ಅಂಗನವಾಡಿ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಜಿಲ್ಲಾ ಸುದ್ದಿ ಕಾರವಾರ ಶಿರಸಿ

Spread the love

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ಕೈಗೊಂಡಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

<

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ 91 ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಈ ಕುರಿತು ಸಂಬಂಧಪಟ್ಟ ಕಾಮಗಾರಿ ನಿರ್ಮಾಣ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಪ್ರಗತಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಮೂಲಸೌಕರ್ಯಗಳು ಲಭ್ಯವಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ದುರಸ್ತಿ ಅಗತ್ಯವಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನದ ಅಗತ್ಯವಿರುವ ಸ್ಥಳಗಳನ್ನು ಗುರುತಿಸಿ, ನಿವೇಶನ ಒದಗಿಸುವ ಕುರಿತು ಸ್ಥಳೀಯವಾಗಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾವುದೇ ಕಾರಣಕ್ಕೂ ನಿವೇಶನದ ಸಮಸ್ಯೆಯಿಂದ ಕಟ್ಟಡ ನಿರ್ಮಾಣ ಕಾಮಗಾರಿ ವಿಳಂಬವಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ತಲುಪುವಂತೆ ಇಲಾಖೆಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು.

ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯೋಜನೆಯ ಉದ್ದೇಶ ಹಾಗೂ ಪ್ರಯೋಜನಗಳು ಅರ್ಹರಿಗೆ ತಲುಪುವಂತೆ ಕ್ಷೇತ್ರಮಟ್ಟದಲ್ಲಿ ಹೆಚ್ಚಿನ ಗಮನಹರಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ನಟರಾಜ್ ಹಾಗೂ ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಇದ್ದರು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

Leave a Reply

Your email address will not be published. Required fields are marked *