ಉ.ಕ ಜಿಲ್ಲೆಗೆ ಸಿಗದ ಮಂತ್ರಿ ಪದವಿ: ಮುನಿಸಿಕೊಂಡ ಮಂಕಾಳ ವೈದ್ಯಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

ಕಾರವಾರ: ಮಂತ್ರಿ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಶಾಸಕ ಮಂಕಾಳ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವುದಕ್ಕೆ ಮುಂದಾಗಿದ್ದು, ಅವರ ಮುನಿಸಿಗೆ ತುಪ್ಪ ಸವರಲು ಸಿಎಂ ಡಿಕೆಶಿ ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ವೈದ್ಯರಿಗೆ ಡಿಕೆಶಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಉತ್ಸಾಹದಲ್ಲಿ ಇದ್ದವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಮಂಡಳದ ಪಟ್ಟಿಯಿಂದಲೇ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು. ಇದರಿಂದಾಗಿ ಮುನಿಸಿಕೊಂಡು ಜಿಲ್ಲೆ ಉಸ್ತುವಾರಿ ಲಕ್ಷ್ಮಣ ಸವದಿ […]

Continue Reading

ತಿಕ್ಕಾಟದ ಬಳಿಕ ಸಚಿವರಿಗೆ ಖಾತೆಯ ಹೊಣೆ, ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ

ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್​​ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ. ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ […]

Continue Reading

ಉ. ಕದಲ್ಲಿ 11.23 ಲಕ್ಷ ಎನ್ಯುಮರೇಷನ್‌ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯ 12,30,037 ಮತದಾರರಿಗೆ ಎನ್ಯುಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ ಇದುವರೆಗೆ 11,23,024 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಮನೆಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,013 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,558 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವವರು, 44,006 ಮಂದಿ […]

Continue Reading

ಮುಖ್ಯಮಂತ್ರಿಗಳ ನಿರ್ದೇಶನ ಕಡ್ಡಾಯವಾಗಿ ಪಾಲಿಸಬೇಕು, ತಂಡವಾಗಿ ಸಿಬ್ಬಂದಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು. ಮಂಗಳವಾರ ಕ್ರಿಮ್ಸ್‌ನಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ ಬಳಿಕ ಜಿಲ್ಲೆಯ ಸರ್ಕಾರಿ ನೌಕರರು ನೀಡಬೇಕಾದ […]

Continue Reading

ಬೀದಿ ನಾಯಿ, ಜಾನುವಾರುಗಳ ಹಾವಳಿಗೆ ಬ್ರೇಕ್ ಹಾಕಿ: ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್

ಕಾರವಾರ: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹಾಗೂ ಜಾನುವಾರುಗಳ ಹಾವಳಿ ಹೆಚ್ಚಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ನೈರ್ಮಲ್ಯದ ದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಕಾರವಾರ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಸಾರ್ವಜನಿಕ ಸ್ಥಳಗಳು, ವಸತಿ ಪ್ರದೇಶಗಳು, ಉದ್ಯಾನಗಳು, ಮಾರುಕಟ್ಟೆ ಹಾಗೂ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪುಗಳಲ್ಲಿ ಸಂಚರಿಸುತ್ತಿವೆ. ಕೆಲ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದು, ಮಕ್ಕಳು, ಹಿರಿಯರು ಸೇರಿದಂತೆ […]

Continue Reading

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ; ದರ್ಶನ್‌ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಷ್‌, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆದಿದೆ. ಅರ್ಜಿಯನ್ನು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ವಿಡಿಯೊ ಸಂವಾದದ ಮೂಲಕ ನಟ ದರ್ಶನ್‌, ಪವಿತ್ರಾ ಗೌಡ, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಿಂದಿನ ವಿಚಾರಣೆಯಲ್ಲಿ ಪ್ರದೋಷ್‌ […]

Continue Reading

‘ಆಟಿದ ಪೊರ್ಲು’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸುರತ್ಕಲ್ ಬಂಟರ ಸಂಘದ ಗುಣಗಾನ ಮಾಡಿದ ಐಕಳ ಹರೀಶ್ ಶೆಟ್ಟಿ

ಸುರತ್ಕಲ್: ಇಲ್ಲಿನ ಬಂಟರ ಸಂಘದ ಒಗ್ಗಟ್ಟು ಇತರ ಸಂಘ–ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಸಂಘ ಹಾಗೂ ಮಹಿಳಾ ವೇದಿಕೆ ಬಂಟರ ಸಂಘದ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಆಯೋಜಿಸಿದ್ದ ‘ಆಟಿದ ಪೊರ್ಲು’ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಟಿ ತಿಂಗಳಲ್ಲಿ ಮನೆ ಮನೆಗೆ ತೆರಳಿ ಸಾಂಪ್ರದಾಯಿಕವಾಗಿ ಪ್ರದರ್ಶನ ನೀಡುವ ‘ಚಿಕ್ಕಮೇಳ’ವು ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. […]

Continue Reading

ಸ್ವಯಂಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿವೇತನ ವಿತರಣೆ

ಸುರತ್ಕಲ್: ಜಾತಿ, ಮತ, ಧರ್ಮದ ಭೇದ ಮರೆತು ರಕ್ತದಾನ ಮಾಡುವುದರಿಂದ ಹಲವು ಜೀವಗಳನ್ನು ಉಳಿಸಬಹುದು. ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದುದು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ಹೇಳಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್, ಬಿಎಎಸ್‌ಎಫ್ ಇಂಡಿಯಾ ಲಿಮಿಟೆಡ್, ಶ್ರೀರಾಮ್ ಫೈನಾನ್ಸ್ ಮಂಗಳೂರು ಹಾಗೂ ಸುರತ್ಕಲ್ ಪೊಲೀಸ್ ಠಾಣೆಯ ಆಶ್ರಯದಲ್ಲಿ, ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಹಾಗೂ […]

Continue Reading
ಕಾರವಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಗರಾಜ ನಾಯಕ್ ಮಾತನಾಡಿದರು

ಮಂಗಳೂರು ಹೈಕೋರ್ಟ್ ಪೀಠ ವ್ಯಾಪ್ತಿಗೆ ಉತ್ತರ ಕನ್ನಡ ಸೇರ್ಪಡೆಗೆ ವಿರೋಧ, ಅ.13ರಂದು ಬೃಹತ್ ಪ್ರತಿಭಟನೆ: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಾಗರಾಜ ನಾಯಕ

ಕಾರವಾರ: ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವ ಸರ್ಕಾರದ ಪ್ರಸ್ತಾವನೆ ಇದೀಗ ಜಿಲ್ಲೆಯಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಪ್ರಸ್ತಾವನೆ ಕೈಬಿಡುವಂತೆ ಆಗ್ರಹಿಸಿರುವ ಜಿಲ್ಲಾ ವಕೀಲರ ಸಂಘವು ಇದೇ 13 ರಂದು ವಕೀಲರು ಹಾಗೂ ಸಾರ್ವಜನಿಕರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾರವಾರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ನಾಗರಾಜ ನಾಯಕ ತಿಳಿಸಿದರು. ಯಾವುದೇ ಕಾರಣಕ್ಕೂ ಉತ್ತರ ಕನ್ನಡವನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಸೇರಿಸಲು ಅವಕಾಶ […]

Continue Reading

ಶಿಕ್ಷಣ ಜೀವನದ ಅಡಿಪಾಯ, ಅಂಕಗಳ ಜತೆಗೆ ದೈಹಿಕ, ಮಾನಸಿಕ ಆರೋಗ್ಯವೂ ಅಗತ್ಯ: ಡಿಸಿ ಲಕ್ಷ್ಮಿಪ್ರೀಯಾ

ಕಾರವಾರ: ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವುದಕ್ಕೆ ಸೀಮಿತವಾಗದೆ ವ್ಯಕ್ತಿತ್ವ ವಿಕಸನ, ಮಾತನಾಡುವ ಕೌಶಲ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ಕೆಎಸ್‌ಎಂಸಿ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲೆ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಮಕ್ಕಳ ಪ್ರತಿಭಾ ಪುರಸ್ಕಾರ–2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಜಗತ್ತು ತೀವ್ರ ಸ್ಪರ್ಧಾತ್ಮಕವಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ […]

Continue Reading