ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು ಪ್ರಸ್ತಾಪಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವ ವಿರೋಧಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ವಕೀಲರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು, ಉತ್ತರ ಕನ್ನಡ ಜಿಲ್ಲೆಯನ್ನು ಸದ್ಯ ಇರುವ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲೇ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವುದರಿಂದ ಜಿಲ್ಲೆಯ ಜನರಿಗೆ ನ್ಯಾಯಾಂಗ ಸೇವೆ ಪಡೆಯಲು ಅನಾನುಕೂಲವಾಗಲಿದೆ. ಹೀಗಾಗಿ ಜಿಲ್ಲೆಯನ್ನು ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಿಂದ ಬದಲಾಯಿಸಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರಿಗೆ ಮನವಿ ಸಲ್ಲಿಸಲಾಯಿತು.
ಮಾಜಿ ಸಚಿವ ಆನಂದ ಅಸ್ನೋಟಿಕರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಾಗರಾಜ ನಾಯಕ್, ಮಾಜಿ ಶಾಸಕಿ ರೂಪಾಲಿ ನಾಯ್ಕ್ ಹಾಗೂ ಜಿಲ್ಲಾ ವಕೀಲರ ಸಂಘದ ಪ್ರತಿನಿಧಿಗಳು, ಕನ್ನಡ ಪರ ಸಂಘಟನೆಗಳ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.
What do you feel about this post?
Like
Love
Happy
Haha
Sad







