ಎಂಐಒ ಆಸ್ಪತ್ರೆಯ ಡಾ. ವಿಶ್ವಪ್ರಿಯಾ ಗೋದ್ಖಿಂಡಿಗೆ ಪ್ರತಿಷ್ಠಿತ ಯುರೋಪಿಯನ್ ಪೆಥಾಲಜಿ ಗೌರವ

ಆರೋಗ್ಯ ಉಡುಪಿ ಕಾರವಾರ ಕುಂದಾಪುರ ಜಿಲ್ಲಾ ಸುದ್ದಿ ಪುತ್ತೂರು ಮಂಗಳೂರು ರಾಜ್ಯ ಶಿರಸಿ

Spread the love

ಮಂಗಳೂರು: ಇಲ್ಲಿನ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿ (ಎಂಐಒ) ಆಸ್ಪತ್ರೆಯಲ್ಲಿ ಪೆಥಾಲಜಿ ಕನ್ಸಲ್ಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರು ಯುರೋಪಿಯನ್ ಸೊಸೈಟಿ ಆಫ್ ಪೆಥಾಲಜಿ ಅಕಾಡೆಮಿ–2026 ರ ಗೌರವಕ್ಕೆ ಭಾಜನರಾಗಿದ್ದಾರೆ ಎಂದು ಎಂಐಒ ಆಸ್ಪತ್ರೆಯ ನಿರ್ದೇಶಕ ಡಾ. ಸುರೇಶ್ ರಾವ್ ಅವರು ತಿಳಿಸಿದ್ದಾರೆ.

<

ಪೆಥಾಲಜಿ ಕ್ಷೇತ್ರದಲ್ಲಿ ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಸಾಧನೆ ಗುರುತಿಸಿ ಈ ಗೌರವ ಲಭಿಸಿದೆ. 2026ನೇ ಸಾಲಿನಲ್ಲಿ ಯೂರೋಪಿಯನ್ ಸೊಸೈಟಿ ಆಫ್ ಪಥಾಲಜಿ ವತಿಯಿಂದ ಆಯ್ಕೆಯಾದ ಏಕೈಕ ಭಾರತೀಯ ಪ್ರಶಸ್ತಿ ಪುರಸ್ಕೃತರು ಎಂಬ ಹೆಗ್ಗಳಿಕೆ ಅವರದು. ಈ ಪ್ರತಿಷ್ಠಿತ ಅಂತರ ರಾಷ್ಟ್ರೀಯ ಮಾನ್ಯತೆಗೆ ಆಯ್ಕೆಯಾಗಿರುವ ಡಾ. ವಿಶ್ವಪ್ರಿಯಾ ಗೋದ್ಖಿಂಡಿ ಅವರನ್ನು ಎಂಐಒ ಆಡಳಿತ ಮಂಡಳಿ, ವೈದ್ಯರು ಹಾಗೂ ಸಿಬ್ಬಂದಿ ಅಭಿನಂದಿಸಲಿದ್ದಾರೆ ಎಂದರು.

ಈ ಸಾಧನೆ ಎಂಐಒ ಸಂಸ್ಥೆಯ ಶೈಕ್ಷಣಿಕ ಗುಣಮಟ್ಟ ಮತ್ತು ಉತ್ತಮ ಕ್ಯಾನ್ಸರ್ ನಿರ್ಣಯ ಹಾಗೂ ಚಿಕಿತ್ಸೆಯತ್ತ ಇರುವ ಬದ್ಧತೆ ಪ್ರತಿಬಿಂಬಿಸುತ್ತದೆ. ಅವರ ಮುಂದಿನ ಶೈಕ್ಷಣಿಕ ಹಾಗೂ ಸಂಶೋಧನಾ ಕಾರ್ಯಗಳಿಗೆ ಆಸ್ಪತ್ರೆಯ ವತಿಯಿಂದ ಶುಭ ಹಾರೈಕೆ ಇದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *