ವಿದ್ಯಾರ್ಥಿ–ಶಿಕ್ಷಕ–ಪಾಲಕರ ಸಮನ್ವಯದಿಂದ ಉತ್ತಮ ಫಲಿತಾಂಶ: ಮೋಹನ್ ಆಳ್ವ

ಮೂಡುಬಿದಿರೆ: ಸಂಗೀತದಲ್ಲಿ ಶ್ರುತಿ ತಪ್ಪಿದರೆ ಸುಮಧುರ ಗಾಯನವೂ ಅಪಸ್ವರವಾಗುತ್ತದೆ. ಅದೇ ರೀತಿ ವಿದ್ಯಾರ್ಥಿ ಜೀವನಕ್ಕೂ ಸರಿಯಾದ ಶ್ರುತಿ, ಲಯ ಮತ್ತು ದಿಕ್ಕು ಅಗತ್ಯ. ಜ್ಞಾನ, ಶಿಸ್ತು, ಮೌಲ್ಯ ಹಾಗೂ ಗುರಿಯೊಂದಿಗೆ ವಿದ್ಯಾರ್ಥಿಗಳ ಬದುಕನ್ನು ಶ್ರುತಿಬದ್ಧಗೊಳಿಸುವುದೇ ನಿಜವಾದ ಶಿಕ್ಷಣ. ಈ ಕಾರ್ಯದಲ್ಲಿ ಶಿಕ್ಷಣ ಸಂಸ್ಥೆಯ ಜತೆಗೆ ಪಾಲಕರ ಪಾತ್ರವೂ ಅತ್ಯಂತ ಮಹತ್ವದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ಶನಿವಾರ ನಡೆದ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿಜ್ಞಾನ […]

Continue Reading

ರಾಜ್ಯದಲ್ಲಿ ಬರ, ಅತಿವೃಷ್ಟಿಯಂತಹ ಹಲವು ಸಮಸ್ಯೆಗಳಿವೆ, ಇದು ಬಿಜೆಪಿಗೆ ಬೇಡ: ಸಚಿವ ಖಾದರ್

I love tootsie roll lemon drops bonbon. Cotton candy oat cake jelly beans bonbon dragée topping caramels lemon drops. Jelly beans apple pie carrot cake. Chocolate bar soufflé candy canes sweet roll.

Continue Reading

‘ಎರಡು ಹೊತ್ತು ಊಟಕ್ಕೂ ಹಣ ಇರಲಿಲ್ಲ; ಮನೆಯಲ್ಲಿ ಕರೆಂಟ್ ಕೂಡ ಇರಲಿಲ್ಲ’; ಬದುಕಿನ ಹೋರಾಟ ನೆನಪಿಸಿಕೊಂಡು ಭಾವುಕ ಉಪಸಭಾಪತಿ ಮಂಕಾಳ್ ವೈದ್ಯ

ಬೆಂಗಳೂರು: “ನಾನು ಹುಟ್ಟುವಾಗ ನಮ್ಮ ಮನೆಯಲ್ಲಿ ಕರೆಂಟ್ ಕೂಡ ಇರಲಿಲ್ಲ. ಎರಡು ಹೊತ್ತು ಊಟಕ್ಕೂ ಹಣ ಇರುತ್ತಿರಲಿಲ್ಲ. ಪಂಚಾಯಿತಿ ಸದಸ್ಯರೂ ಇಲ್ಲದ ಸಾಮಾನ್ಯ ಕುಟುಂಬದಿಂದ ಬಂದವನು ನಾನು…” ಎಂದು ವಿಧಾನಸಭೆಯಲ್ಲಿ ಉಪಸಭಾಪತಿ ಮಂಕಾಳ್ ವೈದ್ಯ ಅವರು ತಮ್ಮ ಬದುಕಿನ ಕಷ್ಟದ ದಿನಗಳನ್ನು ನೆನಪಿಸಿಕೊಂಡು ಭಾವುಕರಾದರು. ಭಟ್ಕಳದ ಸಾಮಾನ್ಯ ಕುಟುಂಬದಿಂದ ಬಂದು ವಿಧಾನಸಭೆಯ ಉಪಸಭಾಪತಿ ಸ್ಥಾನ ಅಲಂಕರಿಸಿರುವ ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಬದುಕಿನ ಪಯಣವನ್ನು ಅವರು ಸದನದಲ್ಲಿ ಮೆಲುಕು ಹಾಕಿದರು. ತಮ್ಮ ಬದುಕಿನಲ್ಲಿ ಹೊಟೇಲ್ ಹಾಗೂ ಗಾರ್ಮೆಂಟ್ಸ್‌ನಲ್ಲಿ […]

Continue Reading

ಜೀವ ಉಳಿಸಿದ ಲೇಡಿಗೋಷನ್ ಆಸ್ಪತ್ರೆಯ ‘ಬಹುಶಿಸ್ತೀಯ’ ಚಿಕಿತ್ಸೆ, ನಾಲ್ಕು ಗಂಟೆಗಳ ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಯಶಸ್ವಿ,, ತಾಯಿ, ಮಗು ಸೇಫ್

ಮಂಗಳೂರು: ಜೀವ ಮತ್ತು ಮರಣದ ನಡುವೆ ಹೋರಾಡುತ್ತಿದ್ದ 28 ವಾರಗಳ ಗರ್ಭಿಣಿಯೊಬ್ಬರ ಪ್ರಾಣವನ್ನು ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯರ ತಂಡ ಬಹುಶಿಸ್ತೀಯ ಚಿಕಿತ್ಸಾ ವಿಧಾನದ ಮೂಲಕ ಯಶಸ್ವಿಯಾಗಿ ಉಳಿಸಿದೆ. ಗರ್ಭಕೋಶದ ಹಿಂದಿನ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಗಾಯದ ಭಾಗ ಛಿದ್ರಗೊಂಡು ಆಂತರಿಕ ರಕ್ತಸ್ರಾವವಾಗಿದ್ದಲ್ಲದೆ, ಪ್ಲಾಸೆಂಟಾ ಪರ್ಕ್ರೀಟಾ ಎಂಬ ಗಂಭೀರ ತೊಡಕಿನಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದರೂ ತಾಯಿ ಹಾಗೂ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಏಳು ತಿಂಗಳ ಗರ್ಭಿಣಿ ಎರಡು ದಿನಗಳ ಹಿಂದೆ […]

Continue Reading

ಕೃತಕ ಪನ್ನೀರ್‌ ಸೇರಿದಂತೆ ಎಲ್ಲ ನಕಲಿ ಆಹಾರ ನಿಷೇಧ, ವಾಮ ಮಾರ್ಗಕ್ಕೆ ಬ್ರೇಕ್: ಸಚಿವ ಖಾದರ್

ಮಂಗಳೂರು: ಜನರ ಆರೋಗ್ಯದ ಜತೆಗೆ ಚೆಲ್ಲಾಟವಾಡುವ ಕೃತಕ ಹಾಗೂ ನಕಲಿ ಆಹಾರ ಪದಾರ್ಥಗಳ ಉತ್ಪಾದನೆ, ಬಳಕೆ ಮತ್ತು ಮಾರಾಟಕ್ಕೆ ಕಾನೂನಿನಲ್ಲಿ ಈಗಾಗಲೇ ನಿಷೇಧವಿದೆ. ಪನ್ನೀರ್‌ಗೆ ಸಂಬಂಧಿಸಿದಂತೆ ಜಾರಿಗೊಳಿಸಿರುವ ಕ್ರಮ ಕೇವಲ ಪನ್ನೀರ್‌ಗೆ ಸೀಮಿತವಾಗಿಲ್ಲ. ಆರೋಗ್ಯಕ್ಕೆ ಅಪಾಯ ಉಂಟು ಮಾಡುವ ಎಲ್ಲ ಬಗೆಯ ಕೃತಕ ಆಹಾರ ಪದಾರ್ಥಗಳಿಗೂ ಅನ್ವಯಿಸುತ್ತದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅಸಲಿ ಪನ್ನೀರ್‌ ಅನ್ನು ಸಂಪೂರ್ಣವಾಗಿ ಹಾಲಿನಿಂದ ತಯಾರಿಸಲಾಗುತ್ತದೆ. ಆದರೆ, ಕಡಿಮೆ ವೆಚ್ಚದಲ್ಲಿ ಹೆಚ್ಚಿನ ಲಾಭ ಗಳಿಸುವ ಉದ್ದೇಶದಿಂದ […]

Continue Reading

ಹಳೆಯಂಗಡಿ: ಬಸ್ ಪ್ರಯಾಣಿಕರ ಸಮಸ್ಯೆಗೆ ಮಿಡಿದ ಮೀಡಿಯಾ ಮನಸುಗಳು

ಹಳೆಯಂಗಡಿ: ಸ್ಥಳೀಯ ಅಡಳಿತ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಧೋಗತಿಗೆ ತಲುಪಿದ್ದ ಇಲ್ಲಿನ ಹೆದ್ದಾರಿ ಸರ್ವಿಸ್ ರಸ್ತೆಯ ಪ್ರಮುಖ ಬಸ್ ತಂಗುದಾಣವನ್ನು ಮಂಗಳೂರಿನ ‘ಮೀಡಿಯಾ ಮನಸುಗಳು’ ಸಂಘಟನೆಯ ಸದಸ್ಯರು ಸ್ವಚ್ಛಗೊಳಿಸುವ ಮೂಲಕ ಪ್ರಯಾಣಿಕರಿಗೆ ಆಸರೆಯಾಗಿದ್ದಾರೆ. ಒಂದು ವರ್ಷದಿಂದ ಹಳೆಯಂಗಡಿಯ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ನಿರ್ಮಿಸಲ್ಪಟ್ಟಿರುವ ಈ ಬಸ್ ತಂಗುದಾಣವು ಇತಿಹಾಸ ಪ್ರಸಿದ್ದ ಕಟೀಲು ದೇಗುಲ ಹಾಗೂ ಕಿನ್ನಿಗೋಳಿ ಕಡೆಗೆ ನಿತ್ಯ ಸಂಚರಿಸುವ ವಿದ್ಯಾರ್ಥಿಗಳು, ಮಹಿಳೆಯರು ಸಹಿತ ಸಾವಿರಾರು ಪ್ರಯಾಣಿಕರಿಗೆ ಅತ್ಯಂತ ಪ್ರಮುಖವಾಗಿದೆ. ರಿಕ್ಷಾ ಪಾರ್ಕ್ ಬಳಿ ಇರುವ ಕಟ್ಟಡದ ಶೌಚಾಲಯದ […]

Continue Reading

ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 131.14 ಕೋಟಿ ದಾಖಲೆಯ ಲಾಭ, ಶೇ 10.5ರಷ್ಟು ಡಿವಿಡೆಂಡ್: ಡಾ. ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) 2025–26ನೇ ಸಾಲಿನಲ್ಲಿ ಸಾರ್ವಕಾಲಿಕ ಗರಿಷ್ಠ ₹131.14 ಕೋಟಿ ಲಾಭ ಗಳಿಸಿದ್ದು, ಸದಸ್ಯ ಸಂಘಗಳಿಗೆ ಶೇ.10.5ರಷ್ಟು ಡಿವಿಡೆಂಡ್ ನೀಡುವುದಾಗಿ ಬ್ಯಾಂಕ್ ಅಧ್ಯಕ್ಷ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಘೋಷಿಸಿದರು. ಶನಿವಾರ ಬ್ಯಾಂಕಿನ ಸಭಾಭವನದಲ್ಲಿ ನಡೆದ 112ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಹಕಾರ ತತ್ವದ ಮೂಲ ಆಶಯಗಳಿಗೆ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ 112 ವರ್ಷಗಳ ಯಶಸ್ವಿ ಪಯಣ ಪೂರ್ಣಗೊಳಿಸಿ […]

Continue Reading

ಆಹಾರ ಸುರಕ್ಷತೆಗೆ ಜನರನ್ನೇ ಕಾವಲುಗಾರರನ್ನಾಗಿಸಲು ಸರ್ಕಾರದ ಚಿಂತನೆ: ಸಚಿವ ಯು.ಟಿ. ಖಾದರ್

ಮಂಗಳೂರು: ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಆಹಾರ ಸಂಸ್ಥೆಗಳಲ್ಲಿ ನಿಯಮ ಉಲ್ಲಂಘನೆ ತಡೆಯಲು ಅಧಿಕಾರಿಗಳು ಪ್ರತಿಬಾರಿ ದಾಳಿ ನಡೆಸುವುದಕ್ಕಿಂತ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಆಹಾರ ಸುರಕ್ಷತೆ ಕಾಪಾಡುವ ವ್ಯವಸ್ಥೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್‌ಗಳನ್ನು ರಚಿಸುವ ಚಿಂತನೆ ಇದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್‌ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಾಮಾಜಿಕ ಸೇವೆಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ 60 ವರ್ಷ ಮೇಲ್ಪಟ್ಟವರನ್ನೂ ಒಳಗೊಂಡಂತೆ ಆಸಕ್ತರನ್ನು ಈ ತಂಡಗಳಿಗೆ ಸೇರಿಸಿಕೊಳ್ಳಲಾಗುವುದು. ಆಹಾರ ಸುರಕ್ಷತೆ, ಆರೋಗ್ಯ ಮತ್ತು […]

Continue Reading

ಕ್ಯೂಆರ್ ಕೋಡ್ ಮೂಲಕ ದೂರು, ಮಂಗಳೂರಿನ ಫಳ್ನೀರ್ ಎಂಎಫ್‌ಸಿ ರೆಸ್ಟೋರೆಂಟ್‌ಗೆ ದಾಳಿ

ಮಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ವತಿಯಿಂದ ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಸ್ವೀಕರಿಸಿ, ಪರಿಶೀಲಿಸಲು ಹೊಸದಾಗಿ ಪರಿಚಯಿಸಲಾಗಿರುವ ಕ್ಯೂಆರ್ ಕೋಡ್ ವ್ಯವಸ್ಥೆಯ ಮೂಲಕ ಬಂದಿರುವ ದೂರಿನ ಆಧಾರದ ಮೇಲೆ ಪರಿಶೀಲನಾ ಕಾರ್ಯಾಚರಣೆ ನಡೆಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಫಳ್ನೀರ್ ರಸ್ತೆಯಲ್ಲಿರುವ ಎಂಎಫ್‌ಸಿ ರೆಸ್ಟೋರೆಂಟ್ ವಿರುದ್ಧ ಕ್ಯೂಆರ್ ಕೋಡ್ ಮೂಲಕ ಬಂದಿರುವ ದೂರಿನ ಮೇರೆಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ರೆಸ್ಟೋರೆಂಟ್‌ನ ಆಹಾರ ತಯಾರಿಕಾ ಸ್ಥಳ, ಆಹಾರ ಪದಾರ್ಥಗಳ […]

Continue Reading

ಪತ್ರಕರ್ತನ ಮೇಲೆ ಹಲ್ಲೆ: ಕುಂದಾಪುರ ಸರ್ಕಾರಿ ವೈದ್ಯ ಅಮಾನತು, ಕಮಿಷನರ್ ಆದೇಶ

ಉಡುಪಿ: ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಮಿಷನರ್ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಏಕಾಏಕಿ ಹಲ್ಲೆ ನಡೆಸುವ ಮೂಲಕ ಡಾ. ಮಹೇಂದ್ರ ಕುಮಾರ್ ಶೆಟ್ಟಿ ಅವರು ಸರ್ಕಾರಿ ಅಧಿಕಾರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ […]

Continue Reading