ನ್ಯೂಜೆರ್ಸಿ: ಎಕ್ಸ್‌ಟ್ರಾ ಟೈಮ್‌ನಲ್ಲಿ ಸ್ಪೇನ್‌ಗೆ ವಿಶ್ವಕಪ್ ಕಿರೀಟ; ಅರ್ಜೆಂಟೀನಾ ವಿರುದ್ಧ 1–0 ಗೋಲುಗಳ ರೋಚಕ ಜಯ

ನ್ಯೂಜೆರ್ಸಿ: ಕೊನೆಯ ಕ್ಷಣದವರೆಗೂ ಗೋಲುರಹಿತವಾಗಿದ್ದ ಫಿಫಾ ವಿಶ್ವಕಪ್–2026ರ ಫೈನಲ್ ಪಂದ್ಯದಲ್ಲಿ ಎಕ್ಸ್‌ಟ್ರಾ ಟೈಮ್‌ನಲ್ಲಿ ಫೆರಾನ್ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್, ಅರ್ಜೆಂಟೀನಾವನ್ನು 1–0 ಅಂತರದಿಂದ ಮಣಿಸಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಪೈಪೋಟಿಯಲ್ಲಿ ಅರ್ಜೆಂಟೀನಾ ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಜ್ ಅವರ ಅದ್ಭುತ ಪ್ರದರ್ಶನವೂ ತಂಡವನ್ನು ಸೋಲಿನಿಂದ ಪಾರು ಮಾಡಲು ಸಾಧ್ಯವೇ ಆಗಲಿಲ್ಲ. ನಿಗದಿತ 90 ನಿಮಿಷಗಳ ಆಟದಲ್ಲಿ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾದ ಕಾರಣ ಪಂದ್ಯ ಎಕ್ಸ್‌ಟ್ರಾ ಟೈಮ್‌ಗೆ ಸಾಗಿತು. 106 […]

Continue Reading

ಉ.ಕ ಜಿಲ್ಲೆಯಾದ್ಯಂತ 9,22,958 ಎನ್ಯುಮರೇಷನ್ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯಲ್ಲಿ ಒಟ್ಟು 12,30,037 ಮತದಾರರಿದ್ದು, ಪ್ರತಿಯೊಬ್ಬರಿಗೂ ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಲಾಗಿದೆ. ಇದುವರೆಗೂ ಜಿಲ್ಲೆಯಾದ್ಯಂತ 9,22,958 ಅರ್ಜಿಗಳನ್ನು ಗಣಕೀಕರಣ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. ಈವರೆಗಿನ ಮನೆ ಭೇಟಿಯ ಸಂದರ್ಭದಲ್ಲಿ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 26977 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 6590 ಶಾಶ್ವತ ವಲಸೆ ಹಾಗೂ 17,774 ಮರಣ ಹೊಂದಿದ ಪ್ರಕರಣಗಳು, 2367 […]

Continue Reading

ನೀರಿನ ಕೊರತೆ ತಪ್ಪಿಸಲು ಕೃಷಿ ಹೊಂಡಗಳ ನಿರ್ಮಾಣ, ಬಾವಿ, ಬೋರ್‌ವೆಲ್ ಗೆ ಅಂತರ್ಜಲ ಮರುಪೂರಣ ವ್ಯವಸ್ಥೆ ಕಲ್ಪಿಸಿ: ಸುಷ್ಮಾ ಗೋಡಬೋಲೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮಳೆಯ ಪ್ರಮಾಣ ಕಡಿಮೆ ಇರುವುದರಿಂದ ರೈತರಿಗೆ ಕಡಿಮೆ ಅವಧಿಯಲ್ಲಿ ಇಳುವರಿ ನೀಡುವ ಬೆಳೆಗಳನ್ನು ಬೆಳೆಯಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ಅವರು ನಿರ್ದೇಶನ ನೀಡಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.24 ರಷ್ಟು ಮಳೆಯ ಕೊರತೆಯಿರುವುದರಿಂದ ರೈತರು ಹೆಚ್ಚು […]

Continue Reading

ಯಲ್ಲಾಪುರದಲ್ಲಿ ಆರೋಗ್ಯ ಕೇಂದ್ರ, ಅಂಗನವಾಡಿ ಹಾಗೂ ಅಪಘಾತ ಸ್ಥಳಕ್ಕೆ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೊಡಬೋಲೆ ಭೇಟಿ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿ ಸುಷ್ಮಾ ಗೊಡಬೋಲೆ ಅವರು ಶುಕ್ರವಾರ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಆರೋಗ್ಯ ಸೇವೆಗಳು, ಮೂಲಸೌಕರ್ಯ ಹಾಗೂ ಮಳೆಗಾಲದ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು. ಯಲ್ಲಾಪುರ ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು. ಯಲ್ಲಾಪುರ–ಅಂಕೋಲಾ […]

Continue Reading

ಎಸ್‌ಐಆರ್‌, ಜಿಲ್ಲಾ ಸ್ವೀಪ್ ಸಮಿತಿ, ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಚಾಲನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಸಾರ್ವಜನಿಕರು ಹಾಗೂ ರಾಜಕೀಯ ಪಕ್ಷಗಳಿಂದ ಉತ್ತಮ ಸಹಕಾರ ದೊರೆಯುತ್ತಿದ್ದು, ನಿಗದಿತ ಅವಧಿಗೂ ಮುನ್ನವೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸರ್ಕಾರಿ ನೌಕರರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಶೇ […]

Continue Reading

ಎನ್ಸಿಸಿ ಗೌರವ ಕರ್ನಲ್ ಹುದ್ದೆಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಮಂಗಳೂರು: ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್‌.ಜೆ. ಅವರಿಗೆ ಭಾರತ ಸರ್ಕಾರವು ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್‌ (ಎನ್ಸಿಸಿ)ಯ ಗೌರವ ಕರ್ನಲ್ ಹುದ್ದೆ ಹಾಗೂ ‘ಕರ್ನಲ್ ಕಮಾಂಡೆಂಟ್’ ಗೌರವವನ್ನು ನೀಡಿದೆ. ಈ ಸಂಬಂಧದ ಅಧಿಕೃತ ನೇಮಕಾತಿ ಆದೇಶವನ್ನು ಜೂನ್‌ 25 ರಂದು ಹೊರಡಿಸಲಾಗಿದ್ದು, ಗುರುವಾರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಎನ್ಸಿಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಉಪ ಮಹಾನಿರ್ದೇಶಕ ಏರ್‌ ಕಮಾಂಡರ್ ಕಮಲ್ ಚಾಧಾ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. […]

Continue Reading

ಭಾರಿ ಮಳೆ: ಅಂಕೋಲಾ ತಾಲೂಕಿನ ಎಲ್ಲಾ ಶಾಲೆಗಳಿಗೆ ಇಂದು ರಜೆ ಘೋಷಣೆ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನಾದ್ಯಂತ ಭಾರಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅಂಕೋಲಾ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಅಂಕೋಲಾ ತಹಶೀಲ್ದಾರ್ ಅವರು ಮಾಹಿತಿ ನೀಡಿದ್ದು, ಪ್ರತಿಕೂಲ ಹವಾಮಾನ ಮತ್ತು ಮಳೆಯ ತೀವ್ರತೆಯನ್ನು ಪರಿಗಣಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಪೋಷಕರು ಹಾಗೂ ಸಾರ್ವಜನಿಕರು ಹವಾಮಾನ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಅಗತ್ಯವಿಲ್ಲದಿದ್ದರೆ ಹೊರಗಡೆ ಸಂಚರಿಸದಂತೆ ಆಡಳಿತ ಮನವಿ […]

Continue Reading

4 ಜಿಲ್ಲೆಗೆ ಒಬ್ಬರಿಗೆ ಉಸ್ತುವಾರಿ, ಮೊದಲು ಬರ ಅಧ್ಯಯನಕ್ಕೆ ತಂಡ ಕಳಿಸಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಹೊಣೆ ವಹಿಸಿ: ಭೋಜೇಗೌಡ

ಮಂಗಳೂರು: ರಾಜ್ಯದಲ್ಲಿ ಒಂದೆಡೆ ಬರ ಹಾಗೂ ಮತ್ತೊಂದೆಡೆ ಅತಿವೃಷ್ಟಿಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ರಾಜ್ಯ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿವೆ. ರೈತರ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡಲು ಆಗಿಲ್ಲ, ನಾಲ್ಕು ಜಿಲ್ಲೆಗಳಿಗೆ ಒಬ್ಬರೇ ಉಸ್ತುವಾರಿ ಸಚಿವರ ನೇಮಕ ಮಾಡಿದ್ದು ಸರಿಯಲ್ಲ. ಉಳ್ಳಾಲ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ತಕ್ಷಣವೇ ಬರ ಅಧ್ಯಯನ ಸಮಿತಿ ರಚಿಸಿ ಜಿಲ್ಲಾವಾರು ಸ್ಥಳ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ, 5.20 ಕೋಟಿ ಮೌಲ್ಯದ ಎಂಡಿಎಂಎ ವಶ, ಬಾಗಲಕೋಟೆಯಲ್ಲಿ ಇಬ್ಬರ ಬಂಧನ

ಮಂಗಳೂರು: ಮಂಗಳೂರು, ಬೆಂಗಳೂರು ಹಾಗೂ ನೆರೆಯ ಕೇರಳ ರಾಜ್ಯಕ್ಕೆ ಪೂರೈಕೆಯಾಗಬೇಕಿದ್ದ 5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಬಂಧನ ಮಾಡಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದರು. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನದ ಭಾಗವಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧನ […]

Continue Reading

ಉಪ್ಪಿನಂಗಡಿ ಬಳಿ ನಕಲಿ ನೋಟು ಜಾಲ, ಏಳು ಮಂದಿ ಬಂಧಿಸಿದ ಪೊಲೀಸರು

ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪ ಭಾರಿ ಪ್ರಮಾಣದಲ್ಲಿ ನಕಲಿ 500 ಮುಖಬೆಲೆಯ ನೋಟುಗಳನ್ನು ತಯಾರಿಸುತ್ತಿದ್ದ ಸಂಘಟಿತ ಜಾಲವನ್ನು ಪುತ್ತೂರು ಪೊಲೀಸರು ಭೇದಿಸಿದ್ದು, ಘಟನೆಗೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಿ ನಕಲಿ ನೋಟುಗಳು, ಮುದ್ರಣ ಯಂತ್ರಗಳು ಹಾಗೂ ಇತರ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸರು ಕಣಿಯೂರು ಗ್ರಾಮದ ಅಡೆಂಜ ಪ್ರದೇಶದಲ್ಲಿ ಇರುವ ಬಾಡಿಗೆ ಕಟ್ಟಡದ ಮೇಲೆ ದಾಳಿ ನಡೆಸಿದರು. ಈ ವೇಳೆ […]

Continue Reading