ಕುಮಟಾ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉತ್ತರ ಕನ್ನಡ ಜಿಲ್ಲೆಗೆ ಹಂಚಿಕೆ ಮಾಡಿರುವ ಹೊಸ ಪತ್ರಿಕಾ ವಾಹನಕ್ಕೆ ಕುಮಟಾ ಆಡಳಿತ ಸೌಧದ ಆವರಣದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹಸಿರು ನಿಶಾನೆ ತೋರಿದರು.
ಜಿಲ್ಲಾಧಿಕಾರಿ ಕಚೇರಿ ಡಿವಿ ಶಾಖೆಯ 3 ಹೊಸ ವಾಹನ, ಚುನಾವಣೆ ಶಾಖೆ ಹಾಗೂ ದಾಂಡೇಲಿ ತಹಶೀಲ್ದಾರ್ ಕಚೇರಿಯ ನೂತನ ವಾಹನಕ್ಕೂ ಕೂಡ ಸಚಿವರು ಚಾಲನೆ ನೀಡಿದರು.
ಶಾಸಕರಾದ ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ್ ಕುಮಾರ್ ಇದ್ದರು.
What do you feel about this post?
0%
Like
0%
Love
0%
Happy
0%
Haha
0%
Sad
0%



