Gulf Medical University begins 2026-27 academic year

Dubai: Gulf Medical University (GMU) began its 2026-27 academic year on August 31, with students and faculty returning to campus amid a focus on academic excellence, research and innovation in health professions education. Chancellor Prof Manda Venkatramana said the university would focus on preparing healthcare professionals to meet the changing needs of communities in the […]

Continue Reading

ಪದ್ಮರಾಜ್ ಪೂಜಾರಿ ಹೆಗಲಿಗೆ ದ. ಕ ಜಿಲ್ಲಾ ಕಾಂಗ್ರೆಸ್ ಸಾರಥ್ಯ: ಕೈ ಪಾಳೆಯದಲ್ಲಿ ಹೊಸ ಹುರುಪು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಮಾಡಲಾಗಿದೆ. ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಜಿಲ್ಲೆಯ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖ ನಾಯಕರೊಂದಿಗೆ ಚರ್ಚೆ […]

Continue Reading

ಬಿಜೈನ ಭಾರತ್ ಮಾಲ್‌ ಸ್ಮಾರ್ಟ್ ಬಜಾರ್‌ನಲ್ಲಿ ಶಿಕ್ಷಕರಿಗೆ ಗೌರವ, ಸರ್ಕಾರಿ ಶಾಲೆಗಳ ಶಿಕ್ಷಕರು, ವೈದ್ಯಕೀಯ ಪ್ರಾಧ್ಯಾಪಕರಿಗೆ ಸನ್ಮಾನ

ಮಂಗಳೂರು: ಬಿಜೈನ ಭಾರತ್ ಮಾಲ್‌ನ ಸ್ಮಾರ್ಟ್ ಬಜಾರ್‌ನಲ್ಲಿ ಮಹಿಳಾ ಬುಧವಾರದ ಅಂಗವಾಗಿ ವಿಶೇಷ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ತೊಡಗಿಸಿಕೊಂಡಿರುವ ಪ್ರಾಧ್ಯಾಪಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಆಸ್ಪತ್ರೆಗಳಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ತರಬೇತಿ ನೀಡುತ್ತಿರುವ ಪ್ರಾಧ್ಯಾಪಕರನ್ನು ಸನ್ಮಾನಿಸಲಾಯಿತು. ಶಿಕ್ಷಕರು ಸಮಾಜ ನಿರ್ಮಾಣದಲ್ಲಿ ವಹಿಸುತ್ತಿರುವ ಮಹತ್ವದ ಪಾತ್ರ ಹಾಗೂ ಅವರ ನಿರಂತರ ಸೇವೆಯನ್ನು ಗುರುತಿಸಿ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ […]

Continue Reading

ಸತೀಶ್ ಜಾರಕಿಹೊಳಿ ನಿವಾಸ ಸೇರಿ 14 ಕಡೆ ಇ.ಡಿ. ದಾಳಿ; ಅಬಕಾರಿ ಹಗರಣ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶೋಧ

ಬೆಂಗಳೂರು: ಅಬಕಾರಿ ಇಲಾಖೆಗೆ ಸಂಬಂಧಿಸಿದ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಗಳು ಸೇರಿದಂತೆ ಹಲವು ಸ್ಥಳಗಳ ಮೇಲೆ ಬುಧವಾರ ದಿಢೀರ್ ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಅವರ ಆಪ್ತರು ಹಾಗೂ ಬೆಂಬಲಿಗರಿಗೆ ಸೇರಿದ ಮನೆಗಳು ಮತ್ತು ಕಚೇರಿಗಳನ್ನೂ ಗುರಿಯಾಗಿಸಿಕೊಂಡು ಏಕಕಾಲದಲ್ಲಿ ಸುಮಾರು 14 ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳ ತಂಡಗಳು ಶೋಧ ನಡೆಸುತ್ತಿವೆ ಎಂದು ತಿಳಿದು ಬಂದಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ […]

Continue Reading

ರಾಜ್ಯದಲ್ಲಿ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಕೆಎಎಸ್, ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಮಂದಿ ಕೆಎಎಸ್ ಹಾಗೂ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಎಂಟು ಮಂದಿ ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ಡಾ. ರಾಕೇಶ್ ಕುಮಾರ್ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಬೆಂಗಳೂರು ದಕ್ಷಿಣ ಪಾಲಿಕೆಯ ಆಯುಕ್ತರಾಗಿದ್ದ ರಮೇಶ್ ಕೆ.ಎನ್. ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ (ಆರೋಗ್ಯ ಮತ್ತು […]

Continue Reading

ಬಿಜೆಪಿ ಮುಗಿಸಲು ಪಕ್ಷ ಕಟ್ಟಿದವರಿಂದ ಈಗ ‘ಪ್ರಾಯಶ್ಚಿತ್ತ ಯಾತ್ರೆ’: ಸಚಿವ ತಂಗಡಗಿ ಟೀಕೆ

ಬೆಂಗಳೂರು: ಬಿಜೆಪಿ ವಿರುದ್ಧ ಪ್ರತ್ಯೇಕ ಪಕ್ಷಗಳನ್ನು ಕಟ್ಟಿದ್ದ ಬಿ.ವೈ. ವಿಜಯೇಂದ್ರ, ಗಾಲಿ ಜನಾರ್ದನ ರೆಡ್ಡಿ ಹಾಗೂ ಬಿ. ಶ್ರೀರಾಮುಲು ಅವರು ಇದೀಗ ಬಿಜೆಪಿಯ ರಕ್ಷಕರಂತೆ ಪಾದಯಾತ್ರೆ ನಡೆಸುತ್ತಿರುವುದು ರಾಜಕೀಯದ ದೊಡ್ಡ ವ್ಯಂಗ್ಯ ಎಂದು ಸಚಿವ ಶಿವರಾಜ ತಂಗಡಗಿ ಅವರು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ. ಗೊತ್ತು–ಗುರಿ ಇಲ್ಲದೆ ಪಾದಯಾತ್ರೆ ಕೈಗೊಂಡಿರುವ ಈ ಮೂವರು ನಾಯಕರು ಹಿಂದೆ ಬಿಜೆಪಿ ವಿರುದ್ಧ ರಾಜಕೀಯ ಹೋರಾಟ ನಡೆಸಿ ವಿಫಲರಾದವರು. ಈಗ ಅವಕಾಶಕ್ಕಾಗಿ ಕಾಯುತ್ತಿದ್ದು, ಬಿಜೆಪಿಯ ಪರವಾಗಿ ಪಾದಯಾತ್ರೆ ನಡೆಸುತ್ತಿರುವುದು ‘ಪ್ರಾಯಶ್ಚಿತ್ತ ಯಾತ್ರೆ’ಯಂತಿದೆ ಎಂದು ಆರೋಪಿಸಲಾಗಿದೆ. […]

Continue Reading

ನೇತ್ರದಾನದಿಂದ ಐವರಿಗೆ ದೃಷ್ಟಿ: ಜಾಗೃತಿ ಮೂಡಿಸಿದ ವಾಕಥಾನ್

ಮಂಗಳೂರು: ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಗರದ ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ, ಯೆಕ್ಕೂರಿನ ಕಾಲೇಜ್ ಆಫ್ ಫಿಶರೀಸ್ ಹಾಗೂ ಡೆಕಾಥ್ಲಾನ್ ಮಂಗಳೂರು ಸಹಯೋಗದಲ್ಲಿ ‘ನೇತ್ರದಾನ ಜಾಗೃತಿ ವಾಕಥಾನ್–2026’ ಆಯೋಜಿಸಿತು. ನೇತ್ರದಾನ ಜಾಗೃತಿ ಕಾರ್ಯಕ್ರಮವನ್ನು ಪ್ರತಿವರ್ಷ ಆಗಸ್ಟ್ 25ರಿಂದ ಸೆಪ್ಟೆಂಬರ್ 8ರವರೆಗೆ ಆಚರಿಸಲಾಗುತ್ತದೆ. ಇದರ ಅಂಗವಾಗಿ ನಡೆದ ವಾಕಥಾನ್‌ನಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಡೆಕಾಥ್ಲಾನ್ ತಂಡದ ಸದಸ್ಯರು ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಡಾ. ಅದಿತಿ, ಡಾ. ವಸಂತ್ ಪೈ ಹಾಗೂ ಡಾ. ದೀಪ್ತಾ […]

Continue Reading

ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ನೈಋತ್ಯ ವಿಭಾಗದ ಡಿಸಿಪಿಯಾಗಿ ಲಕ್ಷ್ಮಿ ಗಣೇಶ್

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ 4 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಬೆಂಗಳೂರಿನ ನೈಋತ್ಯ ವಿಭಾಗದ ಡಿಸಿಪಿಯನ್ನಾಗಿ ಐಪಿಎಸ್ ಅಧಿಕಾರಿ ಲಕ್ಷ್ಮಿ ಗಣೇಶ್ ಕೆ. ಅವರನ್ನು ನೇಮಕ ಮಾಡಿದ್ದು, ಸ್ಯಾಮ್ ವರ್ಗೀಸ್ ಅವರನ್ನು ಮಂಗಳೂರು ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿ ನೇಮಕ ಮಾಡಲಾಗಿದೆ. ಬೆಂಗಳೂರಿನ ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸ್ಯಾಮ್ ವರ್ಗೀಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಗಳೂರು ನಗರ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) […]

Continue Reading

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ: ಯಾರೇ ಭಾಗಿಯಾಗಿದ್ದರೂ ರಕ್ಷಣೆ ಇಲ್ಲ – ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೆಪಿಎಸ್‌ಸಿ ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವುದನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ, ಯಾವುದೇ ಪಕ್ಷಕ್ಕೆ ಸೇರಿದವರಾಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು. ತಾವು ರಾಜ್ಯದ ಗೃಹ ಸಚಿವರಾಗಿರುವ ಸಂದರ್ಭದಲ್ಲಿ […]

Continue Reading

ಕಾರ್ಕಳ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ಐವರು ನಿವೃತ್ತ ಶಿಕ್ಷಕರಿಗೆ ಸನ್ಮಾನ

ಕಾರ್ಕಳ: ವಿದ್ಯಾರ್ಥಿ ಜೀವನ ಉತ್ತಮಗೊಳ್ಳಲು ಗುರುಗಳ ಮಾರ್ಗದರ್ಶನ ಅತ್ಯಗತ್ಯ. ಸಾಧಕನೊಬ್ಬನ ಸಾಧನೆಯ ಹಿಂದೆ ಶಿಕ್ಷಕರ ಪ್ರೇರಣೆ ಮತ್ತು ಮಾರ್ಗದರ್ಶನ ಮಹತ್ವದ ಪಾತ್ರ ವಹಿಸುತ್ತದೆ. ಅಂತಹ ಪ್ರೇರಣೆಯನ್ನು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಮೂಲಕ ಪಡೆಯುತ್ತಿರುವುದು ಶ್ಲಾಘನೀಯ ಎಂದು ಮಾಹೆ ಮಣಿಪಾಲದ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಹಾಗೂ ಸಾರ್ವಜನಿಕ ದಂತ ಆರೋಗ್ಯ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ. ಕಲ್ಯಾಣ ಪೆಂಟಪತಿ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ […]

Continue Reading