ವೆನ್ಲಾಕ್‌ ಆಸ್ಪತ್ರೆಗೆ 400 ಹಾಸಿಗೆ ಹೆಚ್ಚಳ ಸರಕಾರದ ಅನುಮೋದನೆ, ಸಂಪುಟದ ನಿರ್ಣಯಕ್ಕೆ ಗ್ರೀನ್ ಸಿಗ್ನಲ್

ಅಂತರ ಜಿಲ್ಲೆ ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ಮಹಾನಗರ ರಾಜ್ಯ ಶಿರಸಿ

Spread the love

ಬೆಂಗಳೂರು: ಇಲ್ಲಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಹೆಚ್ಚುವರಿ 400 ಹಾಸಿಗೆಯ ಹೆಚ್ಚಳದ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಮೊದಲ ಹಂತದಲ್ಲಿ 200 ಹಾಸಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

<

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಸ್ತಾವನೆ ಹಾಗೂ ಸಚಿವ ಸಂಪುಟದ ನಿರ್ಣಯದ ಆಧಾರದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಯನ್ನು ಹಂತ ಹಂತವಾಗಿ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 200 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗುವುದು. ಈ ಹಂತಕ್ಕೆ 200 ಕೋಟಿ ವೆಚ್ಚ ಅಂದಾಜಿಸಲಾಗಿದೆ.

ಹೊಸ ಆಸ್ಪತ್ರೆಯಲ್ಲಿ ಮೂಳೆಚಿಕಿತ್ಸೆ, ಚರ್ಮರೋಗ, ನೇತ್ರಚಿಕಿತ್ಸೆ, ಸಾಮಾನ್ಯ ವೈದ್ಯಕೀಯ ಸೇರಿದಂತೆ ವಿವಿಧ ವಿಭಾಗಗಳ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಮೂತ್ರಶಾಸ್ತ್ರ, ಮಕ್ಕಳ ಶಸ್ತ್ರಚಿಕಿತ್ಸೆ, ಹೃದ್ರೋಗ ಚಿಕಿತ್ಸೆಗೆ ಸಂಬಂಧಿಸಿದ ಕ್ಯಾಥ್‌ಲ್ಯಾಬ್‌, ರಕ್ತ ವರ್ಗಾವಣೆ ಕೇಂದ್ರ ಹಾಗೂ ಔಷಧ ಪ್ರತಿರೋಧಕ ಕ್ಷಯರೋಗ ಚಿಕಿತ್ಸಾ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಇದೆ.

ಹೃದಯ ಮತ್ತು ರಕ್ತನಾಳ ಶಸ್ತ್ರಚಿಕಿತ್ಸೆ, ನರಶಸ್ತ್ರಚಿಕಿತ್ಸೆ, ನರರೋಗ ಚಿಕಿತ್ಸೆ, ಮೂತ್ರಪಿಂಡ ಚಿಕಿತ್ಸಾ ವಿಭಾಗಗಳನ್ನೂ ಬಲಪಡಿಸಲು ಉದ್ದೇಶಿಸಲಾಗಿದೆ. ಸಮಗ್ರ ಕ್ಯಾನ್ಸರ್ ಚಿಕಿತ್ಸೆಗೆ ವಿಕಿರಣ ಚಿಕಿತ್ಸೆ, ಔಷಧ ಚಿಕಿತ್ಸೆ, ಶಸ್ತ್ರಚಿಕಿತ್ಸೆ ಹಾಗೂ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆ ವಿಭಾಗಗಳನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆ ಇದೆ.

ಆಸ್ಪತ್ರೆಯ ವಿಸ್ತರಣೆಯೊಂದಿಗೆ ಅಗತ್ಯ ವೈದ್ಯರು, ಶುಶ್ರೂಷಕರು ಹಾಗೂ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿ ನೇಮಕ, ತೀವ್ರ ನಿಗಾ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು.

What do you feel about this post?

0%
like

Like

0%
love

Love

0%
happy

Happy

0%
haha

Haha

0%
sad

Sad

0%
angry

Angry

sanotsh

Leave a Reply

Your email address will not be published. Required fields are marked *