ಕೂಡ್ಲಿಗಿ: “ಇಂದಿರಾಗಾಂಧಿ ಅವರ ಹೆಸರಿರುವ ಶಾಲೆ ಮುಚ್ಚಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದಾಗ ಮನವಿ ನೀಡಲು ಬಂದಿದ್ದ ಶಿಕ್ಷಕಿಯರು ಮುಖ್ಯಮಂತ್ರಿಯವರ ಕೈ ಹಿಡಿದು ಭಾವುಕರಾದರು.
ಕೂಡ್ಲಿಗಿಯಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಭಿಯಾನದ ಮೊದಲ ಕಾರ್ಯಕ್ರಮ ಭಾವುಕ ಸನ್ನಿವೇಶಕ್ಕೆ ಸಾಕ್ಷಿಯಾಯಿತು.
ಶಾಲೆಯ ಶಿಕ್ಷಕಿಯರಾದ ಶಾಂತಾ, ಜಗನ್ಮಾಥೆ, ಭಾರತಿ, ವೆಂಕಟೇಶ್ ಅವರುಗಳು ಸಿಎಂಗೆ ಮನವಿ ನೀಡಿ, “ಸಿಎಂ ಸಾರ್ ಹಗರಿಬೊಮ್ಮನಹಳ್ಳಿ, ರಾಮನಗರದಲ್ಲಿ ಇಂದಿರಾಗಾಂಧಿ ಅವರ ಹೆಸರಿನಲ್ಲಿ ನಡೆಯುತ್ತಿರುವ ಏಕೈಕ ಅನುದಾನಿತ ಪ್ರೌಢಶಾಲೆ ಇದಾಗಿದೆ. 169 ಜನ ಬಾಲಕಿಯರು ಓದುತ್ತಿದ್ದಾರೆ” ಎಂದರು.
ಸಿಎಂ ಕೂಡಲೇ ಜಿಲ್ಲಾ ಪಂಚಾಯತಿ ಸಿಇಓ ಕರೆದು “ಈ ಶಾಲೆಯ ಉಳಿವಿಗೆ ಏನು ಅಗತ್ಯ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಿ” ಎಂದು ಸೂಚಿಸಿದರು.



