ರಾಹುಲ್ ಗಾಂಧಿ ವಿರುದ್ಧ ಯಶ್ ಪಾಲ ಸುವರ್ಣ ಹೇಳಿಕೆ, ವಿಕೃತ ಮನಸ್ಸಿನದ್ದು: ಸಚಿವ ಖಾದರ್

ಮಂಗಳೂರು: ಶಾಸಕ ಯಶ್ ಪಾಲ್ ಸುವರ್ಣರದ್ದು ನಾಲಾಯಕ್ ಹೇಳಿಕೆ. ಇದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿಲ್ಲ, ಯಾಕೆಂದರೆ ಅವರು ರಾಹುಲ್ ಗಾಂಧಿ ಕಾಲಿನ ಕಿರು ಬೆರಳಿಗೂ ಸಮವಲ್ಲ. ಅವರೆಲ್ಲಿ, ಇವರೆಲ್ಲಿ? ಇಂತಹ ಹೇಳಿಕೆಯಿಂದ ಏನು ಪ್ರಯೋಜನ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು. ಕರಾವಳಿಗೆ ಎಲ್ಲ ವಿಚಾರದಲ್ಲೂ ಘನತೆ, ಗೌರವ ಇದೆ. ಎಲ್ಲ ಪಕ್ಷದ ಶಾಸಕರು ಕರಾವಳಿ ಗೌರವವನ್ನು ಉಳಿಸಿಕೊಂಡು ಬಂದಿದ್ದಾರೆ. ಯಶ್ ಪಾಲ್ ಅವರ ಹೇಳಿಕೆ ಕಪ್ಪು ಚುಕ್ಕೆ ಆಗಿದ್ದು ಅವರದ್ದೇ […]

Continue Reading

ಸರಕಾರಿ ಆಸ್ಪತ್ರೆಗಳಲ್ಲಿ ಡಿಜಿಟಲ್ ಸ್ಪರ್ಶ, ಬ್ರಾಡ್‌ಬ್ಯಾಂಡ್ ಸಂಪರ್ಕ, ಕಾಗದ ರಹಿತ ವ್ಯವಸ್ಥೆ: ಸಚಿವ ಯು.ಟಿ. ಖಾದರ್

ಮಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ 183 ಸರಕಾರಿ ಆಸ್ಪತ್ರೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ನಿಟ್ಟಿನಲ್ಲಿ ಸಂಪೂರ್ಣ ಡಿಜಿಟಲ್ ಸ್ಪರ್ಶ ನೀಡಲಾಗುತ್ತದೆ. ಈಗಾಗಲೇ ನಾಲ್ಕು ಜಿಲ್ಲೆಯ 40 ಆಸ್ಪತ್ರೆಗಳಲ್ಲಿ ಪೈಲೆಟ್ ಯೋಜನೆ ಅಡಿಯಲ್ಲಿ ಇ ಹೆಲ್ತ್ ಸಾಫ್ಟವೇರ್ ಜೋಡಿಸುವ ಕೆಲಸ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸರ್ಕಾರಿ ಆರೋಗ್ಯ ಸೇವೆ ಹೆಚ್ಚು ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ […]

Continue Reading

ಯಶ್‌ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮ: ಡಾ. ಮಂಜುನಾಥ ಭಂಡಾರಿ

ಮಂಗಳೂರು: ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ನೀಡಿರುವ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಹಿತದ ಪರವಾಗಿ ನಡೆದ ಹೋರಾಟಕ್ಕೆ ಬೆಂಬಲ ನೀಡಿದ್ದ ರಾಹುಲ್ ಗಾಂಧಿ ವಿರುದ್ಧ ನಿರಾಧಾರ ಆರೋಪ ಹಾಗೂ ಬೆದರಿಕೆ ಹಾಕಿರುವುದು […]

Continue Reading

ರಾಹುಲ್ ಗಾಂಧಿ ವಿರುದ್ಧ ಹೇಳಿಕೆ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಪ್ರಕರಣ ದಾಖಲು

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹಾಗೂ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿದ ಆರೋಪದಡಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನಗರದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್‌ಪಾಲ್ ಸುವರ್ಣ ಅವರು ರಾಹುಲ್ ಗಾಂಧಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಕಾಂಗ್ರೆಸ್ ಮುಖಂಡರು ಕಾನೂನು […]

Continue Reading

500 ಕ್ಕೂ ಅಧಿಕ ಅಂಕ ಪಡೆದ ನೀಟ್ ಸಾಧಕರಿಗೆ ಎಕ್ಸಲೆಂಟ್ ಕಾಲೇಜಿನಲ್ಲಿ ಸನ್ಮಾನ

ಮೂಡುಬಿದಿರೆ: ನೀಟ್ ಪರೀಕ್ಷೆಯಲ್ಲಿ 500 ಕ್ಕೂ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ರಾಜ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರು ಮಾತನಾಡಿ, ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ನಿರ್ಧರಿಸಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಹಾಗೂ ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಬಹುದು ಎಂದರು. ಸಂಸ್ಥೆಯ […]

Continue Reading

ಬ್ಯಾಂಕ್ ಆಫ್ ಬರೋಡಾ ಹಣಕಾಸು ಸಾಧನೆ: ಜಾಗತಿಕ ವ್ಯವಹಾರ 30.50 ಲಕ್ಷ ಕೋಟಿಗೆ ಏರಿಕೆ

ಮುಂಬೈ: ಬ್ಯಾಂಕ್ ಆಫ್ ಬರೋಡಾ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶ ಪ್ರಕಟಿಸಿದ್ದು, ಬ್ಯಾಂಕ್‌ನ ಜಾಗತಿಕ ವ್ಯವಹಾರವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ15.4ರಷ್ಟು ಏರಿಕೆಯಾಗಿ 30,50,457 ಕೋಟಿಗೆ ತಲುಪಿದೆ. ಬ್ಯಾಂಕ್‌ನ ಜಾಗತಿಕ ಸಾಲ ವಿತರಣೆ ಶೇ17.4 ಹಾಗೂ ದೇಶೀಯ ಸಾಲ ವಿತರಣೆ ಶೇ16.1ರಷ್ಟು ಹೆಚ್ಚಳ ಕಂಡಿದೆ. ವಾಹನ ಸಾಲ ಶೇ 25.3, ಅಡಮಾನ ಸಾಲ ಶೇ 27.4, ಗೃಹ ಸಾಲ ಶೇ14.7 ಮತ್ತು ಶಿಕ್ಷಣ ಸಾಲ ಶೇ10.8ರಷ್ಟು ಬೆಳವಣಿಗೆ ದಾಖಲಿಸಿದೆ. ಚಿಲ್ಲರೆ, […]

Continue Reading

ಕ್ರಿಮ್ಸ್‌ಗೆ 200 ಎಂಬಿಬಿಎಸ್ ಸೀಟುಗಳ ಅನುಮೋದನೆ: 2026-27 ರಿಂದ ಹೆಚ್ಚುವರಿ ಪ್ರವೇಶ, ಹೊಸ ಆರೋಗ್ಯ ವಿಜ್ಞಾನ ಕೋರ್ಸ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಗೆ ಮಹತ್ವದ ಉತ್ತೇಜನ ದೊರೆತಿದ್ದು, 2026-27ನೇ ಶೈಕ್ಷಣಿಕ ವರ್ಷದಿಂದ ಒಟ್ಟು 200 ಎಂಬಿಬಿಎಸ್ ಸೀಟುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ), ನವದೆಹಲಿಯಿಂದ ಅನುಮೋದನೆ ಲಭಿಸಿದೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕಿ ಡಾ. ಪೂರ್ಣಿಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಕ್ರಿಮ್ಸ್‌ಗೆ 150 ಎಂಬಿಬಿಎಸ್ ಸೀಟುಗಳಿಗೆ ಮಾತ್ರ ಅನುಮತಿ ಇದ್ದು, ಇದೀಗ ಹೆಚ್ಚುವರಿ 50 ಸೀಟುಗಳನ್ನು ಮಂಜೂರು ಮಾಡಲಾಗಿದೆ. ಇದರಿಂದ ಮುಂದಿನ […]

Continue Reading

ರೋಹನ್ ಕಾರ್ಪೊರೇಷನ್‌ನಿಂದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ

ಮಂಗಳೂರು: ರೋಹನ್ ಕಾರ್ಪೊರೇಷನ್ ವತಿಯಿಂದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ನಗರದ ಬಿಜೈಯಲ್ಲಿರುವ ರೋಹನ್ ಸಿಟಿಯಲ್ಲಿ ವಿಶೇಷ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತರು ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ರೋಹನ್ ಕಾರ್ಪೊರೇಷನ್‌ನ ನಿರ್ದೇಶಕ ಡಿಯೋನ್ ಮೊಂಟೇರೊ ಹಾಗೂ ಮಹಾಪ್ರಬಂಧಕಿ ಸುಮನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ, ಕರಾವಳಿ ಭಾಗಕ್ಕೆ ರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ತಂದ ಸಾಧಕರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ‘ಮಿಥ್ಯ’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪಡೆದ ರೂಪಶ್ರೀ […]

Continue Reading

ಅಮೆರಿಕದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಆರೋಗ್ಯ ಸಚಿವ ಖಾದರ್

ಮಂಗಳೂರು: ಸಚಿವ ಯು.ಟಿ. ಖಾದರ್ ಅವರಿಗೆ ಅಮೆರಿಕದ ಇಲಿನಾಯ್ಸ್ ರಾಜ್ಯದ ನೇಪರ್ವಿಲ್ಲೆಯ ಯೆಲ್ಲೋ ಬಾಕ್ಸ್ ಸಭಾಂಗಣದಲ್ಲಿ ನಡೆದ ಅಮೆರಿಕನ್ ಬಹುಜನಾಂಗೀಯ ಆಯೋಗದ 15ನೇ ವಾರ್ಷಿಕ ಜಾಗತಿಕ ಸಾಧಕರ ಸನ್ಮಾನ ಸಮಾರಂಭದಲ್ಲಿ ಪ್ರತಿಷ್ಠಿತ ಜಾಗತಿಕ ನಾಗರಿಕ ನಾಯಕತ್ವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಅವರು ಮಾತನಾಡಿ, ಈ ಗೌರವ ತಮ್ಮ ಸಾರ್ವಜನಿಕ ಸೇವೆಗೆ ದೊರೆತ ಮಹತ್ವದ ಮಾನ್ಯತೆ ಆಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಜವಾಬ್ದಾರಿಯಿಂದ ಕೆಲಸ ಮಾಡಲು ಇದು ಪ್ರೇರಣೆ ನೀಡುತ್ತದೆ. ಈ ಪ್ರಶಸ್ತಿಯನ್ನು ಕರ್ನಾಟಕದ […]

Continue Reading

ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಡಾ. ಮೋಹನ್ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ. ಈ ಬಾರಿ ನುಡಿಸಿರಿ ಮತ್ತು ವಿರಾಸತ್ ಉತ್ಸವಗಳನ್ನು ಒಂದೇ ವೇದಿಕೆಯಲ್ಲಿ ನಡೆಸುವ ಮೂಲಕ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟ ಸಂಗಮಕ್ಕೆ ವೇದಿಕೆ ಕಲ್ಪಿಸಲಾಗುತ್ತಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ಉತ್ಸವದ ರೂಪುರೇಷೆಗಳ ಕುರಿತು ಸುದೀರ್ಘ […]

Continue Reading