ರಾಜ್ಯ ಸಚಿವ ಸಂಪುಟ ವಿಸ್ತರಣೆ ಪೂರ್ಣ: 20 ಮಂದಿಗೆ ಸಚಿವ ಸ್ಥಾನ, 13 ಹೊಸ ಮುಖಗಳಿಗೆ ಅವಕಾಶ,  ಹೆಬ್ಬಾಳಕರ್, ಆರ್ವಿಡಿಗೆ ನಿರಾಶೆ

ಜಿಲ್ಲಾ ಸುದ್ದಿ ಉಡುಪಿ ಕಾರವಾರ ಕುಂದಾಪುರ ಪುತ್ತೂರು ಮಂಗಳೂರು ಮಹಾನಗರ ರಾಜಕೀಯ ರಾಜ್ಯ ಶಿರಸಿ

Spread the love

ಬೆಂಗಳೂರು:  ಹಲವು ದಿನಗಳ ರಾಜಕೀಯ ಚರ್ಚೆ, ಲೆಕ್ಕಾಚಾರ ಮತ್ತು ತೀವ್ರ ನಿರೀಕ್ಷೆಗೆ ತೆರೆ ಬಿದ್ದಿದ್ದು, ರಾಜ್ಯ ಸರ್ಕಾರದ ಸಚಿವ ಸಂಪುಟವನ್ನು ಸೋಮವಾರ ವಿಸ್ತರಿಸಲಾಗಿದೆ. ಒಟ್ಟು 20 ಮಂದಿ ಶಾಸಕರು ಸಚಿವರಾಗಿ ಆಯ್ಕೆಯಾಗಿದ್ದು, ಅವರ ಅಧಿಕೃತ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಪೈಕಿ 13 ಮಂದಿ ಮೊದಲ ಬಾರಿಗೆ ಸಚಿವ ಸಂಪುಟ ಪ್ರವೇಶಿಸಿದ್ದು, ಒಬ್ಬ ಮಹಿಳಾ ಶಾಸಕರಿಗೆ ಅವಕಾಶ ಕಲ್ಪಿಸಲಾಗಿದೆ.

<

ನೂತನ ಸಚಿವರು ಸೋಮವಾರ ಸಂಜೆ ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ಪ್ರಬಲ ಪೈಪೋಟಿ ನಡೆಸಿದ್ದರೂ, ಅಂತಿಮ ಪಟ್ಟಿಯನ್ನು ಎಐಸಿಸಿ ಹೈಕಮಾಂಡ್ ಅನುಮೋದಿಸಿದ ಬಳಿಕವೇ ಅಧಿಕೃತವಾಗಿ ಪ್ರಕಟಿಸಲಾಗಿದೆ. ಕೊನೆಯ ಕ್ಷಣದವರೆಗೂ ಪಟ್ಟಿಯನ್ನು ಗೌಪ್ಯವಾಗಿರಿಸಲಾಗಿತ್ತು.

ಈ ಬಾರಿ ಖಾಲಿ ಇದ್ದ ಎಲ್ಲಾ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. ಸಚಿವ ಸಂಪುಟ ರಚನೆಯ ಜೊತೆಗೆ ವಿಧಾನಸಭೆಯ ಸ್ಪೀಕರ್, ಉಪಸಭಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಮತ್ತು ಉಪಸಭಾಪತಿ ಹುದ್ದೆಗಳಿಗೂ ನೇಮಕಾತಿ ಪ್ರಕಟಿಸಲಾಗಿದೆ. ಜಿ.ಎಸ್. ಪಾಟೀಲ ಅವರನ್ನು ವಿಧಾನಸಭಾಧ್ಯಕ್ಷರಾಗಿ, ಪೊನ್ನಣ್ಣ ಅವರನ್ನು ಉಪಸಭಾಧ್ಯಕ್ಷರಾಗಿ, ಸಲೀಂ ಅಹ್ಮದ್ ಅವರನ್ನು ವಿಧಾನ ಪರಿಷತ್ ಸಭಾಪತಿಯಾಗಿ ಹಾಗೂ ಉಮಾಶ್ರೀ ಅವರನ್ನು ಉಪಸಭಾಪತಿಯಾಗಿ ಆಯ್ಕೆ ಮಾಡಲಾಗಿದೆ.

ಮೊದಲ ಬಾರಿಗೆ ಸಚಿವರಾದವರು
ಪಿ.ಎಂ. ನರೇಂದ್ರಸ್ವಾಮಿ (ಮಳವಳ್ಳಿ)
ರುದ್ರಪ್ಪ ಲಮಾಣಿ (ಹಾವೇರಿ)
ಕೆ.ಎಸ್. ಬಸವಂತಪ್ಪ (ಮಾಯಕೊಂಡ)
ಟಿ. ರಘುಮೂರ್ತಿ (ಚಳ್ಳಕೆರೆ)
ರಿಜ್ವಾನ್ ಅರ್ಷದ್ (ಶಿವಾಜಿನಗರ)
ಸಿ. ಪುಟ್ಟರಂಗಶೆಟ್ಟಿ (ಚಾಮರಾಜನಗರ)
ಅಜಯ್ ಸಿಂಗ್ (ಜೇವರ್ಗಿ)
ಕೆ.ಎಂ. ಶಿವಲಿಂಗೇಗೌಡ (ಅರಸೀಕೆರೆ)
ಎಚ್.ಸಿ. ಬಾಲಕೃಷ್ಣ (ಮಾಗಡಿ)
ಗಾಯತ್ರಿ ಶಾಂತೇಗೌಡ (ವಿಧಾನ ಪರಿಷತ್ ಸದಸ್ಯೆ)
ಬಸವರಾಜ್ ರಾಯರೆಡ್ಡಿ (ಯಲಬುರ್ಗಾ)
ವಿಜಯಾನಂದ ಕಾಶಪ್ಪನವರ್ (ಹುನಗುಂದ)
ಲಕ್ಷ್ಮಣ ಸವದಿ (ಅಥಣಿ)

ಈ ಬಾರಿಯ ಸಂಪುಟ ವಿಸ್ತರಣೆಯಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದ್ದರೆ, ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಕೆಲವು ಹಿರಿಯರಿಗೆ ಅವಕಾಶ ಸಿಗದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *