ಚಿನ್ನಯ್ಯ ಜಾಮೀನು ರದ್ದತಿಗೆ ಮಟ್ಟಣ್ಣವರ್ ತಂಡದಿಂದ ಎಸ್ ಐಟಿಗೆ ಮನವಿ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಬೆನ್ನಲ್ಲೆ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ನೇತೃತ್ವದ ತಂಡವು ಬೆಳ್ತಂಗಡಿ ಎಸ್‌ಐಟಿ ದೂರು ಸಲ್ಲಿಸಿದೆ. ಎಸ್‌ಐಟಿ ಕಚೇರಿಗೆ ಭೇಟಿ ನೀಡಿದ ತಂಡ, ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿತು. ಅಲ್ಲದೆ, ಪ್ರಕರಣದ ಸತ್ಯಾಸತ್ಯತೆ ಹೊರಬರಲು ಚಿನ್ನಯ್ಯನನ್ನು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಒಳಪಡಿಸಬೇಕು ಎಂದು ಮನವಿ ಮಾಡಿತು. ಹೈಕೋರ್ಟ್‌ಗೆ ಸಲ್ಲಿಸಿರುವ ಹೇಳಿಕೆಯನ್ನು […]

Continue Reading

ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ: ಐವನ್ ಡಿಸೋಜ

ಮಂಗಳೂರು: ಬಿಜೆಪಿಯು ವೋಟ್ ಚೋರಿ ಜತೆಗೆ ಸೀಟ್ ಚೋರಿಯನ್ನೂ ನಡೆಸುತ್ತಿದ್ದು, ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಆರೋಪಿಸಿದರು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕರಿಸಿರುವ ಕ್ರಮ ಪ್ರಜಾಪ್ರಭುತ್ವದ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ ಎಂದರು. ಜಾರ್ಖಂಡ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ನಾಮಪತ್ರದ ದೋಷ ಸರಿಪಡಿಸಲು ಅವಕಾಶ ನೀಡಿದ್ದರೂ, ಮೀನಾಕ್ಷಿ ನಟರಾಜನ್ ಅವರಿಗೆ ಅದೇ ಅವಕಾಶ […]

Continue Reading

ಎಂಸಿಸಿ ಬ್ಯಾಂಕ್‌ಗೆ ಐತಿಹಾಸಿಕ ಶೇ 25 ರಷ್ಟು ಸಾಧನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಎಂಸಿಸಿ ಬ್ಯಾಂಕ್‌ನ 2025-26ನೇ ಹಣಕಾಸು ವರ್ಷದ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮಂಗಳೂರು ಧರ್ಮಪ್ರಾಂತ್ಯದ ಎಸ್ಟೇಟ್ ವ್ಯವಸ್ಥಾಪಕ ವಂ. ಫಾ. ಮ್ಯಾಕ್ಸಿಂ ರೊಸಾರಿಯೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಂಸಿಸಿ ಬ್ಯಾಂಕ್ ಕ್ಯಾಥೋಲಿಕ್ ಸಮುದಾಯದ ಹೆಮ್ಮೆ ಹಾಗೂ ಅಮೂಲ್ಯ ಸಂಸ್ಥೆ ಆಗಿದೆ. ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೋ ಅವರ ನಾಯಕತ್ವ, ನಿರ್ದೇಶಕರ ಮಂಡಳಿಯ ಮಾರ್ಗದರ್ಶನ ಹಾಗೂ ಸಿಬ್ಬಂದಿ ಸಮರ್ಪಿತ ಸೇವೆ ಶ್ಲಾಘಿಸಿದರು. ಅಧ್ಯಕ್ಷ ಅನಿಲ್ ಲೋಬೊ ಅವರು ಮಾತನಾಡಿ, 2025-26ನೇ […]

Continue Reading

ಮಾಣಿಲ ಶ್ರೀಧಾಮದಲ್ಲಿ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಗೆ ಸಿದ್ಧತೆ: ಮೋಹನದಾಸ ಪರಮಹಂಸ ಸ್ವಾಮೀಜಿ

ಮಂಗಳೂರು: ಮಾಣಿಲ ಶ್ರೀಧಾಮ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯಲಿರುವ 27ನೇ ವರ್ಷದ 48 ದಿನಗಳ ವರಮಹಾಲಕ್ಷ್ಮೀ ವ್ರತಾಚರಣೆಯ ಪೂರ್ವಭಾವಿ ಸಭೆ ಭಾನುವಾರ ನಡೆಯಿತು. ಈ ಸಂದರ್ಭದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಆರಾಧನೆ ಮತ್ತು ಆಧ್ಯಾತ್ಮಿಕ ಚಿಂತನೆಯ ಮೂಲಕ ಆತ್ಮೋನ್ನತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಇಂದಿನ ಸಮಾಜದಲ್ಲಿ ಮಾದಕ ವಸ್ತುಗಳ ಸೇವನೆಯ ಹೊರತಾಗಿಯೂ ಜನರು ದಾರಿ ತಪ್ಪುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಆಧ್ಯಾತ್ಮವೇ ಇದಕ್ಕೆ ಶಾಶ್ವತ ಪರಿಹಾರವಾಗಿದ್ದು, ಭಜನೆ, ಧ್ಯಾನ, ಯಾಗ, ಯಜ್ಞ […]

Continue Reading

ಹೆದ್ದಾರಿ ವಿಸ್ತರಣೆಗೆ ಬಲಿಯಾದ ಸುಂದರರಾಮ್ ಶೆಟ್ಟಿ ಸಮಾಧಿ: ದಿನೇಶ್ ಹೆಗ್ಡೆ ಉಳೆಪಾಡಿ ಆಕ್ರೋಶ

ಮಂಗಳೂರು: ಮೂಲ್ಕಿಯ ಬಪ್ಪನಾಡು ದೇವಸ್ಥಾನದ ಪ್ರವೇಶದ್ವಾರದ ಸಮೀಪವಿದ್ದ ಸಮಾಜ ಸೇವಕ ಹಾಗೂ ಬ್ಯಾಂಕಿಂಗ್ ಕ್ಷೇತ್ರದ ಹಿರಿಯ ವ್ಯಕ್ತಿತ್ವ ಸುಂದರರಾಮ್ ಶೆಟ್ಟಿ ಅವರ ಸಮಾಧಿಯನ್ನು ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿಯ ವೇಳೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ತೆರವುಗೊಳಿಸಿರುವುದನ್ನು ಖಂಡಿಸಲಾಗುತ್ತದೆ ಎಂದು ಅಭಿಮಾನಿ ಬಳಗದ ಪರ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು. ಸಮಾಧಿ ತೆರವುಗೊಳಿಸುವ ಮುನ್ನ ಕುಟುಂಬಸ್ಥರು, ಅಭಿಮಾನಿಗಳು ಹಾಗೂ ಸ್ಥಳೀಯರೊಂದಿಗೆ ಯಾವುದೇ ಸಮಾಲೋಚನೆ ನಡೆಸದಿರುವುದು ಬೇಸರದ ಸಂಗತಿ. ಸುಂದರರಾಮ್ ಶೆಟ್ಟಿ […]

Continue Reading

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ಜೋಸೆಫ್ ವಿಜಯ್, ರೇಷ್ಮೆ ಸೀರೆ, ಬೆಳ್ಳಿ ಖಡ್ಗ ಅರ್ಪಣೆ

ಕೊಲ್ಲೂರು (ಉಡುಪಿ ಜಿಲ್ಲೆ): ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸಿಎಂ ವಿಜಯ್ ಅವರು ದೇವಿಗೆ ವಿಶೇಷ ಕಾಣಿಕೆಗಳನ್ನು ಅರ್ಪಿಸಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಶಕ್ತಿ ದೇವತೆ ಮೂಕಾಂಬಿಕೆಗೆ ಸಿಎಂ ವಿಜಯ್ ಅವರು ರೇಷ್ಮೆ ಸೀರೆ, ಫಲ–ತಾಂಬೂಲ ಅರ್ಪಿಸಿದರು. ಸುಮಾರು ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ […]

Continue Reading

ಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ಅಮಿತ್ ಶಾ ಭೇಟಿ; ಪೊಲೀಸ್ ಭದ್ರತಾ ಬಲಪಡಿಸಲು ಕೇಂದ್ರದ ನೆರವು ಕೋರಿಕೆ

ನವದೆಹಲಿ: ಮುಖ್ಯಮಂತ್ರಿ ದಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ, ಭದ್ರತಾ ವ್ಯವಸ್ಥೆ ಹಾಗೂ ಪೊಲೀಸ್ ಇಲಾಖೆಯ ಆಧುನೀಕರಣಕ್ಕೆ ಸಂಬಂಧಿಸಿದ ಮಹತ್ವದ ಚರ್ಚೆ ನಡೆಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ದೆಹಲಿ ಪ್ರವಾಸ ಕೈಗೊಂಡಿರುವ ಅವರು ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಕೇಂದ್ರ ಸರ್ಕಾರದ ಸಹಕಾರವನ್ನು ಕೋರಿದರು. ರಾಜ್ಯದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ವಂಚನೆ ಮತ್ತು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಉದ್ದೇಶದಿಂದ ಸುಮಾರು […]

Continue Reading

ದ.ಕ ಜಿಲ್ಲೆಯಲ್ಲಿ ರೈತರ ಸಹಾಯಕ್ಕೆ ಕೃಷಿ ಇಲಾಖೆ ಸಜ್ಜು, ಬಿತ್ತನೆ ಬೀಜ, ಗೊಬ್ಬರ ದಾಸ್ತಾನು, ಎಂಒ 4 ಭತ್ತದ ತಳಿಗೆ ಬೇಡಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಬಿರುಸು ಪಡೆದುಕೊಂಡಿದ್ದು, ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಹದವಾದ ಮಳೆಯಿಂದಾಗಿ ಕೃಷಿಕರು ಭತ್ತದ ನಾಟಿ ಸೇರಿದಂತೆ ವಿವಿಧ ಕೃಷಿ ಕಾರ್ಯಗಳನ್ನು ಆರಂಭಿಸಿದ್ದಾರೆ. ಬೀಜ, ಗೊಬ್ಬರ ಖರೀದಿ ಭರಾಟೆ ಜೋರಾಗಿದೆ. ಜಿಲ್ಲೆಯಲ್ಲಿ 10 ಸಾವಿರ ಹೆಕ್ಟೇರ್ ಭತ್ತ ಬೆಳೆಯುವ ಕೃಷಿ ಭೂಮಿ ಇದ್ದು, 46 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ಕಾರ್ಯ ಆಗಿದೆ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲ್ಲೂಕಿನಲ್ಲಿ ಬಿತ್ತನೆ ಕಾರ್ಯ ಮಾಡಲಾಗಿದೆ. ಕೃಷಿ ಚಟುವಟಿಕೆಗಾಗಿ ರೈತರ ರೈತ […]

Continue Reading

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಎಲ್ಲರ ಹೊಣೆಗಾರಿಕೆ: ನ್ಯಾ. ಜೈಬುನ್ನೀಸಾ

ಮಂಗಳೂರು: ಬಾಲಕಾರ್ಮಿಕ ಎಂಬ ಸಾಮಾಜಿಕ ಪಿಡುಗನ್ನು ನಿರ್ಮೂಲನೆಗೊಳಿಸಲು ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಜಾಗೃತಿ ಜಾಥಾ ಅಥವಾ ಅಭಿಯಾನಗಳು […]

Continue Reading

ಗೃಹಲಕ್ಷ್ಮೀ ಹಣ ಪಾವತಿ ಸ್ಥಗಿತ, ರಾಜ್ಯ ಸರಕಾರದಿಂದ ಅನ್ಯಾಯ: ಶಾಸಕ ಭರತ್ ಶೆಟ್ಟಿ ಆರೋಪ

ಮಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯನ್ನು ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಲಕ್ಷಾಂತರ ಮಹಿಳೆಯರಿಗೆ ಅನ್ಯಾಯ ಮಾಡಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಆರೋಪಿಸಿದರು. ಚುನಾವಣೆ ಪೂರ್ವದಲ್ಲಿ ಬಿಪಿಎಲ್ ಅಥವಾ ಎಪಿಎಲ್ ಎಂಬ ಭೇದವಿಲ್ಲದೆ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ ಇದೀಗ ಬಿಪಿಎಲ್ ನೆಪ ಒಡ್ಡಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಹೊರಗಿಡುವ ಮೂಲಕ ಮಹಿಳೆಯರಿಗೆ ದ್ರೋಹ ಮಾಡಲಾಗಿದೆ ಎಂದು ಅವರು ಟೀಕಿಸಿದರು. ಗೃಹಲಕ್ಷ್ಮೀ ಯೋಜನೆಯಡಿ […]

Continue Reading