ಆಹಾರ ಸುರಕ್ಷತೆಗೆ ಜನರನ್ನೇ ಕಾವಲುಗಾರರನ್ನಾಗಿಸಲು ಸರ್ಕಾರದ ಚಿಂತನೆ: ಸಚಿವ ಯು.ಟಿ. ಖಾದರ್

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಮಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘನೆ ತಡೆಯಲು ಅಧಿಕಾರಿಗಳು ಪ್ರತಿಬಾರಿ ದಾಳಿ ನಡೆಸುವುದಕ್ಕಿಂತ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಹಾರ ಸುರಕ್ಷತೆ ಕಾಪಾಡುವ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್‌ಗಳನ್ನು ರಚಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

<

ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ 60 ವರ್ಷ ಮೇಲ್ಪಟ್ಟವರನ್ನೂ ಒಳಗೊಂಡಂತೆ ಆಸಕ್ತರನ್ನು ಈ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. ಆಹಾರ ಸುರಕ್ಷತೆ, ಆರೋಗ್ಯ ಮತ್ತು ಗುಣಮಟ್ಟದ ಆಹಾರದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜತೆಗೆ ನಿಯಮ ಉಲ್ಲಂಘನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವ ಕಾರ್ಯವನ್ನು ತಂಡಗಳು ಮಾಡಲಿವೆ ಎಂದರು.

ಕೋಳಿ ಮಾಂಸವನ್ನು ಎಷ್ಟು ದಿನಗಳವರೆಗೆ ಸಂಗ್ರಹಿಸಬಹುದು ಎಂಬುದಕ್ಕೆ ದೇಶದಲ್ಲಿ ನಿಯಮಗಳಿವೆ. ಈ ಕುರಿತು ಗ್ರಾಹಕರಿಗೆ ಸ್ಪಷ್ಟ ಮಾಹಿತಿ ದೊರೆಯುವಂತೆ ಹೋಟೆಲ್‌ಗಳು ಮತ್ತು ಆಹಾರ ಸಂಸ್ಥೆಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸಬೇಕು. ಆಹಾರ ಪದಾರ್ಥಗಳ ಗುಣಮಟ್ಟ ಹಾಗೂ ಅವುಗಳಲ್ಲಿರುವ ಸಕ್ಕರೆ ಪ್ರಮಾಣದ ಬಗ್ಗೆಯೂ ಸೂಕ್ತ ನಿಯಮಗಳನ್ನು ರೂಪಿಸುವ ಅಗತ್ಯವಿದ್ದು, ಈ ಕುರಿತು ಕೇಂದ್ರ ಸರ್ಕಾರವೂ ಗಮನಹರಿಸಬೇಕು ಎಂದರು.

ಕೃತಕ ಪನ್ನೀರ್‌ಗೆ ನಿಷೇಧ

ಸಸ್ಯಾಹಾರಿ ಆಹಾರದ ಬೇಡಿಕೆ ಹೆಚ್ಚಿರುವ ಪ್ರದೇಶಗಳಲ್ಲಿ ಕೃತಕ ಪನ್ನೀರ್‌ ಬಳಕೆಯಾಗುತ್ತಿದೆ ಎಂಬ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೃತಕ ಪನ್ನೀರ್‌ ಬಳಕೆಯನ್ನು ನಿಷೇಧಿಸಲಾಗಿದ್ದು, ಕೃತಕ ಆಹಾರ ಪದಾರ್ಥಗಳ ವಿರುದ್ಧ ಕ್ರಮ ಮುಂದುವರಿಯಲಿದೆ ಎಂದು ಖಾದರ್‌ ತಿಳಿಸಿದರು.

ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣದ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಜಿನಮೊಟೊ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವುದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ. ಆದರೆ ಅದರ ಬಳಕೆಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದರು.

ನಿಕೋಟಿನ್‌ಯುಕ್ತ ಗುಟ್ಕಾ, ಪಾನ್‌ಮಸಾಲಾ ವಿರುದ್ಧ ಕ್ರಮ

ಗುಟ್ಕಾ ಹಾಗೂ ಪಾನ್‌ಮಸಾಲಾದಲ್ಲಿ ನಿಕೋಟಿನ್‌ ಸೇರಿಸಿ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ವಿಮಾನಗಳಿಗೆ ಆಹಾರ ಹಾಗೂ ಇತರ ವಸ್ತುಗಳ ಸರಬರಾಜು ಮಾಡುವ ಕಂಪನಿಗಳೊಂದಿಗೆ ಈ ಕುರಿತು ಚರ್ಚಿಸಲಾಗುವುದು ಎಂದರು.

ನಕಲಿ ಔಷಧ ಜಾಲದ ವಿರುದ್ಧ ಎಸ್‌ಐಟಿ ತನಿಖೆ

ನಕಲಿ ಔಷಧ ಜಾಲದ ವಿರುದ್ಧ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಲಾಗುವುದು. ಹೋಟೆಲ್‌ಗಳು, ಔಷಧ ಮಳಿಗೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ 400ಕ್ಕೂ ಅಧಿಕ ದೂರುಗಳು ಬಂದಿವೆ. ದೂರುಗಳ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *