ಸ್ನೇಹಾಲಯದಲ್ಲಿ ದೇಶಭಕ್ತಿಯ ಸಂಭ್ರಮ: 80 ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಂಭ್ರಮ

ಮಂಜೇಶ್ವರ: ಸ್ನೇಹಾಲಯ ಮನೋಸಾಮಾಜಿಕ ಪುನರ್ವಸತಿ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ದೇಶಭಕ್ತಿ, ಉತ್ಸಾಹ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಸ್ನೇಹಾಲಯದ ನಿವಾಸಿಗಳು, ಸಿಬ್ಬಂದಿ, ಆಡಳಿತ ಮಂಡಳಿ, ಟ್ರಸ್ಟಿಗಳು ಹಾಗೂ ಹಿತೈಷಿಗಳು ಒಟ್ಟಾಗಿ ಭಾಗವಹಿಸಿದ ಕಾರ್ಯಕ್ರಮವು ಏಕತೆ, ದೇಶಪ್ರೇಮ, ಸಹಬಾಳ್ವೆ ಮತ್ತು ಮಾನವೀಯತೆಯ ಸಂದೇಶ ಸಾರಿತು. ಭಾರತೀಯ ವಾಯುಪಡೆಯ ಸಾರ್ಜೆಂಟ್ ರೇಮಂಡ್ ಎ. ಡಿಸೋಜ ಹಾಗೂ ಸ್ನೇಹಾಲಯದ ಧರ್ಮಗುರು ರೆವರೆಂಡ್ ಫಾ. ಸಿರಿಲ್ ಡಿಸೋಜ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಅವರ ಉಪಸ್ಥಿತಿಯಲ್ಲಿ ದೇಶಸೇವೆ, ಕರ್ತವ್ಯನಿಷ್ಠೆ, ತ್ಯಾಗ ಮತ್ತು ಸಮರ್ಪಣೆಯ ಮಹತ್ವವನ್ನು […]

Continue Reading

ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉ. ಕ ಸೇರ್ಪಡೆಗೆ ವಿರೋಧಿಸಿ ಪ್ರತಿಭಟನೆ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾಗೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನು ಪ್ರಸ್ತಾಪಿತ ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಪ್ರಸ್ತಾವ ವಿರೋಧಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ವಕೀಲರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡು, ಉತ್ತರ ಕನ್ನಡ ಜಿಲ್ಲೆಯನ್ನು ಸದ್ಯ ಇರುವ ಧಾರವಾಡ ಹೈಕೋರ್ಟ್ ಪೀಠದ ವ್ಯಾಪ್ತಿಯಲ್ಲೇ ಮುಂದುವರೆಸಬೇಕು ಎಂದು ಆಗ್ರಹಿಸಿದರು. ಮಂಗಳೂರು ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರ್ಪಡೆಗೊಳಿಸುವುದರಿಂದ ಜಿಲ್ಲೆಯ ಜನರಿಗೆ […]

Continue Reading

ಅಂಬುಲೆನ್ಸ್‌ಗೆ ದಾರಿ ಬಿಡಿ, ಜೀವ ಉಳಿಸಲು ಸಹಕರಿಸಿ, ಕೆಎಂಸಿ ಆಸ್ಪತ್ರೆ ಜಾಗೃತಿ ಜಾಥಾಕ್ಕೆ ಚಾಲನೆ

ಮಂಗಳೂರು: ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವುದು, ಸಂಚಾರ ನಿಯಮಗಳನ್ನು ಪಾಲಿಸುವುದು ಹಾಗೂ ರೋಗಿಗಳಿಗೆ ತ್ವರಿತ ವೈದ್ಯಕೀಯ ನೆರವು ದೊರೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೆಎಂಸಿ ಆಸ್ಪತ್ರೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಹಾಗೂ ಮಂಗಳೂರು ನಗರ ಸಂಚಾರ ಪೊಲೀಸರ ಸಹಯೋಗದಲ್ಲಿ ಗುರುವಾರ ಅಂಬುಲೆನ್ಸ್ ಜಾಗೃತಿ ಜಾಥಾ ನಡೆಯಿತು. ಕೆಎಂಸಿ ಆಸ್ಪತ್ರೆಯಿಂದ ಆರಂಭವಾದ ಜಾಥಾಕ್ಕೆ ಮಂಗಳೂರು ನಗರ ಪೊಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು. ಸಂಚಾರ ಉಪವಿಭಾಗದ ಪಿಎಸ್‌ಐ […]

Continue Reading

ಉ.ಕ ಜಿಲ್ಲೆಗೆ ಸಿಗದ ಮಂತ್ರಿ ಪದವಿ: ಮುನಿಸಿಕೊಂಡ ಮಂಕಾಳ ವೈದ್ಯಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

ಕಾರವಾರ: ಮಂತ್ರಿ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಶಾಸಕ ಮಂಕಾಳ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವುದಕ್ಕೆ ಮುಂದಾಗಿದ್ದು, ಅವರ ಮುನಿಸಿಗೆ ತುಪ್ಪ ಸವರಲು ಸಿಎಂ ಡಿಕೆಶಿ ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ವೈದ್ಯರಿಗೆ ಡಿಕೆಶಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಉತ್ಸಾಹದಲ್ಲಿ ಇದ್ದವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಮಂಡಳದ ಪಟ್ಟಿಯಿಂದಲೇ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು. ಇದರಿಂದಾಗಿ ಮುನಿಸಿಕೊಂಡು ಜಿಲ್ಲೆ ಉಸ್ತುವಾರಿ ಲಕ್ಷ್ಮಣ ಸವದಿ […]

Continue Reading

ತಿಕ್ಕಾಟದ ಬಳಿಕ ಸಚಿವರಿಗೆ ಖಾತೆಯ ಹೊಣೆ, ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ

ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್​​ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ. ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ […]

Continue Reading

ಉ. ಕದಲ್ಲಿ 11.23 ಲಕ್ಷ ಎನ್ಯುಮರೇಷನ್‌ ಫಾರ್ಮ್ ಗಣಕೀಕರಣ: ಡಿಸಿ ಲಕ್ಷ್ಮಿಪ್ರಿಯಾ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಪ್ರಕ್ರಿಯೆ ಚುರುಕಿನಿಂದ ಸಾಗಿದ್ದು, ಜಿಲ್ಲೆಯ 12,30,037 ಮತದಾರರಿಗೆ ಎನ್ಯುಮರೇಷನ್‌ ಫಾರ್ಮ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ ಇದುವರೆಗೆ 11,23,024 ಫಾರ್ಮ್‌ಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ. ಮನೆಮನೆಗೆ ಭೇಟಿ ನೀಡಿ ನಡೆಸಿದ ಪರಿಶೀಲನೆ ವೇಳೆ ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 1,07,013 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 45,558 ಮಂದಿ ಶಾಶ್ವತವಾಗಿ ಸ್ಥಳಾಂತರಗೊಂಡಿರುವವರು, 44,006 ಮಂದಿ […]

Continue Reading

ಮುಖ್ಯಮಂತ್ರಿಗಳ ನಿರ್ದೇಶನ ಕಡ್ಡಾಯವಾಗಿ ಪಾಲಿಸಬೇಕು, ತಂಡವಾಗಿ ಸಿಬ್ಬಂದಿ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಕಾರವಾರ: ಮುಖ್ಯಮಂತ್ರಿ ಅವರ ನಿರ್ದೇಶನದಂತೆ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಲು ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡವಾಗಿ ಕರ್ತವ್ಯ ನಿರ್ವಹಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ನೌಕರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿರುವ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು. ಮಂಗಳವಾರ ಕ್ರಿಮ್ಸ್‌ನಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರು ಹಾಗೂ ಮುಖ್ಯಮಂತ್ರಿಗಳೊಂದಿಗಿನ ಸಂವಾದ ಸಭೆಯ ಬಳಿಕ ಜಿಲ್ಲೆಯ ಸರ್ಕಾರಿ ನೌಕರರು ನೀಡಬೇಕಾದ […]

Continue Reading

ಬೀದಿ ನಾಯಿ, ಜಾನುವಾರುಗಳ ಹಾವಳಿಗೆ ಬ್ರೇಕ್ ಹಾಕಿ: ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್

ಕಾರವಾರ: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಹಾಗೂ ಜಾನುವಾರುಗಳ ಹಾವಳಿ ಹೆಚ್ಚಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ನೈರ್ಮಲ್ಯದ ದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸೂರಜ್ ಕುರುಮಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಹಾಗೂ ಕಾರವಾರ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿರುವ ಅವರು, ಸಾರ್ವಜನಿಕ ಸ್ಥಳಗಳು, ವಸತಿ ಪ್ರದೇಶಗಳು, ಉದ್ಯಾನಗಳು, ಮಾರುಕಟ್ಟೆ ಹಾಗೂ ರಸ್ತೆಗಳಲ್ಲಿ ಬೀದಿ ನಾಯಿಗಳು ಗುಂಪುಗಳಲ್ಲಿ ಸಂಚರಿಸುತ್ತಿವೆ. ಕೆಲ ನಾಯಿಗಳು ಆಕ್ರಮಣಕಾರಿಯಾಗಿ ವರ್ತಿಸುತ್ತಿದ್ದು, ಮಕ್ಕಳು, ಹಿರಿಯರು ಸೇರಿದಂತೆ […]

Continue Reading

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ; ದರ್ಶನ್‌ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಷ್‌, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆದಿದೆ. ಅರ್ಜಿಯನ್ನು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ವಿಡಿಯೊ ಸಂವಾದದ ಮೂಲಕ ನಟ ದರ್ಶನ್‌, ಪವಿತ್ರಾ ಗೌಡ, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಿಂದಿನ ವಿಚಾರಣೆಯಲ್ಲಿ ಪ್ರದೋಷ್‌ […]

Continue Reading

‘ಆಟಿದ ಪೊರ್ಲು’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸುರತ್ಕಲ್ ಬಂಟರ ಸಂಘದ ಗುಣಗಾನ ಮಾಡಿದ ಐಕಳ ಹರೀಶ್ ಶೆಟ್ಟಿ

ಸುರತ್ಕಲ್: ಇಲ್ಲಿನ ಬಂಟರ ಸಂಘದ ಒಗ್ಗಟ್ಟು ಇತರ ಸಂಘ–ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಸಂಘ ಹಾಗೂ ಮಹಿಳಾ ವೇದಿಕೆ ಬಂಟರ ಸಂಘದ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಆಯೋಜಿಸಿದ್ದ ‘ಆಟಿದ ಪೊರ್ಲು’ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಟಿ ತಿಂಗಳಲ್ಲಿ ಮನೆ ಮನೆಗೆ ತೆರಳಿ ಸಾಂಪ್ರದಾಯಿಕವಾಗಿ ಪ್ರದರ್ಶನ ನೀಡುವ ‘ಚಿಕ್ಕಮೇಳ’ವು ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. […]

Continue Reading