ್ಥೆಯಲ್ಲಿ ಓದಿದ್ದ ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದರು” ಎಂದು ಹೇಳಿದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *