ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪದಗ್ರಹಣ, 9 ಮಂದಿ ಸಂಪುಟಕ್ಕೆ, ರಾಜ್ಯಪಾಲರಿಂದ ಪ್ರತಿಜ್ಞಾವಿಧಿ ಬೋಧನೆ, ಟಿವಿಕೆ ಕಾರ್ಯಕರ್ತರ ಸಂಭ್ರಮ

ದೇಶ ವಿದೇಶ ರಾಜಕೀಯ

Spread the love

ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಕ ಅಧ್ಯಕ್ಷ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿ ಆಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಸುಮಾರು ಆರು ದಶಕಗಳ ಆಡಳಿತ ಅಂತ್ಯಗೊಂಡಿದ್ದು, ಇಂದಿನಿಂದ ದಳಪತಿ ವಿಜಯ್ ಸರಕಾರ ಶುರುವಾಗಿದೆ. ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡುತ್ತಿದ್ದಂತೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದರು.

<

234 ಸದಸ್ಯರ ವಿಧಾನಸಭೆಯಲ್ಲಿ 120 ಶಾಸಕರ ಬೆಂಬಲ ಪಡೆದ ಬಳಿಕ ತಮಿಳುನಾಡು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಶನಿವಾರ ವಿಜಯ್ ಅವರನ್ನು ನಿಯೋಜಿತ ಮುಖ್ಯಮಂತ್ರಿ ಆಗಿ ನೇಮಿಸಿ ಸರ್ಕಾರ ರಚಿಸಲು ಆಹ್ವಾನಿಸಿದ್ದರು.

ಚೆನ್ನೈ ನೆಹರೂ ಕ್ರೀಡಾಂಗಣದಲ್ಲಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್‌ ನಾಯಕ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿಜಯ್ ಅವರ ಜತೆಗೆ 9 ಮಂದಿ ಟಿವಿಕೆ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದರು.

ಪದಗ್ರಹಣ ನಂತರ ಮಾತನಾಡಿದ ಮುಖ್ಯಮಂತ್ರಿ ವಿಜಯ್ ಅವರು, ಚುನಾವಣೆ ವೇಳೆ ನೀಡಿರುವ ಎಲ್ಲ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಹೇಳಿದರು, ನನಗೂ ಸಮಯ ಕೋಡಿ, ನಿಮ್ಮ ಸಹಕಾರ ನನಗೆ ಮುಖ್ಯ ಎಂದಿದ್ದಾರೆ.

 

Leave a Reply

Your email address will not be published. Required fields are marked *