ಉನ್ನತ ಶಿಕ್ಷಣ ಮನೆ ಬಾಗಿಲಿಗೆ ಕೆಎಸ್‌ಒಯು ಗುರಿ: ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಜ್ಞಾನಪ್ರಕಾಶ್

ಮಂಗಳೂರು: ಉದ್ಯೋಗ, ಕುಟುಂಬ ಅಥವಾ ಇತರ ಕಾರಣಗಳಿಂದ ನಿಯಮಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‌ಒಯು) 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಪದವಿ, ಸ್ನಾತಕೋತ್ತರ, ಡಿಪ್ಲೊಮ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆರಂಭಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೆಎಸ್‌ಒಯು ಕುಲಪತಿ ಎ.ಪಿ. ಜ್ಞಾನಪ್ರಕಾಶ್ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಕರ್ನಾಟಕದಲ್ಲಿ ದೂರಶಿಕ್ಷಣ ನೀಡಲು ಮಾನ್ಯತೆ […]

Continue Reading

ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ‘ಸಂಧ್ಯಾ ಕಿರಣ’ ಆರೋಗ್ಯ ಯೋಜನೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ 60 ರಿಂದ 70 ವರ್ಷದ ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಣೆ ಒದಗಿಸುವ ಉದ್ದೇಶದಿಂದ ‘ಸಂಧ್ಯಾ ಕಿರಣ’ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದೊಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಹೊಸ ಅಂಬುಲೆನ್ಸ್‌ಗಳ ಸೇರ್ಪಡೆಗೂ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 450 ಹೊಸ ಅಂಬುಲೆನ್ಸ್‌ಗಳನ್ನು ಒದಗಿಸಲಾಗಿದ್ದು, ಶೀಘ್ರದಲ್ಲೇ ಹೊಸ ವಾಹನಗಳು ಸೇವೆಗೆ ಬರಲಿವೆ. ಇದರಿಂದ ರಾಜ್ಯದಲ್ಲಿ 750ಕ್ಕೂ ಹೆಚ್ಚು ಅಂಬುಲೆನ್ಸ್‌ಗಳು ಕಾರ್ಯನಿರ್ವಹಿಸಲಿವೆ […]

Continue Reading

ಅತಿವೃಷ್ಠಿ ಹಾನಿಗೆ ತಕ್ಷಣ ಪರಿಹಾರ; ಸಚಿವರ ಸಭೆಯಲ್ಲಿ ಕ್ಷೇತ್ರದ ಸಮಸ್ಯೆಗಳ ಪ್ರಸ್ತಾಪ

ಸಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಯ ಪರಿಶೀಲನೆಗಾಗಿ ಶಿರಸಿಯ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ್ದ ಶಾಸಕರು, ಬನವಾಸಿ ಸೇರಿದಂತೆ ತಮ್ಮ ಕ್ಷೇತ್ರದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರ ಗಮನ ಸೆಳೆದರು. ಕೃಷಿ ಬೆಳೆಗಳು, ರಸ್ತೆ, ಸೇತುವೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿಯಾಗಿದ್ದು, ಸಂತ್ರಸ್ತರಿಗೆ ತಕ್ಷಣ ಪರಿಹಾರ ವಿತರಿಸುವುದರ ಜೊತೆಗೆ ಹಾನಿಗೊಳಗಾದ ಕಾಮಗಾರಿಗಳ ದುರಸ್ತಿಯನ್ನು ತುರ್ತಾಗಿ ಕೈಗೊಳ್ಳುವಂತೆ […]

Continue Reading

ಕರಾವಳಿಯಲ್ಲಿ ಫಿಶಿಂಗ್ ಗೆ ದೋಣಿಗಳು, ಮೀನುಗಾರರಲಿ ಹೆಚ್ಚಿದ ಉತ್ಸಾಹ! ದಕ್ಕೆಯಲ್ಲಿ ಬಿರುಸಿನ ಚಟುವಟಿಕೆ

ಮಂಗಳೂರು: ಎರಡು ತಿಂಗಳ ಕಾಲ ಕರಾವಳಿಯ ಮೀನುಗಾರಿಕಾ ದಕ್ಕೆಗಳಲ್ಲಿ ನಿಶ್ಚಲವಾಗಿ ನಿಂತಿದ್ದ ಯಾಂತ್ರೀಕೃತ ಬೋಟ್‌ಗಳು ಮತ್ತೆ ಸಮುದ್ರದತ್ತ ಮುಖ ಮಾಡುವ ಕ್ಷಣ ಬಂದಿದ್ದರೂ, ಹವಾಮಾನ ಇಲಾಖೆಯ ಎಚ್ಚರಿಕೆ ಮೀನುಗಾರರ ಉತ್ಸಾಹಕ್ಕೆ ತಣ್ಣೀರೆರಚಿದೆ. 61 ದಿನಗಳ ಟ್ರಾಲಿಂಗ್ ನಿಷೇಧ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆಗಸ್ಟ್‌ ನಿಂದ ಆಳ ಸಮುದ್ರ ಮೀನುಗಾರಿಕೆ ಪುನರಾರಂಭಗೊಳ್ಳಬೇಕಿದ್ದರೂ, ಪ್ರತಿಕೂಲ ಹವಾಮಾನದಿಂದಾಗಿ ಬೋಟ್‌ಗಳು ಸಮುದ್ರಕ್ಕಿಳಿಯದ ಸಾಧ್ಯತೆ ಎದುರಾಗಿದೆ. ಮಂಗಳೂರು ಬಂದರಿನಲ್ಲಿ ಕಳೆದ ನಾಲ್ಕು ದಿನಗಳಿಂದಲೇ ಬಿರುಸಿನ ಸಿದ್ಧತೆಗಳು ನಡೆದಿವೆ. ಎರಡು ತಿಂಗಳ ವಿರಾಮದ ಬಳಿಕ ಮೀನುಗಾರರು, […]

Continue Reading

ಶಾಲೆ–ಕಾಲೇಜುಗಳ ಬಳಿ ಜಂಕ್ ಫುಡ್‌ಗೆ ಬ್ರೇಕ್: ಇಲಾಖೆಯ ಅಧಿಕೃತ ಆದೇಶ

ಬೆಂಗಳೂರು: ವಿದ್ಯಾರ್ಥಿಗಳಿಗೆ ಸುರಕ್ಷಿತ, ಗುಣಮಟ್ಟಯುತ ಹಾಗೂ ಆರೋಗ್ಯಕರ ಆಹಾರ ಲಭ್ಯ ಆಗುವಂತೆ ಮಾಡಲು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯೂ ಶಾಲೆ–ಕಾಲೇಜುಗಳ ಆವರಣ ಹಾಗೂ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್ ಫುಡ್‌ ಮತ್ತು ಅನಾರೋಗ್ಯಕರ ಆಹಾರ ಮಾರಾಟ ಮಾಡದಂತೆ ಅಧಿಕೃತ ಆದೇಶ ಹೊರಡಿಸಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮಾರ್ಗಸೂಚಿಯಂತೆ ಈ ಕ್ರಮ ಜುಲೈ 21 ರಿಂದ ಜಾರಿಗೆ ಬಂದಿದೆ ಎಂದು ಆರೋಗ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಜುಲೈ ತಿಂಗಳಲ್ಲಿ ರಾಜ್ಯದ […]

Continue Reading

ಭೂಕುಸಿತ ತೆರವು ಬಳಿಕ ಶಿರಾಡಿ ಘಾಟ್ ರೈಲು ಮಾರ್ಗ ಪುನರಾರಂಭ, ಪ್ರಯಾಣಿಕರಿಗೆ ನೆಮ್ಮದಿ

ಸುಬ್ರಮಣ್ಯ: ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ ಸ್ಥಗಿತಗೊಂಡಿದ್ದ ಮೈಸೂರು ವಿಭಾಗದ ಶಿರಿಬಾಗಿಲು–ಎಡಕುಮಾರಿ ನಡುವಿನ ಶಿರಾಡಿ ಘಾಟ್ ರೈಲು ಮಾರ್ಗದಲ್ಲಿ ರೈಲು ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಮರು ಆರಂಭಿಸಿದೆ. ಹಳಿ ಮೇಲಿನ ಮಣ್ಣು, ಕಲ್ಲು ಹಾಗೂ ಮರಗಳ ಅವಶೇಷಗಳನ್ನು ತೆರವುಗೊಳಿಸಿ ಸುರಕ್ಷತಾ ಪರಿಶೀಲನೆ ಪೂರ್ಣಗೊಳಿಸಿದ ಬಳಿಕ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ರೈಲ್ವೆ ಇಲಾಖೆ ಪ್ರಕಟಣೆಯ ಪ್ರಕಾರ, ಆಗಸ್ಟ್ 3ರಂದು ಸಂಜೆ 7.25ಕ್ಕೆ ಹಳಿ ಸುರಕ್ಷತಾ ತಪಾಸಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕ ತಜ್ಞರು ಮಾರ್ಗವನ್ನು ಸುರಕ್ಷಿತ ಎಂದು ಪ್ರಮಾಣೀಕರಿಸಿದ […]

Continue Reading

ಕಲಿಕಾ ತೊಂದರೆ ಇರುವ ಮಕ್ಕಳಿಗೆ ಒಂದೇಸೂರಿನಡಿ ವ್ಯವಸ್ಥೆ, ಅ. 8ಕ್ಕೆ ಉದ್ಘಾಟನೆ: ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ

ಮಂಗಳೂರು: ಸ್ವಲೀನತೆ ಹಾಗೂ ನಿರ್ದಿಷ್ಟ ಕಲಿಕಾ ತೊಂದರೆ ಹೊಂದಿರುವ ಮಕ್ಕಳಿಗೆ ಶಿಕ್ಷಣ, ಚಿಕಿತ್ಸೆ ಮತ್ತು ಕೌಶಲಾಭಿವೃದ್ಧಿಯನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮಂಗಳೂರಿನ ಶಕ್ತಿನಗರದ ಸಾನಿಧ್ಯ ಸಂಸ್ಥೆಯಲ್ಲಿ ಅರ್ಜುನ್ ಶೆಟ್ಟಿ ಸ್ಮರಣಾರ್ಥ ವಿಶೇಷ ಶಾಲೆ ಆರಂಭಿಸಲಾಗುತ್ತಿದ್ದು, ಶಾಲೆಯ ಉದ್ಘಾಟನಾ ಸಮಾರಂಭ ಇದೇ 8 ರಂದು ನಡೆಯಲಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅರ್ಜುನ್ ಶೆಟ್ಟಿ ಪ್ರತಿಷ್ಠಾನದ ಸ್ಥಾಪಕ ಸುಧೀರ್ ಶೆಟ್ಟಿ ಅವರು ತಿಳಿಸಿದರು. ತಮ್ಮ ಪುತ್ರ ಅರ್ಜುನ್ ಶೆಟ್ಟಿ ಅವರ ಸ್ಮರಣಾರ್ಥ ಈ ಶಾಲೆ ಆರಂಭಿಸಲಾಗುತ್ತಿದೆ. ಸ್ವಲೀನತೆ ಹಾಗೂ […]

Continue Reading

ಮಂಗಳೂರಿನಲ್ಲಿ ಇದೇ 7 ರಿಂದ ಯುರಾಲಜಿ ಸಮ್ಮೇಳನ, ಎಜೆ, ಯುರಾಲಜಿ ಫೋರಂ ಸಾರಥ್ಯ: ಡಾ. ಪ್ರಶಾಂತ್ ಮಾರ್ಲ

ಮಂಗಳೂರು: ಮೂತ್ರಶಾಸ್ತ್ರ ಕ್ಷೇತ್ರದ ಇತ್ತೀಚಿನ ಸಂಶೋಧನೆ, ಹೊಸ ತಂತ್ರಜ್ಞಾನ ಹಾಗೂ ವೈದ್ಯಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದಕ್ಷಿಣ ಭಾರತದ ಪ್ರತಿಷ್ಠಿತ ‘ಅಸೋಸಿಯೇಷನ್ ಆಫ್ ಸದರ್ನ್ ಯುರಾಲಜಿಸ್ಟ್ಸ್ 37ನೇ ವಾರ್ಷಿಕ ಸಮ್ಮೇಳನ ಇದೇ ಅ. 7 ರಿಂದ 9 ರವರೆಗೆ ಮಂಗಳೂರಿನ ಮೇರಿ ಹಿಲ್‌ನಲ್ಲಿ ಇರುವ ಪಾಲೇಮಾರ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಲಿದೆ ಎಂದು ಸಮ್ಮೇಳನಾ ಸಂಘಟನಾ ಸಮಿತಿ ಅಧ್ಯಕ್ಷ ಡಾ. ಪ್ರಶಾಂತ್ ಮಾರ್ಲ ಅವರು ಬುಧವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್ ಹಾಗೂ […]

Continue Reading

ಪ್ರಶ್ನೆ ಪತ್ರಿಕೆ ಸೋರಿಕೆ, ಕೆಇಎ, ಕೆಪಿಎಸ್‌ಸಿ ನೇಮಕಾರಿ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ನೀಡಿ: ಶಾಸಕ ಭರತ್ ಶೆಟ್ಟಿ

ಮಂಗಳೂರು: ರಾಜ್ಯದಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ನೇಮಕಾತಿ ಪರೀಕ್ಷೆಗಳಲ್ಲಿನ ಗೊಂದಲಗಳ ಕುರಿತು ಸಮಗ್ರ ತನಿಖೆ ನಡೆಸಲು ಕೆಇಎ, ಕೆಪಿಎಸ್‌ಸಿ ಸೇರಿದಂತೆ ಎಲ್ಲ ಇಲಾಖೆಗಳ ಪರೀಕ್ಷಾ ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ರಾಜ್ಯ ಸರ್ಕಾರ ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದೆ. ಕೇಂದ್ರದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಲೋಪ ಕಂಡು ಬಂದರೆ ಪ್ರಧಾನಿ ನರೇಂದ್ರ […]

Continue Reading

ಮತದಾರರ ಪಟ್ಟಿ ಪರಿಷ್ಕರಣೆ, ಶೇ 99.97 ಎನ್ಯುಮರೇಷನ್ ನಮೂನೆಗಳ ಡಿಜಿಟಲೀಕರಣ ಪೂರ್ಣ: ಅನ್ಬುಕುಮಾರ್

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಮನೆಮನೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಎನ್ಯುಮರೇಷನ್ ನಮೂನೆಗಳಲ್ಲಿ ಶೇ.99.97ರಷ್ಟು ಡಿಜಿಟಲೀಕರಣ ಪೂರ್ಣಗೊಂಡಿದೆ. ಇದೇ ವೇಳೆ, ಒಟ್ಟು ಮತದಾರರಲ್ಲಿ ಶೇ.20.02ರಷ್ಟು ಮಂದಿ ಗೈರು, ಸ್ಥಳಾಂತರ, ಮೃತರು, ನಕಲಿ ಹಾಗೂ ಇತರೆ (ಎಎಸ್‌ಡಿಡಿಒ) ವಿಭಾಗದಲ್ಲಿ ಗುರುತಿಸಲ್ಪಟ್ಟಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜೂನ್ 16ರ ಅಂಕಿ-ಅಂಶದ ಪ್ರಕಾರ ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದು, ಈ ಪೈಕಿ 1,10,97,426 ಮಂದಿ […]

Continue Reading