ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾವ್ ಹಾದಿಯಲ್ಲಿ ಡಾ. ರಾಜೇಂದ್ರಕುಮಾರ್, ಅರ್ಥಪೂರ್ಣ ಪ್ರತಿಭಾ ಪುರಸ್ಕಾರ

ಮಂಗಳೂರು: ಶಿಕ್ಷಣದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಅವರ ಸಾಧನೆಗೆ ಮನ್ನಣೆ ನೀಡುವುದಷ್ಟೇ ಅಲ್ಲ, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ಆಗುತ್ತದೆ. ಪ್ರತಿಭಾವಂತರು ಸಮಾಜ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಹೊಣೆಗಾರಿಕೆಯನ್ನು ಮನಗಂಡು ಮುಂದುವರೆಯಬೇಕು ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಹೇಳಿದರು. ದಿ. ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಇನ್ನಷ್ಟು ಎತ್ತರಕ್ಕೆ […]

Continue Reading

ಉ. ಕದಲ್ಲಿ ಜು. 9 ರವರೆಗೆ ಆರೆಂಜ್ ಅಲರ್ಟ್, ಭಾರಿ ಗಾಳಿ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಜುಲೈ 5 ರಂದು ಮಧ್ಯಾಹ್ನ 1 ಗಂಟೆಯಿಂದ ಜುಲೈ 9 ರ ಬೆಳಗ್ಗೆ 8.30 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಅವಧಿಯಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಅವರು ತಿಳಿಸಿದ್ದಾರೆ. […]

Continue Reading

ಬಾಲಕಿಗೆ ಲೈಂಗಿಕ ಕಿರುಕುಳ, ಪೋಕ್ಸೊ ಪ್ರಕರಣದಲ್ಲಿ ಮಂಕಿ ಪಿಎಸ್ಐ ಅಭಿನಂದನ್ ಬಂಧನ

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಪೋಕ್ಸೊ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ […]

Continue Reading

ಮಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ: ಅಪಹರಣ–ದರೋಡೆ ಪ್ರಕರಣ, ಮೂರು ಮಂದಿ ಬಂಧನ

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ಕುಟುಂಬದ ಜತೆಗೆ ಪ್ರಯಾಣಿಸುತ್ತಿದ್ದ ವ್ಯಕ್ತಿ ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳು ಕಾರ್ಯಾಚರಣೆ ಮುಂದುವರೆಸಿವೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) […]

Continue Reading

ಸೇತುವೆ ಇಲ್ಲದ ಸಂಕಷ್ಟ: ಉಕ್ಕಿ ಹರಿಯುತ್ತಿದ್ದ ಭಾಸ್ಕೇರಿ ಹೊಳೆಯಲ್ಲಿ ಶವ ಹೊತ್ತು ಅಂತ್ಯಸಂಸ್ಕಾರ, ಮೂಲ ಸೌಕರ್ಯದಿಂದ ವಂಚಿತ ಗ್ರಾಮಸ್ಥರು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡ ಹಿತ್ತಲ ಗ್ರಾಮದಲ್ಲಿ ಮೂಲ ಸೌಕರ್ಯಗಳ ಕೊರತೆಯ ಮತ್ತೊಂದು ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಗ್ರಾಮದಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಉಕ್ಕಿ ಹರಿಯುತ್ತಿದ್ದ ಹೊಳೆಯನ್ನು ಗ್ರಾಮಸ್ಥರು ಜೀವದ ಹಂಗು ತೊರೆದು ದಾಟಿದ ಘಟನೆ ನಡೆದಿದೆ. ಈ ಘಟನೆ ಜಾಲತಾಣದಲ್ಲಿ ವೈರಲ್ ಅಗುತ್ತಿದ್ದು, ಬಾರಿ ಚರ್ಚೆಗೆ ಗ್ರಾಸವಾಗುತ್ತಿದೆ. ನಿರಂತರ ಮಳೆಯಿಂದ ಭಾಸ್ಕೇರಿ ಹೊಳೆ ತುಂಬಿ ಹರಿಯುತ್ತಿದ್ದು, ಗ್ರಾಮದ ಸಂಪರ್ಕ ರಸ್ತೆಯೂ ಜಲಾವೃತ ಆಗಿದೆ. ಈ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರಕ್ಕೆ […]

Continue Reading

ಓವರ್‌ಲೋಡ್ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಸರಕು ಸಾಗಿಸುತ್ತಿರುವ ಓವರ್‌ಲೋಡ್ ವಾಹನಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸುವಂತೆ ಹಾಗೂ ಜಿಲ್ಲೆಯಾದ್ಯಂತ ತಪಾಸಣೆಗಳನ್ನು ಮತ್ತಷ್ಟು ತೀವ್ರಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದೇ ರಸ್ತೆಗೆ ಸೀಮಿತವಾಗದೆ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತ ತಪಾಸಣೆ ನಡೆಸಿ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ […]

Continue Reading

ಬಿಣಗಾ–ಅರಗಾ ರಾಷ್ಟ್ರೀಯ ಹೆದ್ದಾರಿ ಏಕಮುಖ ಸಂಚಾರ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಆದೇಶ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಕರಿದೇವಸ್ಥಾನದಿಂದ ಅರಗಾ ಮಹಾದೇವಸ್ಥಾನ ಕ್ರಾಸ್‌ವರೆಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಜುಲೈ 4 ರಿಂದ ಮಳೆಗಾಲ ಮುಗಿಯುವವರೆಗೆ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಗಾಲದಲ್ಲಿ ಗುಡ್ಡ ಪ್ರದೇಶದಿಂದ ನೀರಿನ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಾಷ್ಟ್ರೀಯ ಹೆದ್ದಾರಿಯ ಮೇಲೆ ಕುಸಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಗುಡ್ಡ ಕುಸಿತದಿಂದ ವಾಹನ ಸವಾರರು ಹಾಗೂ ಪ್ರಯಾಣಿಕರ ಸುರಕ್ಷತೆಗೆ […]

Continue Reading

ಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಗಾಯಾಳು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಖಾದರ್

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರ ಬಾಳೆಗುಳಿ ಸಮೀಪ ಶನಿವಾರ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಲಗೇರಿ ನಿವಾಸಿ ಸಂದೀಪ್ ನಾಯಕ ಎಂದು ಗುರುತಿಸಲಾಗಿದೆ. ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸಚಿವ ಯು.ಟಿ. ಖಾದರ್ ಅವರು ರಸ್ತೆ ಮಾರ್ಗವಾಗಿ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ […]

Continue Reading

ಸಾರ್ವಜನಿಕರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವುದೇ ಸರ್ಕಾರದ ಆದ್ಯತೆ: ಸಚಿವ ಖಾದರ್, ಜಿಲ್ಲಾಡಳಿತ ಸನ್ನದ್ಧ, ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಪ್ರಕೃತಿ ವಿಕೋಪಗಳು ಯಾವಾಗ, ಹೇಗೆ ಸಂಭವಿಸುತ್ತವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಇಂತಹ ಸಂದರ್ಭಗಳಲ್ಲಿ ಸಂತ್ರಸ್ತರು ಹಾಗೂ ಸಾರ್ವಜನಿಕರ ನೋವಿಗೆ ತಕ್ಷಣ ಸ್ಪಂದಿಸಿ, ಅವರಿಗೆ ನೆಮ್ಮದಿಯ ಜೀವನ ಕಲ್ಪಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಕೃತಿ ವಿಕೋಪ ನಿರ್ವಹಣೆ ಪೂರ್ವತಯಾರಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಕೃತಿ ವಿಕೋಪದಂತಹ ತುರ್ತು […]

Continue Reading

ರಾಜ್ಯ ಮಟ್ಟದ ಟೇಬಲ್ ಟೆನಿಸ್: ಫೈನಲ್ , ಸೆಮಿಫೈನಲ್ ನಲ್ಲಿ ತೀವ್ರ ಹಣಾಹಣಿ

ಮಂಗಳೂರು: ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ವಿವಿಧ ವಿಭಾಗಗಳ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳು ರೋಚಕ ಪೈಪೋಟಿಗೆ ಸಾಕ್ಷಿಯಾದವು. ಅಂಡರ್-17 ಬಾಲಕಿಯರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ವಿಭಾ ತಾವಕರಿ ಅವರನ್ನು 11-9, 11-9, 11-6 ನೇರ ಸೆಟ್‌ಗಳಿಂದ ಮಣಿಸಿ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಸೆಮಿಫೈನಲ್‌ನಲ್ಲಿ ಮಿಹಿಕಾ ಉಡುಪ ಅವರು ಐರಿನ್ ಅಣ್ಣಾ ಸುಭಾಷ್ ವಿರುದ್ಧ 11-5, 12-10, 6-11, 14-12 ಅಂತರದಲ್ಲಿ ಜಯ ಸಾಧಿಸಿದರು. ವಿಭಾ ತಾವಕರಿ ಅವರು ಹಿಯಾ ಸಿಂಗ್ ಅವರನ್ನು […]

Continue Reading