ಉ.ಕ ಜಿಲ್ಲೆಗೆ ಸಿಗದ ಮಂತ್ರಿ ಪದವಿ: ಮುನಿಸಿಕೊಂಡ ಮಂಕಾಳ ವೈದ್ಯಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ?

ಕಾರವಾರ: ಮಂತ್ರಿ ಸ್ಥಾನ ಸಿಗದೇ ಮುನಿಸಿಕೊಂಡಿದ್ದ ಶಾಸಕ ಮಂಕಾಳ ವೈದ್ಯ ಅವರಿಗೆ ಡೆಪ್ಯೂಟಿ ಸ್ಪೀಕರ್ ಸ್ಥಾನ ನೀಡುವುದಕ್ಕೆ ಮುಂದಾಗಿದ್ದು, ಅವರ ಮುನಿಸಿಗೆ ತುಪ್ಪ ಸವರಲು ಸಿಎಂ ಡಿಕೆಶಿ ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಮಂಕಾಳ ವೈದ್ಯರಿಗೆ ಡಿಕೆಶಿ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಕ್ಕೇ ಸಿಗುತ್ತದೆ ಎಂಬ ಉತ್ಸಾಹದಲ್ಲಿ ಇದ್ದವರಿಗೆ ಕೊನೆ ಗಳಿಗೆಯಲ್ಲಿ ಮಂತ್ರಿ ಮಂಡಳದ ಪಟ್ಟಿಯಿಂದಲೇ ಅವರ ಹೆಸರನ್ನು ತೆಗೆದು ಹಾಕಲಾಗಿತ್ತು. ಇದರಿಂದಾಗಿ ಮುನಿಸಿಕೊಂಡು ಜಿಲ್ಲೆ ಉಸ್ತುವಾರಿ ಲಕ್ಷ್ಮಣ ಸವದಿ […]

Continue Reading

ತಿಕ್ಕಾಟದ ಬಳಿಕ ಸಚಿವರಿಗೆ ಖಾತೆಯ ಹೊಣೆ, ರಾಮಲಿಂಗಾರೆಡ್ಡಿ, ಮುನಿಯಪ್ಪ ಖಾತೆ ಬದಲಾವಣೆ

ಬೆಂಗಳೂರು: ರಾಜಕೀಯ ಪ್ರತಿಷ್ಠೆಯ ತಿಕ್ಕಾಟದ ಬಳಿಕ ಸಚಿವ ಸಂಪುಟ ವಿಸ್ತರಣೆ ನಂತರ ಬುಧವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಕೆಲ ಸಚಿವರ ಖಾತೆಗಳನ್ನು ಸಹ ಬದಲಾವಣೆ ಮಾಡಲಾಗಿದೆ. ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಆಹಾರ ಇಲಾಖೆ ಸಚಿವರಾಗಿದ್ದ ಮುನಿಯಪ್ಪ ಅವರಿಗೆ ಸಮಾಜ ಕಲ್ಯಾಣ ಇಲಾಖೆ ನೀಡಲಾಗಿದೆ. ಯು.ಟಿ.ಖಾದರ್​​ಗೆ ಆರೋಗ್ಯ ಇಲಾಖೆ ಜತೆಗೆ ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ನೀಡಲಾಗಿದೆ. ಚಲುವರಾಯಸ್ವಾಮಿಗೆ ಬೃಹತ್ ಮತ್ತು ಮಾಧ್ಯಮ ನೀರಾವರಿ […]

Continue Reading

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿಯಾಗುವ ಅರ್ಜಿ ವಿಚಾರಣೆ; ದರ್ಶನ್‌ಗೆ ಮತ್ತಷ್ಟು ಸಂಕಷ್ಟ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಆಗಿರುವ ಪ್ರದೋಷ್‌, ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರ ನಡೆದಿದೆ. ಅರ್ಜಿಯನ್ನು ಪರಿಗಣಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ. ವಿಡಿಯೊ ಸಂವಾದದ ಮೂಲಕ ನಟ ದರ್ಶನ್‌, ಪವಿತ್ರಾ ಗೌಡ, ಪ್ರದೋಷ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಜಗದೀಶ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಹಿಂದಿನ ವಿಚಾರಣೆಯಲ್ಲಿ ಪ್ರದೋಷ್‌ […]

Continue Reading

‘ಆಟಿದ ಪೊರ್ಲು’ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಸುರತ್ಕಲ್ ಬಂಟರ ಸಂಘದ ಗುಣಗಾನ ಮಾಡಿದ ಐಕಳ ಹರೀಶ್ ಶೆಟ್ಟಿ

ಸುರತ್ಕಲ್: ಇಲ್ಲಿನ ಬಂಟರ ಸಂಘದ ಒಗ್ಗಟ್ಟು ಇತರ ಸಂಘ–ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ಸುರತ್ಕಲ್ ಬಂಟರ ಸಂಘ ಹಾಗೂ ಮಹಿಳಾ ವೇದಿಕೆ ಬಂಟರ ಸಂಘದ ಸಹಯೋಗದಲ್ಲಿ ಸುರತ್ಕಲ್ ಬಂಟರ ಭವನದಲ್ಲಿ ಆಯೋಜಿಸಿದ್ದ ‘ಆಟಿದ ಪೊರ್ಲು’ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಟಿ ತಿಂಗಳಲ್ಲಿ ಮನೆ ಮನೆಗೆ ತೆರಳಿ ಸಾಂಪ್ರದಾಯಿಕವಾಗಿ ಪ್ರದರ್ಶನ ನೀಡುವ ‘ಚಿಕ್ಕಮೇಳ’ವು ಗುತ್ತಿನ ಮನೆಯ ಚಾವಡಿಗೆ ಆಗಮಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. […]

Continue Reading

ಸ್ವಯಂಪ್ರೇರಿತ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿವೇತನ ವಿತರಣೆ

ಸುರತ್ಕಲ್: ಜಾತಿ, ಮತ, ಧರ್ಮದ ಭೇದ ಮರೆತು ರಕ್ತದಾನ ಮಾಡುವುದರಿಂದ ಹಲವು ಜೀವಗಳನ್ನು ಉಳಿಸಬಹುದು. ದಾನಗಳಲ್ಲಿ ರಕ್ತದಾನ ಶ್ರೇಷ್ಠವಾದುದು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ವೈ. ಶೆಟ್ಟಿ ಹೇಳಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್, ಬಿಎಎಸ್‌ಎಫ್ ಇಂಡಿಯಾ ಲಿಮಿಟೆಡ್, ಶ್ರೀರಾಮ್ ಫೈನಾನ್ಸ್ ಮಂಗಳೂರು ಹಾಗೂ ಸುರತ್ಕಲ್ ಪೊಲೀಸ್ ಠಾಣೆಯ ಆಶ್ರಯದಲ್ಲಿ, ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದಲ್ಲಿ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯ ವಜ್ರಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಹಾಗೂ […]

Continue Reading

ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಇಬ್ಬರು ಆರೋಪಿಗಳು 10 ದಿನ ಪೊಲೀಸ್ ವಶಕ್ಕೆ, ನ್ಯಾಯಾಲಯ ಆದೇಶ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಮೇಲಿನ ಗುಂಡಿನ ದಾಳಿ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶ ನೀಡಿದೆ. ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಬಂಧಿತ ಆರೋಪಿಗಳು. ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರನ್ನೂ ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ನೇತೃತ್ವದ ತಂಡ ನ್ಯಾಯಾಲಯಕ್ಕೆ ಹಾಜರುಪಡಿಸಿತು. […]

Continue Reading

ನ್ಯೂಯಾರ್ಕ್‌ನಲ್ಲಿ ಮಂಗಳೂರು ಮೂಲದ ಡಾ. ದಿನಕರ್ ರೈ ಅವರ ಗಾಲ್ಫ್ ಅಲೈನ್‌ಮೆಂಟ್ ಸಾಧನಗಳ ಪರಿಚಯ

ಮಂಗಳೂರು: ಗಾಲ್ಫ್ ಆಟದಲ್ಲಿ ನಿಖರತೆ ಮತ್ತು ಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಮಂಗಳೂರು ಮೂಲದ ಖ್ಯಾತ ರಕ್ತನಾಳ ಶಸ್ತ್ರಚಿಕಿತ್ಸಕ, ವಿಜ್ಞಾನಿ, ಕ್ರೀಡಾಪಟು ಹಾಗೂ ಆವಿಷ್ಕಾರಕ ಡಾ. ದಿನಕರ್ ಬಿ. ರೈ ಅಭಿವೃದ್ಧಿಪಡಿಸಿರುವ ‘ರೈಸ್ ಸೂಪರ್ ಟಿ’ ಮತ್ತು ‘ರೈಸ್ ಡಿವೈಸ್’ ಎಂಬ ಎರಡು ನೂತನ ಗಾಲ್ಫ್ ಅಲೈನ್‌ಮೆಂಟ್ ಸಾಧನಗಳನ್ನು ನ್ಯೂಯಾರ್ಕ್‌ನ ವಿಲೇಜ್ ಕ್ಲಬ್ ಆಫ್ ಲೇಕ್ ಸಕ್ಸೆಸ್‌ನಲ್ಲಿ ಜುಲೈ 25ರಂದು ಪರಿಚಯಿಸಲಾಯಿತು. ಕಾರ್ಯಕ್ರಮದಲ್ಲಿ ಗಾಲ್ಫ್ ಆಟಗಾರರು, ಕ್ಲಬ್ ಸದಸ್ಯರು, ವೃತ್ತಿಪರರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು. ಗಾಲ್ಫ್‌ನಲ್ಲಿ ಅತ್ಯಂತ ಪ್ರಮುಖವಾಗಿರುವ […]

Continue Reading

ಚೇತನ್ ಅಹಿಂಸಾಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

ಮಂಗಳೂರು: ಚಲನಚಿತ್ರ ನಟ ಹಾಗೂ ಪ್ರಗತಿಪರ ಚಿಂತಕ ಚೇತನ್ ಅಹಿಂಸಾ ಅವರು ಶನಿವಾರ ಮಂಗಳೂರಿಗೆ ಆಗಮಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಧ್ಯಯನ ಹಾಗೂ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ ಅವರು ಚೇತನ್ ಅಹಿಂಸಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು. ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆಯಿತು. ಜಿಲ್ಲಾ ಪರಿಶಿಷ್ಟ ಜಾತಿ ಮತ್ತು […]

Continue Reading

ಮುದರಂಗಡಿಯಲ್ಲಿ ಮಾಜಿ ಗ್ರಾ.ಪಂ ಅಧ್ಯಕ್ಷನ ಹತ್ಯೆಯ ಆರೋಪಿ ಬಂಧನ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡಿನ ಏಟು

ಪಡುಬಿದ್ರೆ: ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್ ಐ ತೇಜಸ್ವಿ ಹಾಗೂ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ ಐ ಪ್ರಸನ್ನ ಅವರ ನೇತೃತ್ವದ ತಂಡ ಕರೆತರುತ್ತಿದ್ದ ವೇಳೆ ಬೈಂದೂರು ಸಮೀಪದ ಒತ್ತಿನೆಣೆ ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ […]

Continue Reading

ಆಳ್ವಾಸ್ ಪ್ರಗತಿ–2026ಕ್ಕೆ ಚಾಲನೆ: ಮೊದಲ ದಿನ 13 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳ ಹಾಜರಿ

ಮೂಡುಬಿದಿರೆ: ದೇಶದ ಅತಿದೊಡ್ಡ ಉದ್ಯೋಗ ಮೇಳಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ‘ಆಳ್ವಾಸ್ ಪ್ರಗತಿ–2026’ರ 16ನೇ ಆವೃತ್ತಿಗೆ ಶುಕ್ರವಾರ ವಿದ್ಯಾಗಿರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಚಾಲನೆ ದೊರೆಯಿತು. ಮೊದಲ ದಿನವೇ 13,016 ಉದ್ಯೋಗಾಕಾಂಕ್ಷಿಗಳು ಮೇಳಕ್ಕೆ ಆಗಮಿಸಿದ್ದು, 326 ಕಂಪನಿಗಳು ಉದ್ಯೋಗ ನೇಮಕಾತಿಗಾಗಿ ಭಾಗವಹಿಸಿವೆ. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಬದಲಾಗುತ್ತಿರುವ ಉದ್ಯೋಗ ಕ್ಷೇತ್ರದ ಅಗತ್ಯಗಳಿಗೆ ತಕ್ಕಂತೆ ಯುವಜನರು ತಮ್ಮ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಿಕ್ಷಣ […]

Continue Reading