ಬಾಂಬ್ ಬೆದರಿಕೆ, ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಕೋರ್ಟ್‌ಗಳಲ್ಲಿ ಆತಂಕ; ಶೋಧ ಕಾರ್ಯ ಬಳಿಕ ಸುರಕ್ಷತೆ ಖಚಿತ
ಬೆಂಗಳೂರು: ಬಾಗಲಕೋಟೆ, ದಾವಣಗೆರೆ, ಧಾರವಾಡ ಹಾಗೂ ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಇ-ಮೇಲ್‌ಗಳ ಮೂಲಕ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 2 ಗಂಟೆಗೆ ಸ್ಫೋಟ ಸಂಭವಿಸುವುದಾಗಿ ಉಲ್ಲೇಖಿಸಲಾಗಿತ್ತು. ಚಿತ್ರದುರ್ಗದಿಂದ ಮೊದಲು ಈ ಸಂದೇಶ ಬಂದಿದ್ದು ಬಳಿಕ ಬಾಗಲಕೋಟೆಗೆ ರವಾನೆ ಆಗಿರುವುದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ […]
Continue Reading