
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಬ್ಯಾಚ್ನ ಐಎಎಸ್ ಅಧಿಕಾರಿ ಬೋಯರ್ ಹರ್ಷಲ್ ನಾರಾಯಣ ರಾವ್ ಬುಧವಾರ ಅಧಿಕಾರ ವಹಿಸಿಕೊಂಡರು.
ಮಹಾರಾಷ್ಟ್ರ ಮೂಲದವರಾದ ಹರ್ಷಲ್ ನಾರಾಯಣ ರಾವ್ ಅವರು ಈ ಹಿಂದೆ ಸವಣೂರು ತಾಲ್ಲೂಕಿನ ಉಪವಿಭಾಗಾಧಿಕಾರಿಯಾಗಿ, ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹಾಗೂ ಯಾದಗಿರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಇದಲ್ಲದೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ನಾಗರಿಕ ಸೇವೆಗಳ ವಿದ್ಯುನ್ಮಾನ ವಿತರಣೆಯ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಇದೀಗ ಉತ್ತರ ಕನ್ನಡ ಜಿಲ್ಲೆಯ ಆಡಳಿತದ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ.






